ಸಂಸತ್ತಿನ ಎರಡು ಸದನದಿಂದ ಒಟ್ಟು 173 ಸಂಸದರ ಅಮಾನತು, ವಿವರ

ನವದೆಹಲಿ, ಡಿಸೆಂಬರ್‌ 19: ಅಶಿಸ್ತಿನ ನಡವಳಿಕೆ ಕಾರಣ ಸದನದಿಂದ 33 ಸಂಸದರು ಅಮಾನತುಗೊಂಡ ಒಂದು ದಿನದ ನಂತರ ಮಂಗಳವಾರ ಮತ್ತೆ ಫಾರೂಕ್ ಅಬ್ದುಲ್ಲಾ, ಸುಪ್ರಿಯಾ ಸುಳೆ, ಡಿಂಪಲ್ ಯಾದವ್ ಮತ್ತು ಶಶಿ ತರೂರ್ ಸೇರಿದಂತೆ ಪ್ರತಿಪಕ್ಷಗಳ 49 ಸಂಸದರನ್ನು ಲೋಕಸಭೆಯಿಂದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡಬೇಕು ಎಂದು ವಿರೋಧ ಪಕ್ಷದ ಸದಸ್ಯರು ತಮ್ಮ ಬೇಡಿಕೆಗಳ ಮೇಲೆ ಪ್ರಶ್ನೆಗಳನ್ನು ಎತ್ತಿ ಫಲಕಗಳನ್ನು ಪ್ರದರ್ಶಿಸಿದರು. ಬಳಿಕ ಸದನವು ಮುಂದೂಡಿದ ನಂತರ ಅವರನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.

A total of 173 MPs suspended from both Houses of Parliament, detail

49 ಲೋಕಸಭಾ ಸಂಸದರನ್ನು ಅಮಾನತುಗೊಳಿಸುವುದರೊಂದಿಗೆ ಉಭಯ ಸದನಗಳಿಂದ ಅಮಾನತುಗೊಂಡಿರುವ ವಿರೋಧ ಪಕ್ಷದ ಸಂಸದರ ಒಟ್ಟು ಸಂಖ್ಯೆ 173 ಕ್ಕೆ ಏರಿದೆ. ಬುಧವಾರದ ಅಮಾನತುಗೊಂಡವರೊಮದಿಗೆ ಲೋಕಸಭೆ ಮತ್ತು ರಾಜ್ಯಸಭೆಯ ಸಭಾಂಗಣಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಲ್ಪಟ್ಟವರ ಸಂಖ್ಯೆಯು ಚಳಿಗಾಲದ ಅಧಿವೇಶನ ಮುಕ್ತಾಯವಾಗುವವರೆಗೆ 92 ಆಗಿದೆ. ಚಳಿಗಾಲದ ಅಧಿವೇಶನ ಡಿಸೆಂಬರ್ 22 ರಂದು ಮುಕ್ತಾಯಗೊಳ್ಳಲಿದೆ.

ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಸದಸ್ಯರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಫಲಕಗಳನ್ನು ಪ್ರದರ್ಶಿಸಿದ ಕಾರಣಕ್ಕಾಗಿ ಸದಸ್ಯರನ್ನು ಅಮಾನತುಗೊಳಿಸಲಾಗಿದೆ. ಹೊಸ ಸಂಸತ್ತಿನ ಕಟ್ಟಡದಲ್ಲಿ ಅಶಿಸ್ತನ್ನು ಆಶ್ರಯಿಸುವುದಿಲ್ಲ ಎಂದು ಎಲ್ಲಾ ಸಂಸದರು ಒಪ್ಪಿಕೊಂಡಿದ್ದಾರೆ. ವಿರೋಧ ಪಕ್ಷದ ಸದಸ್ಯರು ನಿಯಮ ಉಲ್ಲಂಘಿಸಿ ಸಭಾಪತಿಗೆ ಅಗೌರವ ತೋರಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ಗುರಿಯಾಗಿಸಿಕೊಂಡು ಅವರು ಇತ್ತೀಚಿನ ವಿಧಾನಸಭಾ ಚುನಾವಣೆಯ ಫಲಿತಾಂಶಗಳಿಂದ ಹತಾಶರಾಗಿದ್ದಾರೆ. ಅಧ್ಯಕ್ಷ ತೆ ವಹಿಸಿದ್ದ ಬಿಜೆಪಿ ಸಂಸದ ರಾಜೇಂದ್ರ ಅಗರವಾಲ್‌, ಸಂಸದರ ಅಮಾನತಿಗೆ ಪ್ರಸ್ತಾವನೆ ಮಂಡಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

ಸಂಸತ್ತಿನ ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆಗೆ ವಿರೋಧ ಪಕ್ಷಗಳ ಆಗ್ರಹದ ಹಿನ್ನೆಲೆಯಲ್ಲಿ ಒಟ್ಟು 78 ಸಂಸದರು ಇದರಲ್ಲಿ ಲೋಕಸಭೆಯ 33 ಮತ್ತು ರಾಜ್ಯಸಭೆಯ 45 ಸೋಮವಾರದ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+