ಜಮ್ಮುವಿನಲ್ಲಿ ಭೀಕರ ರಸ್ತೆ ಅಪಘಾತ: ಓರ್ವ ಸಾವು
ಜಮ್ಮು, ಜುಲೈ 21: ಜಮ್ಮುವಿನ ಜಮ್ಮು- ಪಠಾಣ್ ಕೋಟ್ ಹೈವೇಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತನಾಗಿ, 22 ಜನ ಗಂಭೀರವಾಗಿ ಗಾಯಗೊಂಡ ಘಟನೆ ಇಂದು(ಜುಲೈ 21) ಬೆಳಗ್ಗೆ ನಡೆದಿದೆ.
ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗುತ್ತಿದೆ, ಬಸ್ಸಿನಲ್ಲಿ ಇನ್ನೂ ಕೆಲವರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ನಿನ್ನೆ(ಜುಲೈ 20) ತಾನೇ ಹಿಮಾಚಲ ಪ್ರದೇಶದ ಶಿಮ್ಲಾದ ರಾಯಪುರ ಕಣಿವೆಗೆ ಬಸ್ ಉರುಳಿದ ಪರಿಣಾಮ 28 ಜನ ಸಾವನ್ನಪ್ಪಿದ ದಾರುಣ ಘಟನೆ ನಡೆದಿತ್ತು.












Click it and Unblock the Notifications