ಬ್ಯಾಂಕ್ ಖಾತೆಗೆ, ಸಿಮ್ ಕಾರ್ಡ್ ಗೆ ಆಧಾರ್ ಕಡ್ಡಾಯ ಸಾಧ್ಯವಿಲ್ಲ: ಸುಪ್ರೀಂ

ನವದೆಹಲಿ, ಸೆಪ್ಟೆಂಬರ್ 26: ಮೊಬೈಲ್ ಸಿಮ್ ಕಾರ್ಡ್ ಸಂಪರ್ಕಕ್ಕೆ ಹಾಗೂ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಬುಧವಾರ ಹೇಳಿದೆ.

ಅಕ್ರಮ ಹಣ ವರ್ಗಾವಣೆ ತಡೆಗಾಗಿ ರೂಪಿಸಿದ ನಿಯಮದ ಪ್ರಕಾರ ಆಧಾರ್ ಹಾಗೂ ಬ್ಯಾಂಕ್ ಖಾತೆ ಜೋಡಣೆ ಕಡ್ಡಾಯ ಮಾಡಲಾಗಿತ್ತು. ಈಗ ಅದಕ್ಕೆ ಕೂಡ ಹಿನ್ನಡೆ ಆದಂತಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಗೆ ಹಾಗೂ ಪ್ಯಾನ್ ಕಾರ್ಡ್ ಪಡೆಯುವುದಕ್ಕೆ ಆಧಾರ್ ಕಡ್ಡಾಯ ಮಾಡಲಾಗಿದೆ.

Aadhaar linking of mobile connections, bank accounts cannot be made compulsory : SC

ಐವರು ನ್ಯಾಯಮೂರ್ತಿಗಳ ಪೈಕಿ ಒಬ್ಬರನ್ನು ಹೊರತುಪಡಿಸಿ ಉಳಿದವರು ಆಧಾರ್ ಕಾಯ್ದೆಯನ್ನು ಹಣಕಾಸು ಮಸೂದೆ ಎಂದು ಮಂಡಿಸಿದ್ದಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಅಲ್ಲಿಗೆ ಇನ್ನು ಮುಂದೆ ಪ್ಯಾನ್ ಕಾರ್ಡ್ ಗೆ ಅರ್ಜಿ ಹಾಕುವುದಕ್ಕೆ, ಆದಾಯ ತೆರಿಗೆ ರಿಟರ್ನ್ಸ್ ಗೆ ಆಧಾರ್ ಕಡ್ಡಾಯ ಮಾಡಲಾಗಿದ್ದು, ಉಳಿದಂತೆ ಬ್ಯಾಂಕ್ ಖಾತೆ, ಸಿಮ್ ಕಾರ್ಡ್ ಸೇರಿದಂತೆ ಖಾಸಗಿ ಸಂಸ್ಥೆ ಅಥವಾ ಕಂಪೆನಿಗಳಿಗೆ ಆಧಾರ್ ಕಡ್ಡಾಯವಲ್ಲ ಅಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+