ಉಪ್ರ: SSLC, PUC ಬೋರ್ಡ್ ಪರೀಕ್ಷೆ ಬರೆವ ವಿದ್ಯಾರ್ಥಿಗಳಿಗೆ ಆಧಾರ್ ಕಡ್ಡಾಯ!
ಲಕ್ನೋ, ನವೆಂಬರ್ 15: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಕಡ್ಡಾಯವಾಗಿ ಆಧಾರ್ ಕಾರ್ಡ್ ಅನ್ನು ತೋರಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹೇಳಿದೆ.
ಹಾಲ್ ಟಿಕೇಟ್ ಪಡೆಯುವ ಸಮಯದಲ್ಲೂ ಆಧಾರ್ ತೋರಿಸುವುದು ಕಡ್ಡಾಯವೆಂದು ಇಲ್ಲಿನ ಸರ್ಕಾರ ಹೇಳಿದೆ. 2018 ರ ಫೆಬ್ರವರಿಯಲ್ಲಿ ಬೋರ್ಡ್ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಆಧಾರ್ ನೀಡಬೇಕಿದೆ.

ಈಗಾಗಲೇ ಸರ್ಕಾರದ ಯೋಜನೆಗಳ ಉಪಯೋಗ ಪಡೆಯಲು ಆಧಾರ್ ಅನ್ನು ಕಡ್ಡಾಯಗೊಳಿಸಲಾಗಿದೆ. ಉತ್ತರ ಪ್ರದೇಶದ ಶಾಲೆಗಳಲ್ಲಿ 1 ರಿಂದ 8 ನೇ ತರಗತಿಯ ಮಕ್ಕಳಿಗೆ ಈಗಾಗಲೇ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಲಾಗಿದೆ.











Click it and Unblock the Notifications