Get Updates
Get notified of breaking news, exclusive insights, and must-see stories!

ಮರಣ ನೋಂದಣಿಗೆ ಆಧಾರ್ ನಂಬರ್ ಕಡ್ಡಾಯ

ನವದೆಹಲಿ, ಆ.4 : ಮರಣದ ನೋಂದಣಿ ಮತ್ತು ಪ್ರಮಾಣ ಪತ್ರವನ್ನು ಪಡೆಯಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗುತ್ತದೆ. 2017ರ ಅಕ್ಟೋಬರ್ 1ರಿಂದ ಈ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ.

ಶುಕ್ರವಾರ ಈ ಕುರಿತು ಆದೇಶ ಹೊರಡಿಸಲಾಗಿದೆ. ಗೃಹ ಇಲಾಖೆಯಡಿ ಕಾರ್ಯ ನಿರ್ವಹಣೆ ಮಾಡುವ ರಿಜಿಸ್ಟರ್ ಜನರಲ್ ಆಫ್ ಇಂಡಿಯಾ ಈ ಕುರಿತು ಹೇಳಿಕೆ ನೀಡಿದೆ. ಮರಣ ನೋಂದಣಿ ಸಂದರ್ಭದಲ್ಲಿ ಆಧಾರ್ ನಂಬರ್ ನೀಡಿದರೆ ವ್ಯಕ್ತಿಯ ಕುರಿತು ನೀಡುವ ನಿಖರತೆ ತಿಳಿಯಲು ಸಹಾಯಕವಾಗುತ್ತದೆ ಎಂದು ತಿಳಿಸಿದೆ.

Aadhaar mandatory for death certificates, will take effect on October 1

ಮೃತ ವ್ಯಕ್ತಿಯ ಕುರಿತು ಹಲವು ದಾಖಲೆಗಳನ್ನು ನೀಡುವ ಬದಲು ಆಧಾರ್ ಕಾರ್ಡ್ ನಂಬರ್ ನೀಡಿದರೆ ಸಾಕಾಗುತ್ತದೆ. ಅಕ್ಟೋಬರ್ 1ರಿಂದ ಈ ನಿಯಮವನ್ನು ಜಾರಿಗೆ ತರಲು ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಮತ್ತು ರಾಜ್ಯಗಳಿಗೆ ಸೂಚನೆ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರಾಜ್ಯಗಳಲ್ಲಿ ಈ ನಿಯಮ ಜಾರಿಗೆ ಬರಲಿದೆ. ಈ ಮೂರು ರಾಜ್ಯಗಳಲ್ಲಿ ನಿಯಮ ಜಾರಿಗೆ ಬರುವ ದಿನಾಂಕವನ್ನು ನಂತರ ಪ್ರಕಟಿಸಲಾಗುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+