ಆಧಾರ್ ಕಡ್ಡಾಯವಲ್ಲ: ಸುಪ್ರೀಂ ಪುನರುಚ್ಚಾರ
ನವದೆಹಲಿ,ಮಾ. 16: ಸರ್ಕಾರದ ಅನೇಕ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂಬ ಮಾತನ್ನು ಸೋಮವಾರ ಸುಪ್ರೀಂ ಕೋರ್ಟ್ ಮತ್ತೆ ಪುನರುಚ್ಚಾರ ಮಾಡಿದೆ.
2013 ರಲ್ಲಿ ನೀಡಿದ್ದ ಆದೇಶವನ್ನು ಪಾಲಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ತಿಳಿಸಿದೆ. ಈ ಹಿಂದೆ ಆಧಾರ್ ಕಾರ್ಡ್ ಕಡ್ಡಾಯ ಮಾಡಬೇಕು ಎಂದು ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಈಗ ಮತ್ತೆ ಅದೇ ತೀರ್ಮಾನವನ್ನುಎತ್ತಿ ಹಿಡಿದಿದೆ.[10 ದಿನದಲ್ಲಿ ಪಾಸ್ ಪೋರ್ಟ್ ಪಡೆಯುವುದು ಹೇಗೆ?]

ಗ್ಯಾಸ್ ಸಬ್ಸಿಡಿ, ಪಾಸ್ ಪೋರ್ಟ್ ಪಡೆಯಲು ಆಧಾರ್ ಕಾರ್ಡ್ ಅಗತ್ಯ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಆಧಾರ್ ಕಡ್ಡಾಯವಲ್ಲ ಎಂದು ತಿಳಿಸಿದೆ. [ಆಧಾರ್ ಕಾರ್ಡ್ ಮಾಡಿಸುವುದು ಹೇಗೆ?]
ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯದ ನಡುವಿನ ಗೊಂದಲದಲ್ಲಿ ನಾಗರಿಕರಿಗೆ ಸ್ಪಷ್ಟ ಸಂದೇಶ ರವಾನೆಯಾಗುತ್ತಿಲ್ಲ. ಒಮ್ಮೆ ಆಧಾರ್ ಬೇಕು, ಒಮ್ಮೆ ಆಧಾರ್ ಬೇಡ ಎಂಬ ದ್ವಿಮುಖ ನೀತಿಯಿಂದ ಮಹತ್ವಾಕಾಂಕ್ಷಿ ಯೋಜನೆ ಹಳ್ಳ ಹಿಡಿಯುತ್ತಿದೆ.












Click it and Unblock the Notifications