ದೆಹಲಿ ನಂತರ ಪಂಜಾಬ್ ಎಎಪಿ ಸರ್ಕಾರಕ್ಕೂ ಎದುರಾಯ್ತು ಸಂಕಷ್ಟ!
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸೋಲುತ್ತಿದ್ದಂತೆಯೇ ಆಮ್ ಆದ್ಮಿ ಪಾರ್ಟಿಗೆ ಪಂಜಾಬ್‌ನಲ್ಲೂ ಆತಂಕ ಎದುರಾಗಿದೆ. ಆಮ್ ಆದ್ಮಿ ಪಾರ್ಟಿಯ ಭದ್ರಕೋಟೆ ದೆಹಲಿಯಲ್ಲಿ ಎಎಪಿ ಸೋತಿದೆ. ಇದರ ಬೆನ್ನಲ್ಲೇ ಪಂಜಾಬ್ ಎಎಪಿಯಲ್ಲೂ ಬಿರುಕು ಮಾಡುತ್ತಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಎಎಪಿ ಹೀನಾಯ ಸೋಲು ಕಂಡಿದೆ. ಕಳೆದ ಎರಡು ಅವಧಿಯಿಂದಲೂ ಎಎಪಿ ದೆಹಲಿಯಲ್ಲಿ ಅಧಿಕಾರದಲ್ಲಿ ಇದೆ. ಇದೀಗ ಪಂಜಾಬ್‌ನಲ್ಲೂ ಬಿಕ್ಕಟ್ಟು ಎದುರಾಗಿದೆ ಎಂದು ಹೇಳಲಾಗುತ್ತಿದೆ. ಇದರ ವಿವರ ಇಲ್ಲಿದೆ.

ಎಎಪಿ ಈಗ ಆಡಳಿತದಲ್ಲಿರುವ ಏಕೈಕ ರಾಜ್ಯ ಎಂದರೆ ಅದು ಪಂಜಾಬ್. ದೆಹಲಿಯಲ್ಲಿ ಅಧಿಕಾರ ಹಿಡಿದ ಎಎಪಿ ನಿಧಾನವಾಗಿ ಪಂಜಾಬ್‌ನಲ್ಲೂ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿತ್ತು. ರೈತರ ಚಳುವಳಿ ಹಾಗೂ ದೆಹಲಿಯಲ್ಲಿ ಮೊದಲ ಅವಧಿಯಲ್ಲಿ ನೀಡಿದ್ದ ಉತ್ತಮ ಆಡಳಿತ ಎಎಪಿಯನ್ನು ಕೈಹಿಡಿದಿತ್ತು. ಆದರೆ ಇದೀಗ ಪಂಜಾಬ್‌ನಲ್ಲೂ ಎಎಪಿಗೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗುತ್ತಿದೆ. ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಂಜಾಬ್‌ನ ಸಚಿವರು ಮತ್ತು ಶಾಸಕರು ಸಹ ಇದ್ದರು.
ದೆಹಲಿಯಲ್ಲಿ ಕಳೆದ ಎರಡು ಅವಧಿಯಿಂದಲೂ ಎಎಪಿ ಸರ್ಕಾರ ಅಧಿಕಾರದಲ್ಲಿ ಇತ್ತು. ಆದರೆ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಮೂರನೇ ಬಾರಿ ಅಧಿಕಾರಕ್ಕೆ ಬರುವ ಎಎಪಿ ಕನಸು ಈಡೇರಿಲ್ಲ. ಈ ರೀತಿ ಇರುವಾಗಲೇ ಪಂಜಾಬ್‌ನಲ್ಲೂ ಎಎಪಿಗೆ ಸಂಕಷ್ಟ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಪಂಜಾಬ್ ಎಎಪಿ ಘಟಕದಲ್ಲಿ ಆಂತರಿಕ ಭಿನ್ನಾಭಿಪ್ರಾಯ ಜೋರಾಗಿದೆ ಇದೇ ಕಾರಣಕ್ಕೆ ಸಭೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್‌ನಲ್ಲೂ ಸಂಕಷ್ಟ: ದೆಹಲಿ ವಿಧಾನಸಭೆ ಚುನಾವಣೆಯ ಸೋಲು ಪಂಜಾಬ್ ಸರ್ಕಾರದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ. ಕಳೆದ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಂಜಾಬ್‌ನಲ್ಲಿ ಎಎಪಿ ಅಮೋಘ ಗೆಲುವು ಸಾಧಿಸಿತ್ತು. ಆದರೆ ಈ ರಾಜ್ಯದಲ್ಲಿ 2027ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಇದು ಅತ್ಯಂತ ಸವಾಲಿನಿಂದ ಕೂಡಿರಲಿದೆ ಎಂದು ಹೇಳಲಾಗುತ್ತಿದೆ. ಚುನಾವಣೆಗೆ ಇನ್ನೂ ಸುದೀರ್ಘ 2 ವರ್ಷ ಇರುವಾಗಲೇ ಇಲ್ಲಿ ಬಿಕ್ಕಟ್ಟು ಹಾಗೂ ಭಿನ್ನಾಭಿಪ್ರಾಯ ಜೋರಾಗಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರ ವಿರುದ್ಧ ಪಂಜಾಬ್‌ನ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಸಭೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.
ಆಮ್ ಆದ್ಮಿ ಪಾರ್ಟಿಯು ಅತ್ಯಂತ ಕಡಿಮೆ ಅವಧಿಯಲ್ಲಿ ರಾಷ್ಟ್ರೀಯ ಪಕ್ಷವಾಗಿ ಬೆಳೆಯಿತು. ಪ್ರಾದೇಶಿಕ ಪಕ್ಷದಿಂದ ರಾಷ್ಟ್ರೀಯ ಪಕ್ಷವಾಗಿ ಬದಲಾಯಿತು. ದೆಹಲಿಯ ನಂತರ ಪಂಜಾಬ್‌ನಲ್ಲೂ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿತ್ತು. ಈ ಪಕ್ಷವನ್ನು ಭಾರತದ ಸ್ಟಾರ್ಟ್ ಅಪ್ ಪಾರ್ಟಿ ಅಂತಲೇ ಕರೆಯಲಾಗುತ್ತದೆ. ಆದರೆ, ಈಗ ಈ ರಾಜ್ಯದಲ್ಲೂ ಸರ್ಕಾರ ಬೀಳುವ ಆತಂಕ ಎದುರಾಗಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications