Arvind Kejriwal: ದೆಹಲಿ ಚುನಾವಣೆ ಸೋತ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ
ನವದೆಹಲಿ, ಫೆಬ್ರವರಿ 26: ದೆಹಲಿ ಚುನಾವಣೆಯಲ್ಲಿ ಎಎಪಿ ಪಕ್ಷ ಸೋಲು ಕಂಡಿದ್ದು ರಾಷ್ಟ್ರ ರಾಜಧಾನಿಯ ಅಧಿಕಾರ ಬಿಜೆಪಿ ಪಾಲಾಗಿದೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 48, ಎಎಪಿ 22 ಸ್ಥಾನಗಳಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಯಾವುದೇ ಸೀಟು ಗೆದ್ದಿಲ್ಲ. ಎಎಪಿ ಚುನಾವಣೆ ಸೋಲುವುದು ಮಾತ್ರವಲ್ಲ ದೆಹಲಿ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಚುನಾವಣೆಯಲ್ಲಿ ನವದೆಹಲಿ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಸೋತಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ ಹೋಗಲಿದ್ದಾರೆಯೇ?. ಇಂತಹ ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಮೂಡಿದೆ. ಆದರೆ ಈ ಕುರಿತು ಎಎಪಿಯಾಗಲಿ, ಅರವಿಂದ್ ಕೇಜ್ರಿವಾಲ್ ಆಗಲಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಸುದ್ದಿಗಳನ್ನು ಪಕ್ಷ ತಳ್ಳಿಯೂ ಹಾಕಿಲ್ಲ.

ಕುತೂಹಲ ಮೂಡಿಸಿದ ಅಭ್ಯರ್ಥಿ ಘೋಷಣೆ: ಪಂಜಾಬ್ ರಾಜ್ಯದಲ್ಲಿ ಎಎಪಿ ಅಧಿಕಾರದಲ್ಲಿದೆ. ಲೂಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎಎಪಿ ಸಂಜೀವ್ ಅರೋರ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಹಾಲಿ ಸಂಜೀವ್ ಅರೋರ ರಾಜ್ಯಸಭಾ ಸದಸ್ಯರಾಗಿದ್ದು, ಅವರು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕಿದೆ.
ಸಂಜೀವ್ ಅರೋರ ಲೂಧಿಯಾನ ಮೂಲದ ಉದ್ಯಮಿ. 2022ರಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. ಲೂಧಿಯಾನ ಪಶ್ಚಿಮ ಕ್ಷೇತ್ರದ ಎಎಪಿ ಶಾಸಕರಾಗಿದ್ದ ಗುರುಪ್ರೀತ್ ಬಸ್ಸಿ ಗೋಗಿ ನಿಧನದಿಂದ ಉಪ ಚುನಾವಣೆ ಎದುರಾಗಿದ್ದು, ರಾಜ್ಯಸಭಾ ಸದಸ್ಯರಾದ ಸಂಜೀವ್ ಅರೋರ ಅವರನ್ನು ಎಎಪಿ ಅಭ್ಯರ್ಥಿಯಾಗಿ ಮಾಡಿದೆ.
2028ರ ತನಕ ಸಂಜೀವ್ ಅರೋರ ರಾಜ್ಯಸಭೆ ಸದಸ್ಯತ್ವದ ಅವಧಿ ಇದೆ. ಸಂಜೀವ್ ಅರೋರರನ್ನು ಪಂಜಾಬ್ ವಿಧಾನಸಭೆಗೆ ಆಯ್ಕೆ ಮಾಡಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಂಜೀವ್ ಅರೋರ ರಾಜೀನಾಮೆಯಿಂದ ತೆರವಾಗುವ ರಾಜ್ಯಸಭಾ ಸ್ಥಾನಕ್ಕೆ ಆಯ್ಕೆ ಮಾಡಲು ಎಎಪಿ ಚಿಂತನೆ ನಡೆಸಿದೆ ಎನ್ನುವ ಮಾಹಿತಿ ಇದೆ.
2025ರ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ 25,999 ಮತಗಳನ್ನು ಪಡೆದು 4089 ಮತಗಳ ಅಂತರದಿಂದ ಬಿಜೆಪಿಯ ಪರ್ವೇಶ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ. ಆದರೆ ಅರವಿಂದ್ ಕೇಜ್ರಿವಾಲ್ ಸೋಲಿಸಿದ ಪರ್ವೇಶ್ ಸಿಂಗ್ ಬದಲು ಬಿಜೆಪಿ ರೇಖಾ ಗುಪ್ತಾರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ.
ದೆಹಲಿ ಚುನಾವಣೆ ಸೋಲಿನ ಬಳಿಕ ಅರವಿಂದ್ ಕೇಜ್ರಿವಾಲ್ 2028ರ ಪಂಜಾಬ್ ರಾಜ್ಯದ ವಿಧಾನಸಭೆ ಚುನಾವಣೆ ತಯಾರಿಯಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದಾರೆ. ಅವರನ್ನು ಈಗ ರಾಜ್ಯಸಭೆಗೆ ಕಳಿಸಲು ಎಎಪಿ ಮುಂದಾಗಿದೆ.
ಅರವಿಂದ್ ಕೇಜ್ರಿವಾಲ್ ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಲಿದ್ದಾರೆಯೇ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಪಂಜಾಬ್‌ನ ಕಾಂಗ್ರೆಸ್ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಸಂಜೀವ್ ಅರೋರಾ ಬದಲಿಗೆ ಅರವಿಂದ್ ಕೇಜ್ರಿವಾಲ್ ರಾಜ್ಯಸಭೆಗೆ ಹೋಗುತ್ತಾರೆ ಎಂದು ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಸಂಜೀವ್ ಅರೋರಾ ಪಂಜಾಬ್ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಪಂಜಾಬ್‌ನಿಂದ ರಾಜ್ಯಸಭೆ ಅರವಿಂದ್ ಕೇಜ್ರಿವಾಲ್ ಸ್ಪರ್ಧಿದರೆ ಎಎಪಿ ಪಕ್ಷದ ಸರ್ಕಾರ ಇರುವ ರಾಜ್ಯದಿಂದ ಗೆಲುವು ಸಿಗಲಿದೆ. ನರೇಂದ್ರ ಮೋದಿ ಎದುರಿಸಲು ಕೇಜ್ರಿವಾಲ್ ರಾಜ್ಯಸಭಾ ಸದಸ್ಯರಾಗುವುದು ಉತ್ತಮ ಎಂಬ ಚರ್ಚೆಗಳು ಸಾಗಿವೆ.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications