Haryana Election: ಕಾಂಗ್ರೆಸ್ ಜೊತೆ ಮಾತುಕತೆ ವಿಫಲ; ಎರಡನೇ ಪಟ್ಟಿ ಬಿಡುಗಡೆ ಮಾಡಿದ ಎಎಪಿ

ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಏಕಾಂಗಿಯಾಗಿ ಸ್ಪರ್ಧೆ ಮಾಡುವುದು ಖಚಿತವಾಗಿದೆ. ಕಾಂಗ್ರೆಸ್ ಜೊತೆಗಿನ ಮಾತುಕತೆ ವಿಫವಾದ ಬೆನ್ನಲ್ಲೇ ಸೊಮವಾರ 20 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಎಎಪಿ, ಮಂಗಳವಾರ 9 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆ ವಿಫಲವಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ ಎಎಪಿ ಈಗಾಗಲೇ 29 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಸಧೌರಾ, ಥಾನೇಸರ್, ಇಂದ್ರಿ, ರಾತಿಯಾ, ಆದಂಪುರ್, ಬರ್ವಾಲಾ, ಬವಾಲ್, ಫರಿದಾಬಾದ್ ಮತ್ತು ತಿಗಾಂವ್ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ.

AAP Releases Second Candidate List for Haryana Assembly Elections

ಅಕ್ಟೋಬರ್ 5ರಂದು ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಎಎಪಿ ನಡುವೆ ತ್ರಿಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. 2019ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 46 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿತ್ತು. ಕಳೆದ ಬಾರಿ ಕಾಂಗ್ರೆಸ್ ಗೆದ್ದಿದ್ದ ಕ್ಷೇತ್ರಗಳಲ್ಲಿ ಕೂಡ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.

ಮುರಿದು ಬಿದ್ದ ಮೈತ್ರಿ!

ಇಂಡಿಯಾ ಒಕ್ಕೂಟದಲ್ಲಿ ಮಿತ್ರ ಪಕ್ಷವಾಗಿರುವ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳಲ್ಲ, ಎಎಪಿ ಸ್ವಂತ ಬಲದ ಮೇಲೆ ಸ್ಪರ್ಧೆ ಮಾಡಲಿದೆ ಎಂದು ಎಎಪಿ ಮೂಲಗಳು ದೃಢಪಡಿಸಿದೆ. ಹರಿಯಾಣ ಎಎಪಿ ಅಧ್ಯಕ್ಷ ಸುಶೀಲ್ ಗುಪ್ತಾ, ಎಲ್ಲಾ 90 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲು ಪಕ್ಷವು ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಿದ್ಧಾಂತವನ್ನು ಒಪ್ಪಿದವರಿಗೆ ಮತ್ತು ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಪಕ್ಷದ ಬಾಗಿಲು ಯಾವಾಗಲೂ ತೆರೆದಿರುತ್ತದೆ ಎಂದು ಹೇಳುವ ಮೂಲಕ ಬೇರೆ ಪಕ್ಷದ ನಾಯಕರಿಗೆ ಎಎಪಿ ಸೇರಲು ಪರೋಕ್ಷವಾಗಿ ಆಹ್ವಾನ ಕೊಟ್ಟಿದ್ದಾರೆ.

ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವುದು ಆಮ್ ಆದ್ಮಿ ಪಕ್ಷದ ಪ್ರಮುಖ ಗುರಿಯಾಗಿದೆ. ಹರಿಯಾಣ ಜನರು ಬಿಜೆಪಿ ಭ್ರಷ್ಟಾಚಾರದ ಆಡಳಿತದಿಂದ ಬೇಸತ್ತಿದ್ದು, ಅರವಿಂದ್ ಕೇಜ್ರಿವಾಲ್ ಅವರ ಸಿದ್ಧಾಂತಗಳಿಗೆ ಮೆಚ್ಚಿ ಆಮ್ ಆದ್ಮಿ ಪಕ್ಷಕ್ಕೆ ಬೆಂಬಲ ಕೊಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತ್ತು. 2019ರ ಚುನಾವಣೆಯಲ್ಲಿ ಇದರಲ್ಲಿ 12 ಕ್ಷೇತ್ರಗಳಲ್ಲಿ ಎಎಪಿ ಸೋಲು ಕಂಡಿತ್ತು. ಮತ್ತೊಂದು ಕಡೆ ಕಾಂಗ್ರೆಸ್ ಕೂಡ ನರೇಂಗರ್, ಅಸ್ಸಂದ್, ಉಚ್ಚನ ಕಲನ್, ಸಮಲ್ಖಾ, ಮೆಹಮ್, ಬಾದಶಹಪುರ್, ರೋಹ್ಟಕ್, ಬದ್ಲಿ, ಬೆರಿ, ಮಹೇಂದ್ರಗಢ, ದಬ್ವಾಲಿ ಮತ್ತು ಬಹದ್ದೂರ್‌ಗಢ ಸೇರಿದಂತೆ 12 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.

ಹರಿಯಾಣದ ಮಾಜಿ ಸಚಿವ ಪ್ರೊಫೆಸರ್ ಛತ್ರಪಾಲ್ ಸಿಂಗ್ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಇದು ಚುನಾವಣೆ ಸಂದರ್ಭದಲ್ಲಿ ಎಎಪಿ ಪಕ್ಷದ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+