Breaking News: ದೆಹಲಿ ಸಿಎಂ ಆತಿಶಿ ಮಾರ್ಲೆನಾ ಸಿಂಗ್ ಪ್ರಮಾಣ ವಚನಕ್ಕೆ ದಿನಾಂಕ ನಿಗದಿ

ನವದೆಹಲಿ, ಸೆಪ್ಟೆಂಬರ್ 19: ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಆಯ್ಕೆಯಾಗಿದ್ದಾರೆ. ಈಗ ಅವರ ಪ್ರಮಾಣ ವಚನ ಸಮಾರಂಭಕ್ಕೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್ ರಾಜೀನಾಮೆ ನೀಡಿದ್ದು, ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕಲ್ಕಾಜಿ ಕ್ಷೇತ್ರದ ಎಎಪಿ ಶಾಸಕಿ ಅತಿಶಿ ಮರ್ಲೆನಾ ಸಿಂಗ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಲೆಫ್ಟಿನೆಂಟ್ ಗೌರ್ನರ್‌ಗೆ ಸಹ ಪತ್ರವನ್ನು ನೀಡಲಾಗಿದೆ.

ಅತಿಶಿ ಮರ್ಲೆನಾ ಸಿಂಗ್ ಸೆಪ್ಟೆಂಬರ್ 21ರ ಶನಿವಾರ ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಗುರುವಾರ ತಿಳಿಸಿದೆ. ಶನಿವಾರ ಅವರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.

AAPs Atishi Marlena Singh Will Take Oath As Delhi Chief Minister On September 22

ಮಂಗಳವಾರ ನಡೆದ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅತಿಶಿ ಮರ್ಲೆನಾ ಸಿಂಗ್ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು. ಮಂಗಳವಾರ ಸಂಜೆ ಅರವಿಂದ ಕೇಜ್ರಿವಾಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸುಷ್ಮಾ ಸ್ವರಾಜ್, ಶೀಲಾ ದೀಕ್ಷಿತ್ ಬಳಿಕ ಅತಿಶಿ ಮರ್ಲೆನಾ ಸಿಂಗ್ ಮಹಿಳಾ ಮುಖ್ಯಂತ್ರಿಯಾಗಿ ದೆಹಲಿಯ ಆಡಳಿತ ನಡೆಸಲಿದ್ದಾರೆ.

ಅತಿಶಿ ಮರ್ಲೆನಾ ಸಿಂಗ್ ಅರವಿಂದ ಕೇಜ್ರಿವಾಲ್ ಮಾದರಿಯಲ್ಲಿಯೇ ದೆಹಲಿ ಸಚಿವ ಸಂಪುಟದಲ್ಲಿ ಹೆಚ್ಚು ಖಾತೆಗಳನ್ನು ಹೊಂದಿರಲಿದ್ದಾರೆ ಎಂದು ಪಕ್ಷ ತಿಳಿಸಿದೆ. 15 ದಿನದಲ್ಲಿ ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಗಳ ನಿವಾಸ ಮತ್ತು ಭದ್ರತೆಯನ್ನು ಬಿಟ್ಟುಕೊಡಲಿದ್ದು, ಸಾಮಾನ್ಯ ಜನರಂತೆ ಇರಲಿದ್ದಾರೆ ಎಂದು ಎಎಪಿ ಹೇಳಿದೆ.

ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಅತಿಶಿ ಮರ್ಲೆನಾ ಸಿಂಗ್ ದೆಹಲಿಯ ಮುಖ್ಯಮಂತ್ರಿಯಾಗುತ್ತಿದ್ದಾರೆ. ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಸವಾಲು ಅವರ ಮುಂದಿದೆ. 2020ರ ಫೆಬ್ರವರಿಯಲ್ಲಿ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಈಗ ದೆಹಲಿಯಲ್ಲಿ ಅವಧಿಗೂ ಮೊದಲೇ ಚುನಾವಣೆ ನಡೆಸಬೇಕು ಎಂದು ಎಎಪಿ ಪಕ್ಷ ಒತ್ತಾಯಿಸಿದೆ.

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪುಟದಲ್ಲಿದ್ದ ಏಕೈಕ ಮಹಿಳಾ ಸಚಿವೆ ಅತಿಶಿ ಮರ್ಲೆನಾ ಸಿಂಗ್. ಕಲ್ಕಾಜಿ ಕ್ಷೇತ್ರದ ಶಾಸಕಿಯಾದ ಅತಿಶಿ ಮರ್ಲೆನಾ ಸಿಂಗ್ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಜೈಲು ಸೇರಿದಾಗ ಹಲವು ಖಾತೆಗಳನ್ನು ಮತ್ತು ಪಕ್ಷದ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಿದ್ದರು.

ಎಎಪಿ ಪಕ್ಷದ ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಅತಿಶಿ ಮರ್ಲೆನಾ ಸಿಂಗ್ ಮುಂದಿನ ಮುಖ್ಯಮಂತ್ರಿಯಾಗಬಹುದು ಎಂದು ಅಂದಾಜಿಸಲಾಗಿತ್ತು. ಅದರಂತೆಯೇ ಎಎಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅರವಿಂದ ಕೇಜ್ರಿವಾಲ್ ಅತಿಶಿ ಮರ್ಲೆನಾ ಸಿಂಗ್ ಹೆಸರು ಪ್ರಸ್ತಾಪಿಸಿದ್ದರು.

ಅತಿಶಿ ಮರ್ಲೆನಾ ಸಿಂಗ್ ಜೂನ್ 8, 1981ರಲ್ಲಿ ಜನಿಸಿದರು. ಶೈಕ್ಷಣಿಕ ಕುಟುಂಬದ ಹಿನ್ನಲೆಯಿಂದ ಬಂದ ಇವರ ತಂದೆ ಮತ್ತು ತಾಯಿ ಇಬ್ಬರು ಸಹ ಪ್ರೊಫೆಸರ್‌ಗಳು. ಅತಿಶಿ ಮರ್ಲೆನಾ ಸಿಂಗ್ ಮೂಲ ಹೆಸರು ಮರ್ಲೇನಾ. ಆದರೆ 2018ರಲ್ಲಿ ಅವರು ಹೆಸರನ್ನು ಅತಿಶಿ ಎಂದು ಬದಲಾಯಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+