Delhi Elections 2025: ವಂಚನೆಯ ಮೂಲಕ ಚುನಾವಣೆಗಳನ್ನು ಗೆಲ್ಲಲು ಬಿಜೆಪಿ ಪ್ರಯತ್ನ: ಸಂಜಯ್ ಸಿಂಗ್

ನವದೆಹಲಿ, ಜನವರಿ 11: ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿ ಹಾಕುವ ಮೂಲಕ ವಾಮ ಮಾರ್ಗದಲ್ಲಿ ದಿಲ್ಲಿ ವಿಧಾನಸಭೆ ಚುನಾವಣೆ ಗೆಲ್ಲಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಎಎಪಿ ಮುಖಂಡ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವಿನ ಹೋರಾಟ ಇನ್ನೂ ಮುಗಿದಿಲ್ಲ. ರಾಜ್ಯದ ನವದೆಹಲಿ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಎಎಪಿ ಬಿಜೆಪಿ ವಿರುದ್ಧ ದೊಡ್ಡ ಆರೋಪ ಮಾಡಿದೆ. ಅಲ್ಲದೇ ಬಿಜೆಪಿ ಚುನಾವಣಾ ವಂಚನೆ ಮಾಡುವ ಮೂಲಕ ಚುನಾವಣೆಯಲ್ಲಿ ಗೆಲ್ಲಲು ಬಯಸುತ್ತಿದೆ ಎಂದು ಆರೋಪಿಸಿದೆ.

AAP s Sanjay Singh alleges BJP is trying to win polls through

ಕೇಂದ್ರ ಸಚಿವರು, ಬಿಜೆಪಿ ಸಂಸದರು ಮತ್ತು ನಾಯಕರು ಚುನಾವಣಾ ಆಯೋಗದ ಕಣ್ಣಿಗೆ ಮಣ್ಣು ಎರಚುವ ಪ್ರಯತ್ನವನ್ನ ಮಾಡುತ್ತಿದ್ದಾರೆ. ಚುನಾವಣಾ ಹಗರಣಗಳು ಮತ್ತು ವಂಚನೆಗಳನ್ನು ಮಾಡುತ್ತಿದ್ದಾರೆ. ನವದೆಹಲಿಯ ಬಿಜೆಪಿ ಅಭ್ಯರ್ಥಿ ಪ್ರವೇಶ್ ವರ್ಮಾ ಮಾಜಿ ಸಂಸದರು, ಹಾಲಿ ಸಂಸದರಲ್ಲ, ಆದರೂ ಅವರು ಮೇ ನಿಂದ ಜನವರಿ ವರೆಗೆ 8 ತಿಂಗಳ ಕಾಲ ಸಂಸದರ ಬಂಗಲೆಯನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿದರು.

ಇನ್ನೂ ಬಿಜೆಪಿ ಕುರಿತು ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಮಾತನಾಡಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿ ಹಾಕುವ ಮೂಲಕ ವಾಮ ಮಾರ್ಗದಲ್ಲಿ ದಿಲ್ಲಿ ವಿಧಾನಸಭೆ ಚುನಾವಣೆ ಗೆಲ್ಲಲು ಪ್ರಯತ್ನ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮೊದಲೇ ಬಿಜೆಪಿ ಸೋಲು ಒಪ್ಪಿಕೊಂಡಿದೆ. ಸಮರ್ಥ ಮುಖ್ಯಮಂತ್ರಿ ಅಭ್ಯರ್ಥಿಯಿಲ್ಲದೆ ವಾಮ ಮಾರ್ಗದ ಮೂಲಕ ಚುನಾವಣೆ ಗೆಲ್ಲಲು ಹವಣಿಸುತ್ತಿದೆ. ಇದಕ್ಕಾಗಿ ಮತದಾರರ ಪಟ್ಟಿಯನ್ನು ತಮಗಿಷ್ಟ ಬಂದಂತೆ ತಿದ್ದುಪಡಿ ಮಾಡಲು ಯತ್ನಿಸುತ್ತಿದೆ. ಬಿಜೆಪಿ ಕುತಂತ್ರ ಯಶಸ್ವಿಯಾಗಲು ಬಿಡುವುದಿಲ್ಲ ಎಂದು ಶಪಥ ಮಾಡಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ದಿಲ್ಲಿಯಾದ್ಯಂತ ಡಿಸೆಂಬರ್15 ರಿಂದ 'ಆಪರೇಷನ್‌ ಕಮಲ' ಕಾರ್ಯಾಚರಣೆ ನಡೆಸುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಐದು ಸಾವಿರ ಮತದಾರರ ಹೆಸರನ್ನು ಅಳಿಸಿ ಹಾಕಲು ಯತ್ನಿಸಿದೆ. ಹೊಸದಾಗಿ 7,500 ಮತದಾರರ ಹೆಸರನ್ನು ಸೇರ್ಪಡೆ ಮಾಡಲು ಸಂಚು ರೂಪಿಸಲಾಗಿದೆ. ನಾನು ಪ್ರತಿನಿಧಿಸುವ ಹೊಸದಿಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಇಂಥ ಪ್ರಯತ್ನಗಳು ನಡೆಯುತ್ತಿದ್ದು, ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಶೇ. 12ರಷ್ಟು ಮತದಾರರ ಹೆಸರನ್ನು ಅಕ್ರಮದ ಹೆಸರಿನಲ್ಲಿ ತೆಗೆದು ಹಾಕಲು ಮುಂದಾಗಿದೆ ಎಂದು ಅರವಿಂದ್‌ ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಪರಿಷ್ಕರಣೆಯಂತೆ ಪಟ್ಟಿ ಸಿದ್ದ

ಇನ್ನೂ ಆಮ್‌ ಆದ್ಮಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಚುನಾವಣಾ ಆಯೋಗ, ಕಳೆದ ಆಗಸ್ಟ್ 20 ರಿಂದ ಅಕ್ಟೋಬರ್‌ 18ರ ವರೆಗೆ ಮತದಾರರ ಪಟ್ಟಿ ಪರಿಷ್ಕರಿಸಲಾಗಿದೆ. ವಾಸಸ್ಥಳ ಬದಲಿಸಿದವರು ಬೇರೊಂದು ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಮೃತಪಟ್ಟವರ ಹೆಸರುಗಳನ್ನು ಗುರುತಿಸಿ, ಪಟ್ಟಿಯಿಂದ ತೆಗೆಯಲಾಗಿದೆ. ನೋಂದಣಿ ಮಾಡದವರ ಹೆಸರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ. ಮತದಾರರ ಕರಡು ಪಟ್ಟಿ ಸಂಬಂಧ ಅಕ್ಟೋಬರ್‌ 18ರವರೆಗೆ ಆಕ್ಷೇಪಣೆ ಸ್ವೀಕರಿಸಲಾಗಿದ್ದು, ದೂರು ದುಮ್ಮಾನಗಳನ್ನು ಆಲಿಸಿ, ಸಮಸ್ಯೆ ಪರಿಹರಿಸಲಾಗಿದೆ. 2025ರ ಜನವರಿ 26ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆ ಮಾಡಲಾಗುವುದು," ಎಂದು ಸ್ಪಷ್ಟನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+