Abhijeet Dipke: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಕೊನೆಗೂ ತಾತ್ಕಲಿಕ ರಿಲೀಫ್: ನೇಹಾ ಬೋರಾ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆಗೆ ಕೊನೆಗೂ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿಯ 'ಲೆಹ್ರಾ ದೋ ತಿರಂಗಾ' ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ, ಶುಕ್ರವಾರ ತಮ್ಮ ನಿವಾಸದ ಬಳಿ ಅಭಿಜೀತ್ ದೀಪ್ಕೆ ಅವರು ಬಂಧನಕ್ಕೊಳಗಾಗಿದ್ದರು. ಇದೀಗ ಅವರನ್ನು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್ 10 ರಂದು ಅವರು ನೀಡಿದ ಶಾಂತಿ (Peace Bond) ಬಾಂಡ್ ಉಲ್ಲಂಘಿಸಿದ ಆರೋಪದ ಮೇಲೆ ಶನಿವಾರ ಬೆಳಿಗ್ಗೆ ಅವರನ್ನು ಬಂಧಿಸಲಾಗಿತ್ತು. ಮತ್ತೊಂದು ಶಾಂತಿ ಬಾಂಡ್‌ಗೆ ಸಹಿ ಹಾಕಿದ ನಂತರ ಇದೀಗ ಅಭಿಜೀತ್ ದಿಪ್ಕೆ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Abhijeet Dipke CJP Founder Gets Temporary Relief Neha Bora Also Released After Detention

ಇನ್ನು ಶಾಂತಿ ಭಂಗವಾಗುವುದನ್ನು ತಡೆಯುವ ಉದ್ದೇಶದಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 126 ಮತ್ತು 170ರ ಅಡಿಯಲ್ಲಿ ಅಭಿಜೀತ್ ದೀಪ್ಕೆ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಶನಿವಾರ ಅವರನ್ನು ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಸಿಜೆಪಿಯ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಅವರು ಅಭಿಜೀತ್ ಅವರ ಬಂಧನದ ಕಾನೂನುಬದ್ಧತೆಯನ್ನು ಪ್ರಶ್ನಿಸಿ, ಮೂಲಭೂತ ಹಕ್ಕುಗಳು ಮತ್ತು ನೈಜ ಪ್ರಕ್ರಿಯೆಯ ಉಲ್ಲಂಘನೆಯನ್ನು ಆರೋಪಿಸಿ ಅವರನ್ನು ತಕ್ಷಣ ಬಿಡುಗಡೆ ಮಾಡಲು ಆದೇಶಿಸುವಂತೆ ಎಸ್‌ಇಎಂ ನ್ಯಾಯಾಲಯವನ್ನು ಒತ್ತಾಯಿಸಿದ್ದರು. ಇದಾದ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇನ್ನು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರತ್ನಾ ಸಿಂಗ್ ಅವರು, ನಾಗರಿಕರನ್ನು ಶಾಂತಿಯುತ ರಾಷ್ಟ್ರೀಯ ಪ್ರತಿಭಟನೆಯಲ್ಲಿ ಭಾಗವಹಿಸಲು ಒತ್ತಾಯಿಸುವುದನ್ನು ಅಪರಾಧವೆಂದು ಹೇಗೆ ಪರಿಗಣಿಸಬಹುದು ಎಂದು ಸಿಂಗ್ ಅವರು ಪ್ರಶ್ನಿಸಿದ್ದಾರೆ. ಅಲ್ಲದೆ ಅಭಿಜೀತ್ ದಿಪ್ಕೆ ಅವರನ್ನು ಬಂಧಿಸುವುದು ಕಾನೂನುಬಾಹಿರ ಪ್ರಕ್ರಿಯೆ ಆಗಿದೆ. ಎಸ್‌ಇಎಂ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ನಿಗದಿಯಾಗಿದ್ದ ಲೆಹ್ರಾ ದೋ ತಿರಂಗ ರ್ಯಾಲಿಯನ್ನು ಮುನ್ನಡೆಸದಂತೆ ತಡೆಯಲು ದೆಹಲಿ ಪೊಲೀಸರು ಶುಕ್ರವಾರ ಅಭಿಜೀತ್ ದಿಪ್ಕೆ ಅವರನ್ನು ಬಂಧಿಸಿದ್ದರು. ಅಧಿಕಾರಿಗಳು ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ಅನ್ನು ಅನ್ವಯಿಸಿ, ಮಧ್ಯ ದೆಹಲಿಯಲ್ಲಿ ಸಾರ್ವಜನಿಕ ಸಭೆಗಳ ವಿರುದ್ಧ ಕಠಿಣ ನಿಷೇಧಾಜ್ಞೆಗಳನ್ನು ವಿಧಿಸಿದ್ದರು.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಚುನಾವಣಾ ಆಯೋಗದ ವಿರುದ್ಧ ವ್ಯಾಪಕ ಹೋರಾಟದ ನಡುವೆ ಪ್ರತಿಭಟನೆಗಳು ನಡೆದಿದ್ದು. ಪೊಲೀಸರ ಎಚ್ಚರಿಕೆಯನ್ನು ಲೆಕ್ಕಿಸದೆ ಜನರು ಸೇರಿದೆ. ಅಲ್ಲದೆ ನಿಷೇಧಾಜ್ಞೆಗಳನ್ನು ಉಲ್ಲಂಘಿಸಿದ ಸುಮಾರು 150 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಮತ್ತು ಹಲವಾರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಜಂತರ್ ಮಂತರ್ ಪ್ರದೇಶಕ್ಕೆ ಪ್ರವೇಶಿಸಲು ಪ್ರಯತ್ನಿಸಿದ ನಂತರ ಸಿಜೆಪಿ ಕಾರ್ಯಕರ್ತರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

Abhijeet Dipke: ನೇಹಾ ಬೋರಾ ಬಿಡುಗಡೆ

ಶುಕ್ರವಾರ ಕನ್ನಾಟ್ ಪ್ಲೇಸ್‌ನಲ್ಲಿ ನಡೆದ 'ಲೆಹ್ರಾ ದೋ ತಿರಂಗಾ' ಪ್ರತಿಭಟನಾ ಮೆರವಣಿಗೆಯ ಸಂದರ್ಭದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು. ಕನ್ನಾಟ್ ಪ್ಲೇಸ್ ಕಡೆಗೆ ಹೋಗುತ್ತಿದ್ದಾಗ ಬೋರಾ ಅವರನ್ನು ಮಂಡಿ ಹೌಸ್‌ನಲ್ಲಿ ಮತ್ತು ಝಂಡೆವಾಲನ್‌ನಲ್ಲಿರುವ ಅಭಿಜೀತ್ ದೀಪ್ಕೆ ಅವರನ್ನು ಪೊಲೀಸರು ಬಂಧಿಸಿದ್ದರು. ದೆಹಲಿ ಪೊಲೀಸರು ಶನಿವಾರ ಬೆಳಿಗ್ಗೆ ಬೋರಾ ಅವರನ್ನು ಬಿಡುಗಡೆ ಮಾಡಿದ್ದಾರೆ.

ಬಿಡುಗಡೆಯಾದ ನಂತರ, ಬೋರಾ ದೆಹಲಿ ಪೊಲೀಸರು ಮತ್ತು ಕೇಂದ್ರದ ಬಿಜೆಪಿ ಸರ್ಕಾರವನ್ನು ಟೀಕಿಸಿದರು, ಬಂಧನಗಳನ್ನು "ಕಾನೂನುಬಾಹಿರ" ಎಂದು ಕರೆದರು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅನ್ನು ಕೊನೆಗೊಳಿಸಬೇಕೆಂದು ಅವರು ಒತ್ತಾಯಿಸಿದರು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ, ದೋಷಾರೋಪಣೆ ಮತ್ತು ಜೈಲು ಶಿಕ್ಷೆಗೆ ಒತ್ತಾಯಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+