• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಂ 370 ರದ್ದು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಮೊದಲ ಅರ್ಜಿ

|

ನವದೆಹಲಿ, ಆಗಸ್ಟ್ 07: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಅಧಿಕಾರ ನೀಡುವ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿನಲ್ಲಿ ಪಿಟೀಷನ್ ಹಾಕಲಾಗಿದೆ.

ಈ ಕಲಂ ರದ್ದುಪಡಿಸುವ ಅಧಿಕಾರ ರಾಷ್ಟಪತಿಗಿದೆ ಈ ನಿಬಂಧನೆಯು ಕೇವಲ ತಾತ್ಕಾಲಿಕವಾಗಿರುವ ಕಾರಣ ಯಾವುದೇ ಸಂದರ್ಭದಲ್ಲಿ ರದ್ದುಪಡಿಸಬಹುದು. ಈ ವಿಧಿ ರಚಿಸುವಾಗಲೇ ಇದೊಂದು ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಯಾವಾಗ ಬೇಕಾದರೂ ರದ್ದುಪಡಿಸಬಹುದು ಎಂದು ಸ್ಪಷ್ಟಪಡಿಸಲಾಗಿದೆ. ಭಾರತದ ರಾಷ್ಟ್ರಪತಿಯವರು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ರದ್ದುಪಡಿಸುವ ಅಧಿಕಾರ ಹೊಂದಿದ್ದಾರೆ.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

ಆದರೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಪರಿಚ್ಛೇದ ತಿದ್ದುಪಡಿಗಾಗಿ ಸಂಸತ್ ಮಾರ್ಗವನ್ನು ಕೇಂದ್ರ ಸರ್ಕಾರ ಅನುಸರಿಸಿದ್ದು ಸರಿಯಲ್ಲ ಎಂದು ವಕೀಲ ಎಂಎಲ್ ಶರ್ಮ ಅವರು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಹಾಕಿದ್ದಾರೆ. ರಾಷ್ಟ್ರಪತಿಗಳಿಗೆ ಇರುವ ಪರಮಾಧಿಕಾರವನ್ನು ಸರ್ಕಾರ ತನ್ನ ಅನುಕೂಲಕ್ಕೆ ದುರುಪಯೋಗ ಪಡಿಸಿಕೊಂಡು ಅಸಂವಿಧಾನಿಕ ಕ್ರಮಗಳ ಮೂಲಕ ಕಣಿವೆ ರಾಜ್ಯದ ಅಧಿಕಾರ ಕಿತ್ತುಕೊಂಡಿದೆ ಎಂದು ಅರ್ಜಿಯಲ್ಲಿ ವಕೀಲರು ಹೇಳಿದ್ದಾರೆ.

ಆರ್ಟಿಕಲ್ 370ರದ್ದು ಪಡಿಸಲು ಅರ್ಜಿಗಳು :

ರಾಷ್ಟ್ರಪತಿಗಳನ್ನು ಉದ್ದೇಶಿಸಿ ಬರೆದಿರುವ 'ಕಾಂಪೈನ್ ಟು ಅಬಾಲಿಷ್ ಆರ್ಟಿಕಲ್ 370' ಅರ್ಜಿಗೆ ಆನ್ ಲೈನ್ ಅರ್ಜಿಗೆ 3 ಲಕ್ಷದ ತನಕ ಸಹಿ ಬಿದ್ದಿತ್ತು. 'ಜಮ್ಮು ಕಾಶ್ಮೀರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ. ಅತ್ಯಂತ ಹಿಂದುಳಿದಿದೆ. ಇದಕ್ಕೆ 370ನೇ ವಿಧಿಯೇ ಕಾರಣ ಎಂದು ಈ ವಿಧಿ ರದ್ದುಪಡಿಸಲು ಆಗ್ರಹಿಸುತ್ತಿರುವವರು ವಾದ ಮಂಡಿಸುತ್ತಾರೆ' ಎಂದು ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ್ ಅವರು ಈ ಹಿಂದೆ ಅರ್ಜಿ ಸಲ್ಲಿಸಿದ್ದರು.

ಒಂದು ರಾಷ್ಟ್ರ, ಒಂದು ಸಂವಿಧಾನ, ಒಂದು ರಾಷ್ಟ್ರಗೀತೆ ಹಾಗೂ ಒಂದು ರಾಷ್ಟ್ರಧ್ವಜ ಎಂಬ ಪರಿಕಲ್ಪನೆಗೆ ವ್ಯತಿರಿಕ್ತವಾದ ಪರಿಸ್ಥಿತಿಯನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಣಬಹುದಾಗಿತ್ತು. ಇತರೆ ರಾಜ್ಯಗಳಿಗಿಂತ ಹೆಚ್ಚಿನ ಅನುದಾನ ಹಾಗೂ ಕಾಳಜಿ ಕಣಿವೆ ರಾಜ್ಯದ ಮೇಲೆ ಎಲ್ಲಾ ಸರ್ಕಾರಗಳು ನೀಡುತ್ತಾ ಬಂದರೂ ಅಲ್ಲಿನ ಪರಿಸ್ಥಿತಿ ಸುಧಾರಿಸಿರಲಿಲ್ಲ. ಹೀಗಾಗಿ, ತಾತ್ಕಾಲಿಕವಾಗಿ ಜಾರಿಗೆ ಬಂದ ಪರಿಚ್ಛೇದ 370(3) ರ ಅಗತ್ಯ ಈಗ ಇಲ್ಲ ಎಂದು ಸರ್ಕಾರ ಕ್ರಮ ಜರುಗಿಸಿದ್ದು, ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಂದು ಸಾರ್ವಜನಿಕ ಅಧಿಸೂಚನೆ ಹೊರಡಿಸುವ ಮೂಲಕ ರದ್ದುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿದರು.

ಜಮ್ಮು ಮತ್ತು ಕಾಶ್ಮೀರ ನಿವಾಸಿಗಳ ವಿಶೇಷಾಧಿಕಾರ ಕಲಂ 35ಎ ಎಂದರೇನು?

ವಿವಾಹ, ಆಸ್ತಿ ಖರೀದಿ, ಸರ್ಕಾರಿ ಸೌಲಭ್ಯಗಳನ್ನು ಪಡೆಯುವ ವಿಚಾರದಲ್ಲಿ ತಾರತಮ್ಯವಿದೆ. ಆದ್ದರಿಂದ, ಕಲಂ 35-ಎ ಸಿಂಧುತ್ವ ಪ್ರಶ್ನಿಸಿ, ಕಲಂ 35-ಎ ಅನ್ವಯ ಕಣಿವೆ ರಾಜ್ಯದಲ್ಲಿನ ಕೆಲವು ಜನರಿಗೆ ಆ ಹಕ್ಕುಗಳು ಸಿಗುತ್ತಿಲ್ಲ ಎಂದು ಆರೋಪಿಸಿದ ಸುಪ್ರೀಂಕೋರ್ಟಿನಲ್ಲಿ ಸಾರ್ವಜಿನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
The first petition challenging the decision to abrogate, Article 370 has been filed in the Supreme Court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X