ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಾರ್ವಜನಿಕವಾಗಿ ಫೋನಿನಲ್ಲಿ ಪರಿಶಿಷ್ಟರ ಜಾತಿ ನಿಂದನೆಯೂ ಅಪರಾಧ'

By Sachhidananda Acharya
|
Google Oneindia Kannada News

ನವದೆಹಲಿ, ನವೆಂಬರ್ 20: ಸಾರ್ವಜನಿಕ ಸ್ಥಳಗಳಲ್ಲಿ ನಿಂತು ದೂರವಾಣಿ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಯಾವುದೇ ವ್ಯಕ್ತಿಯನ್ನು ಜಾತಿಯ ಹೆಸರಿನಲ್ಲಿ ನಿಂದಿಸುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

ಮೊಗೇರ್ ಸಮುದಾಯ ಪರಿಶಿಷ್ಟ ಜಾತಿಗೆ ಸೇರ್ಪಡೆ, ಶಿರಸಿಯಲ್ಲಿ ಸಂಭ್ರಮಾಚರಣೆಮೊಗೇರ್ ಸಮುದಾಯ ಪರಿಶಿಷ್ಟ ಜಾತಿಗೆ ಸೇರ್ಪಡೆ, ಶಿರಸಿಯಲ್ಲಿ ಸಂಭ್ರಮಾಚರಣೆ

ದೂರವಾಣಿಯಲ್ಲಿ ಪರಿಶಿಷ್ಟ ಮಹಿಳೆಯನ್ನು ನಿಂದಿಸಿದ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು. ಇದನ್ನು ರದ್ದುಪಡಿಸಲು ಮತ್ತು ಕ್ರಿಮಿನಲ್‌ ವಿಚಾರಣೆಗೆ ತಡೆ ಕೋರಿ ವ್ಯಕ್ತಿಯು ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು.

Abusing SC/ST person over phone in public place an offense: SC

ಆದರೆ ಪ್ರಕರಣಕ್ಕೆ ತಡೆಯಾಜ್ಞೆ ನೀಡಲು ಆಗಸ್ಟ್‌ 17ರಂದು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ಅಲಹಾಬಾದ್‌ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

ಈ ರೀತಿ ಜಾತಿ ನಿಂದನೆ ಮಾಡುವ ಅಪರಾಧಗಳಿಗೆ ಗರಿಷ್ಠ 5 ವರ್ಷಗಳವರೆಗೆ ಜೈಲು ಶಿಕ್ಷೆ ನೀಡುವ ಅವಕಾಶ ಕಾನೂನಿನಲ್ಲಿದೆ.

English summary
The Supreme Court has ruled that using castiest remarks over phone in a public place against the Scheduled Caste and Scheduled Tribe category amount to criminal offence warranting a jail of a maximum five years.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X