• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಣೆಯಲ್ಲಿ 48 ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್; 30 ಮಂದಿಗೆ ಗಾಯ

|
Google Oneindia Kannada News

ಪುಣೆ, ನವೆಂಬರ್ 21: ಪುಣೆಯ ನವಲೆ ಸೇತುವೆಯಲ್ಲಿ ಹಲವು ವಾಹನಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದು ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ 48ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿವೆ ಎಂದು ಪುಣೆ ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯಲ್ಲಿ ಈ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಸುಮಾರು 48 ವಾಹನಗಳು ಜಖಂಗೊಂಡಿವೆ. ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಉತ್ತರಾಖಂಡ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ 12 ಮಂದಿ ಸಾವುಉತ್ತರಾಖಂಡ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ 12 ಮಂದಿ ಸಾವು

ಈಗಾಗಲೇ ಅಪಘಾತ ಸಂಭವಿಸಿರುವ ಸ್ಥಳಕ್ಕೆ ದೌಡಾಯಿಸಿರುವ ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ರಕ್ಷಣಾ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಅಪಘಾತಕ್ಕೆ ಕಾರಣವೇನು?: ಸ್ಥಳೀಯ ಮಾಧ್ಯಮಗಳ ಪ್ರಕಾರ ಟ್ಯಾಂಕರ್‌ನ ಬ್ರೇಕ್ ವಿಫಲವಾಗಿದ್ದು, ಇದರಿಂದ ಹಲವಾರು ವಾಹನಗಳಿಗೆ ಅದು ಡಿಕ್ಕಿ ಹೊಡೆದಿದೆ. ಕಳೆದ ರಾತ್ರಿ 9 ಗಂಟೆ ಸುಮಾರಿಗೆ ಸಂಭವಿಸಿದ ಈ ಅಪಘಾತದ ಸಮಯದಲ್ಲಿ ಆಯಿಲ್ ರಸ್ತೆಯಲ್ಲಿ ಚೆಲ್ಲಿದ್ದು, ಈ ಕಾರಣದಿಂದ ವಾಹನವು ಜಾರುವಂತಾಗಿತ್ತು ಎಂದು ಗೊತ್ತಾಗಿದೆ. ಇದರಿಂದ ಸರಣಿ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದೆ.

ಅಪಘಾತದಿಂದ ಟ್ರಾಫಿಕ್ ಜಾಮ್: ಈ ಟ್ಯಾಂಕರ್ ಅಪಘಾತದಿಂದಾಗಿ ಮುಂಬೈಗೆ ಹೋಗುವ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, 2 ಕಿ.ಮೀ.ಗೂ ಹೆಚ್ಚು ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಕಳೆದ ಕೆಲವು ದಿನಗಳಿಂದ ನವಲೆ ಸೇತುವೆ ಅಪಘಾತಗಳ ಹಾಟ್ ಸ್ಪಾಟ್ ಆಗುತ್ತಿದೆ. ಇದೇ ಶುಕ್ರವಾರ ಹೊರವರ್ತುಲ ರಸ್ತೆಯ ಸೇತುವೆ ಬಳಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟಿದ್ದರು.

English summary
Accident at Pune-Bengaluru Highway; 30 Injured, 40+ Vehicle damaged. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X