ಗುಂಟೂರು 9 ರ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿ ಸಾವು

ಅಮರಾವತಿ, ಮೇ 05: ಆಂಧ್ರಪ್ರದೇಶದ ಗುಂಟೂರಿನಲ್ಲಿ 9 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ 50 ವರ್ಷದ ಆರೋಪಿ ಸಾವಿಗೀಡಾಗಿದ್ದಾನೆ.

ಆಟೋ ಚಾಲಕನಾಗಿದ್ದ ಈ ವ್ಯಕ್ತಿ ತನ್ನ ನೆರೆಮನೆಯ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ನಾಪತ್ತೆಯಾಗಿದ್ದ. ಹೊಟ್ಟೆ ನೋವು ಎಂದು ಅಳುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಿದಾಗ ಈ ವಿಷಯ ಬೆಳಕಿಗೆ ಬಂದಿತ್ತು.

ಪೋಕ್ಸೋ(Protection of Children from Sexual Offences Act) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂದಿದ್ದ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಸಿದ್ದರು. ಆದರೆ ಆರೋಪಿ ಮೃತದೇಹ ಇಲ್ಲಿನ ಅಮರಲಿಂಗೇಶ್ವರ ಸ್ವಾಮಿ ದೇವಾಲಯದ ಬಳಿ ಮರವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆರೋಪಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.

Accused in Guntur rape case found dead

ಅತ್ಯಾಚಾರದ ನಂತರ ಸ್ಥಳೀಯರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದರು. ಈ ಘಟನೆಯನ್ನು ಕಟುವಾಗಿ ಖಂಡಿಸಿದ್ದ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅತ್ಯಾಚಾರ ಸಂತ್ರಸ್ಥೆಗೆ 5 ಲಕ್ಷ ರೂ. ಪರಿಹಾರ ನೀಡಿದ್ದರು.

ಈಗಾಗಲೇ ಪೋಕ್ಸೋ ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲುಶಿಕ್ಷೆ ನೀಡುವ ಕಾನೂನನ್ನು ಜಾರಿಗೆ ತರುತ್ತಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+