ಧಾರ್ಮಿಕ ಭಾವನೆಗಳಿಗೆ ಘಾಸಿ ಆರೋಪ: ಉತ್ತರ ಪ್ರದೇಶದಲ್ಲಿ ಹೆಚ್ಚು ಜನರ ಬಂಧನ
ನವದೆಹಲಿ ಆಗಸ್ಟ್ 2: 2020ರಲ್ಲಿ "ಲಿಂಗ, ಜನಾಂಗ, ಜನ್ಮಸ್ಥಳದ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ" ಅಪರಾಧಗಳಿಗಾಗಿ ಉತ್ತರ ಪ್ರದೇಶದಲ್ಲಿ ಗರಿಷ್ಠ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ ಎಂದು ಮಂಗಳವಾರ ಸಂಸತ್ತಿನಲ್ಲಿ ಗೃಹ ವ್ಯವಹಾರಗಳ ಸಚಿವಾಲಯ (MHA) ಮಂಡಿಸಿದ ದಾಖಲೆ ಬಹಿರಂಗಪಡಿಸಿದೆ.
2020 ರಲ್ಲಿ ಉತ್ತರ ಪ್ರದೇಶದಲ್ಲಿ ಉಲ್ಲೇಖಿಸಲಾದ ಅಪರಾಧಗಳ ಆಧಾರದ ಮೇಲೆ ಒಟ್ಟು 330 ಜನರನ್ನು ಬಂಧಿಸಲಾಗಿದೆ. 176 ಬಂಧನಗಳೊಂದಿಗೆ ತಮಿಳುನಾಡು ಎರಡನೇ ಸ್ಥಾನದಲ್ಲಿದ್ದರೆ, ಅಸ್ಸಾಂ ನಂತರದ ಸ್ಥಾನದಲ್ಲಿದೆ. ಒಡಿಶಾ ಮತ್ತು ಮಿಜೋರಾಂನಲ್ಲಿ ಶೂನ್ಯ ಪ್ರಕರಣಗಳು ದಾಖಲಾಗಿವೆ.
2018-2020 ರ ಡೇಟಾವನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದಾಖಲಿಸಿದೆ. ಧಾರ್ಮಿಕ ಭಾವನೆಗಳನ್ನು ನೋಯಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಪ್ರಯತ್ನಗಳನ್ನು ಸೂಚಿಸುವ ಪ್ರವೃತ್ತಿಯಲ್ಲಿ ಬಂಧಿಸಲಾಗಿದೆ ಎಂದು ಲೋಕಸಭೆಯಲ್ಲಿ MHA ಹೇಳಿದೆ.

ಪ್ರವಾದಿ ವಿರುದ್ಧ ಹೇಳಿಕೆ
ಇನ್ನೂ ಇತ್ತೀಚೆಗೆ ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ವಿವಾದಾತ್ಮಕ ಹೇಳಿಕೆ ವಿರೋಧಿಸಿ ಜೂನ್ 10 ರಂದು ನಡೆದ ಪ್ರತಿಭಟನೆ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಎಂಟು ಜಿಲ್ಲೆಗಳಿಂದ ಸುಮಾರು 337 ಜನರನ್ನು ಬಂಧಿಸಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜಿಲ್ಲೆಗಳಲ್ಲಿ 13 ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ. ಈ 337 ಜನರ ಪೈಕಿ ಪ್ರಯಾಗ್ ರಾಜ್ ನಿಂದ 92, ಶಹರನ್ ಪುರದಿಂದ 83, ಹರ್ತಾಸ್ ನಿಂದ 52, ಅಂಬೇಡ್ಕರ್ ನಗರದಿಂದ 41, ಮೊರಾದಾಬಾದ್ ನಿಂದ 40, ಫಿರೋಜ್ ಬಾದ್ ನಿಂದ 18, ಅಲಿಘಡದಿಂದ ಆರು, ಜಲೌನ್ ನಿಂದ ಐವರು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಗ್ನಿಪಥ್ ಪ್ರತಿಭಟನೆ
ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ 300 ಬಂಧಿಸಲಾಗಿತ್ತು. ಸೇನೆಯಲ್ಲಿ 15 ವರ್ಷ ಸೈನಿಕ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು. - 4 ವರ್ಷದ ಅಗ್ನಿಪಥ ಯೋಜನೆಯ ಘೋಷಣೆ ಸರಿಯಲ್ಲ. - ಕಳೆದ 2 ವರ್ಷಗಳಿಂದ ಸೇನೆಗೆ ಸೈನಿಕರ ನೇಮಕಾತಿಯೇ ನಡೆದಿಲ್ಲ. - ಶೀಘ್ರವಾಗಿ ಹಳೆ ಪದ್ದತಿಯಡಿ ಸೈನಿಕರ ನೇಮಕಾತಿಗೆ ಆಗ್ರಹ. - ಅಗ್ನಿಪಥ ಯೋಜನೆಯಿಂದ ಉಜ್ವಲ ಭವಿಷ್ಯ ಇಲ್ಲ. - ಅಗ್ನಿಪಥ ಯೋಜನೆಯಡಿ ಪಿಂಚಣಿ ವ್ಯವಸ್ಥೆ ಇಲ್ಲ. - ಸೇನೆಯಲ್ಲಿ ನಾಲ್ಕು ವರ್ಷದ ಸೇವೆ ಬಳಿಕ ಮತ್ತೆ ನಿರುದ್ಯೋಗಿಗಳಾಗಬೇಕು. ಇಲ್ಲವೇ ಸೆಕ್ಯೂರಿಟಿ ಗಾರ್ಡ್ ಆಗಿ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಹೀಗಾಗಿ ಅಗ್ನಿಪಥ ಯೋಜನೆಗೆ ಯುವಕರ ತೀವ್ರ ವಿರೋಧ ಕೇಳಿಬಂದಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications