4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪ, ಎಸ್‌ಐಗೆ ಹಿಡಿದು ಥಳಿಸಿದ ಜನರು
ಜೈಪುರ, ನವೆಂಬರ್ 11: ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ 4 ವರ್ಷದ ಬಾಲಕಿಯ ಮೇಲೆ ಎಸ್‌ಐ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಜನರು ಆತನನ್ನು ಹಿಡಿದು ಥಳಿಸಿದರು. ದೊಡ್ಡ ಸಂಖ್ಯೆಯಲ್ಲಿ ಪೊಲೀಸ್ ಠಾಣೆಯ ಬಳಿಕ ಬಂದ ಗ್ರಾಮಸ್ಥರು, ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಸಬ್ ಇನ್ಸ್‌ಪೆಕ್ಟರ್‌ಗೆ ಥಳಿಸಿದರು.

ಚುನಾವಣಾ ಕರ್ತವ್ಯದಲ್ಲಿದ್ದ ಸಬ್ ಇನ್ಸ್ ಪೆಕ್ಟರ್ ಭೂಪೇಂದ್ರ ಸಿಂಗ್ ಬಾಲಕಿಯನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಈ ಸಂಬಂಧ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಜರಂಗ್ ಸಿಂಗ್ ತಿಳಿಸಿದ್ದಾರೆ.
लालसोट में 7 साल की दलित बच्ची के साथ पुलिसकर्मी द्वारा दुष्कर्म की घटना से लोगों में भारी आक्रोश है। मासूम को न्याय दिलाने के लिए मौके पर पहुंच गया हूं। अशोक गहलोत सरकार के नाकारापन से निरंकुश हुई पुलिस चुनाव जैसे संवेदनशील मौके पर भी ज्यादती करने से बाज नहीं आ रही। pic.twitter.com/xnIB13eyWi
— Dr.Kirodi Lal Meena (@DrKirodilalBJP) November 10, 2023
"ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಭೂಪೇಂದ್ರ ಎಂದು ಗುರುತಿಸಲಾದ ಎಸ್‌ಐ ವಿರುದ್ಧ ರಾಹುವಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅತ್ಯಾಚಾರ ಆರೋಪ ಸಂಬಂಧ ಅಪ್ರಾಪ್ತ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಜರಂಗ್ ಸಿಂಗ್ ಹೇಳಿದ್ದಾರೆ.
ಅತ್ಯಾಚಾರದ ಸುದ್ದಿ ತಿಳಿಯುತ್ತಿದ್ದಂತೆ ರಾಹುವಾಸ್ ಪೊಲೀಸ್ ಠಾಣೆಯ ಸುತ್ತ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. ಅವರು ಭೂಪೇಂದ್ರ ಸಿಂಗ್ ಅವರನ್ನು ಪೊಲೀಸರಿಗೆ ಒಪ್ಪಿಸುವ ಮೊದಲು ಹಿಡಿದು ಥಳಿಸಿದರು. ಸ್ಥಳಕ್ಕಾಗಮಿಸಿದ ಬಿಜೆಪಿ ಸಂಸದ ಕಿರೋಡಿ ಲಾಲ್ ಮೀನಾ ಮಾತನಾಡಿ, ಲಾಲ್ಸೋಟ್‌ನಲ್ಲಿ 7 ವರ್ಷದ ದಲಿತ ಬಾಲಕಿಯ ಮೇಲೆ ಪೋಲೀಸರೊಬ್ಬರು ಅತ್ಯಾಚಾರವೆಸಗಿದ ಘಟನೆಯಿಂದ ಜನರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಅಮಾಯಕ ಮಗುವಿಗೆ ನ್ಯಾಯ ಕೊಡಿಸಲು ನಾನು ಸ್ಥಳಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಬಿಜೆಪಿ ಸಂಸದರು ಬಾಲಕಿಯ ಕುಟುಂಬಕ್ಕೆ ₹ 50 ಲಕ್ಷ ಪರಿಹಾರ ಘೋಷಿಸಿದ್ದಾರೆ. "ನಾನು ಹುಡುಗಿಗೆ ಸಹಾಯ ಮಾಡಲು ಇಲ್ಲಿಗೆ ಬಂದಿದ್ದೇನೆ. ಸಬ್ ಇನ್ಸ್‌ಪೆಕ್ಟರ್‌ನನ್ನು ಬಂಧಿಸಲಾಗಿದೆ. ನನಗೆ, ನಂತರ ಚುನಾವಣೆಗಳು ಬರುತ್ತವೆ, ಮತ್ತು ಕುಟುಂಬಕ್ಕೆ ನ್ಯಾಯ ಒದಗಿಸುವುದು ನನ್ನ ಮೊದಲ ಆದ್ಯತೆಯಾಗಿದೆ. ಇದು ನಾಚಿಕೆಗೇಡಿನ ಘಟನೆ ಎಂದು ಕಿರೋಡಿ ಲಾಲ್ ಮೀನಾ ಹೇಳಿದರು.












Click it and Unblock the Notifications