ಯುಪಿಯಲ್ಲಿ ಪೇರಲ ಕದ್ದ ಆರೋಪ: ಥಳಿತಕ್ಕೊಳಗಾದ ಯುವಕ ಸಾವು- ಇಬ್ಬರ ಬಂಧನ

ಲಕ್ನೋ, ನವೆಂಬರ್ 6: ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡುವ ಪ್ರಕರಣಗಳು ಇತ್ತೇಚೆಗೆ ಹೆಚ್ಚಾಗಿ ವರದಿಯಾಗುತ್ತಿವೆ. ಇಂಥದ್ದೇ ಒಂದು ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ತೋಟವೊಂದರಲ್ಲಿ ಪೇರಲವನ್ನು ಕದ್ದ ಆರೋಪದ ಮೇಲೆ 20 ವರ್ಷದ ಯುವಕನನ್ನು ಹೊಡೆದು ಕೊಲ್ಲಲಾಗಿದೆ ಎಂದು ದೂರಲಾಗಿದೆ. ಶನಿವಾರ ರಾತ್ರಿ ಘಟನೆ ನಡೆದಿದೆ. ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು ಇಬ್ಬರನ್ನು ಬಂಧಿಸಲಾಗಿದೆ

ತನ್ನ ಸಹೋದರ ಕಾಡಿಗೆ ಹೋಗಿದ್ದು, ಹಿಂದಿರುಗುವಾಗ ನೆಲದಿಂದ ಪೇರಲವನ್ನು ಎತ್ತಿಕೊಂಡು ಬಂದಿರುವುದಾಗಿ ಮೃತನ ಸಹೋದರ ಪೊಲೀಸರಿಗೆ ತಿಳಿಸಿದ್ದಾರೆ. ಅವನ ಕೈಯಲ್ಲಿದ್ದ ಪೇರಲವನ್ನು ನೋಡಿದ ಕೆಲವು ಸ್ಥಳೀಯರು ದೊಣ್ಣೆಗಳಿಂದ ಹಲ್ಲೆ ಮಾಡಲು ಪ್ರಾರಂಭಿಸಿದರು, ಅವರು ನೆಲಕ್ಕೆ ಬಿದ್ದು ಪ್ರಜ್ಞಾಹೀನರಾದರು ಎಂದು ಮೃತನ ಸಹೋದರ ಹೇಳಿದ್ದಾರೆ.

Accused of stealing guava in Uttar Pradesh: Youth beaten to death - Two arrested

ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವನು ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್‌ಐ ವರದಿ ಪ್ರಕಾರ, ಒಬ್ಬ ವ್ಯಕ್ತಿಗೆ ಗಾಯವಾಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಘಟನಾ ಸ್ಥಳಕ್ಕೆ ತಲುಪಿ ಗಾಯಾಳುವನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ, ಚಿಕಿತ್ಸೆ ವೇಳೆ ಆತ ಮೃತಪಟ್ಟಿರುವುದು ತಿಳಿದು ಬಂದಿದೆ. ಸಂಬಂಧಿಕರ ದೂರಿನ ಮೇರೆಗೆ ಇಬ್ಬರನ್ನು ಬಂಧಿಸಲಾಗಿದೆ, ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಅಧಿಕಾರಿ ಎಕೆ ಪಾಂಡೆ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+