ಭಾರತದಲ್ಲಿ ಒಂದೇ ದಿನ 10584 ಮಂದಿಗೆ ಕೊರೊನಾ ಪಾಸಿಟಿವ್

ನವದೆಹಲಿ, ಫೆಬ್ರವರಿ.23: ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ಮತ್ತಷ್ಟು ಹೆಚ್ಚುತ್ತಿದೆ. ಭಾರತದ ಹಲವು ರಾಜ್ಯಗಳಲ್ಲಿ ಕೊವಿಡ್-19 ಸೋಂಕಿನ ಹೊಸ ಅಲೆ ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಸೃಷ್ಟಿಯಾಗುತ್ತಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10584 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣ ಸಂಖ್ಯೆ 1,10,16,434ಕ್ಕೆ ಏರಿಕೆಯಾಗಿದೆ.

ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಒಂದೇ ದಿನ ಕೊವಿಡ್-19 ಸೋಂಕಿಗೆ 78 ಮಂದಿ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 1,56,463ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 13,255 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 1,07,12,665 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 1,47,306 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Across India 10,584 Peoples Found Coronavirus Possitive In Last 24 Hours

ಕೊರೊನಾವೈರಸ್ ಸೋಂಕಿಗೆ ಲಸಿಕೆ:

ದೇಶದಲ್ಲಿ ಈವರೆಗೂ 1,17,45,552 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+