13742 ಮಂದಿಗೆ ಸೋಂಕು: ಭಾರತದಲ್ಲಿ ಭಯ ಹುಟ್ಟಿಸಿದ ಕೊರೊನಾ!
ನವದೆಹಲಿ, ಫೆಬ್ರವರಿ.24: ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹೊಸ ಅಲೆಯ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಪ್ರತಿನಿತ್ಯ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಒಂದೇ ದಿನ 13742 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಭಾರತದಲ್ಲಿ ಕೊವಿಡ್-19 ಸೋಂಕಿತರ ಜೊತೆಗೆ ಗುಣುಖರ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 14,037 ಸೋಂಕಿತರು ಗುಣಮುಖರಾಗಿದ್ದು, 104 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಬುಧವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,10,30,176 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿದ್ದು, ಈಗಾಗಲೇ 1,07,26,702 ಸೋಂಕಿತರು ಗುಣಮುಖರಾಗಿದ್ದಾರೆ. ಮಹಾಮಾರಿಯಿಂದ ಇದುವರೆಗೂ 1,56,567 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ಭಾರತದಲ್ಲಿ 1,46,907 ಸಕ್ರಿಯ ಪ್ರಕರಣಗಳಿವೆ.

ಕೊರೊನಾವೈರಸ್ ಸೋಂಕಿಗೆ ಲಸಿಕೆ:
ದೇಶದಲ್ಲಿ ಈವರೆಗೂ 1,21,65,598 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.












Click it and Unblock the Notifications