ಹೊಸ ದಾಖಲೆ: ಭಾರತದಲ್ಲಿ ಒಂದೇ ದಿನ 80 ಲಕ್ಷ ಮಂದಿಗೆ ಕೊರೊನಾವೈರಸ್ ಲಸಿಕೆ!

ನವದೆಹಲಿ, ಜೂನ್ 22: ಭಾರತವು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ಬರೆದಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಿದ ಮೊದಲ ದಿನವೇ ದೇಶದಲ್ಲಿ 80 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ.

Recommended Video

      Vaccination ವಿಚಾರದಲ್ಲಿ ಹೊಸ ದಾಖಲೆ ಬರೆದ ಭಾರತ | Oneindia Kannada

      ಸೋಮವಾರ ರಾತ್ರಿ 8 ಗಂಟೆ ವೇಳೆಗೆ 80,95,314 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಈ ಹಿಂದೆ ಏಪ್ರಿಲ್ 2ರಂದು ಅತಿಹೆಚ್ಚು ಅಂದರೆ 42,65,157 ಜನರಿಗೆ ಲಸಿಕೆ ನೀಡಿರುವುದೇ ದಾಖಲೆಯಾಗಿತ್ತು.

      ದೇಶದಲ್ಲಿ ಜೂನ್ 21ರಿಂದಲೇ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತವಾಗಿ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಅದರಂತೆ ಮೊದಲ ದಿನ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ.

      ಕೇಂದ್ರ ಸರ್ಕಾರದಿಂದ ಶೇ.75ರಷ್ಟು ಲಸಿಕೆ ಖರೀದಿ

      ಕೇಂದ್ರ ಸರ್ಕಾರದಿಂದ ಶೇ.75ರಷ್ಟು ಲಸಿಕೆ ಖರೀದಿ

      ದೇಶದ ಪ್ರತಿಯೊಂದು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರದಿಂದಲೇ ಕೊರೊನಾವೈರಸ್ ಲಸಿಕೆಯನ್ನು ಉಚಿತರವಾಗಿ ಪೂರೈಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಹಿನ್ನೆಲೆ ಲಸಿಕೆ ಉತ್ಪಾದಕ ಕಂಪನಿಗಳಿಂದ ಶೇ.75ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರವೇ ಖರೀದಿಸುತ್ತಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಕೇಂದ್ರ ಸರ್ಕಾರಕ್ಕೆ ನೀಡಿ ಉಳಿದ ಶೇ.25ರಷ್ಟು ಲಸಿಕೆಯನ್ನು ರಾಜ್ಯ ಸರ್ಕಾರ ಅಥವಾ ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುವುದಕ್ಕೆ ಅನುಮತಿ ನೀಡಲಾಗಿದೆ.

      ಹರಿಯಾಣ ಮತ್ತು ಅಸ್ಸಾಂನಲ್ಲಿ ಲಸಿಕೆ ವಿತರಣೆ ದಾಖಲೆ

      ಹರಿಯಾಣ ಮತ್ತು ಅಸ್ಸಾಂನಲ್ಲಿ ಲಸಿಕೆ ವಿತರಣೆ ದಾಖಲೆ

      ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹಿಂದೆ ಉಳಿದಿದ್ದ ಹರಿಯಾಣ ಮತ್ತು ಅಸ್ಸಾಂ ರಾಜ್ಯಗಳಲ್ಲೂ ದಾಖಲೆಯ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ. ಹರಿಯಾಣದಲ್ಲಿ ರಾತ್ರಿ 7.30ರ ವೇಳೆಗೆ ಮೊದಲ ಬಾರಿ 2 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ದೇಶದಲ್ಲೇ ಅತಿ ಕಡಿಮೆ ಲಸಿಕೆ ವಿತರಿಸಿದ ಅಸ್ಸಾಂನಲ್ಲಿ ವೇಗ ಹೆಚ್ಚಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಈವರೆಗೂ 3.19 ಲಕ್ಷ ಜನರಿಗೆ ಮಾತ್ರ ಲಸಿಕೆ ನೀಡಲಾಗಿದ್ದು, ಮುಂದಿನ 10 ದಿನಗಳಲ್ಲಿ 3 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

      10 ಲಕ್ಷ ಲಸಿಕೆ ವಿತರಣೆ ಗುರಿ ಹೊಂದಿರುವ ಕರ್ನಾಟಕ

      10 ಲಕ್ಷ ಲಸಿಕೆ ವಿತರಣೆ ಗುರಿ ಹೊಂದಿರುವ ಕರ್ನಾಟಕ

      ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 7 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ದಿನ ಕನಿಷ್ಠ 10 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಉಳಿದಂತೆ ಮಧ್ಯ ಪ್ರದೇಶ 16,01,548, ಉತ್ತರ ಪ್ರದೇಶ 6,74,546, ರಾಜಸ್ಥಾನ 4,30,439, ಮಹಾರಾಷ್ಟ್ರ 3,78,945, ಪಶ್ಚಿಮ ಬಂಗಾಳ 3,17,991, ಪಂಜಾಬ್ 90,503 ಮತ್ತು ದೆಹಲಿಯಲ್ಲಿ 76,216 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

      ಕೊರೊನಾವೈರಸ್ ಲಸಿಕೆಯ ಲಭ್ಯತೆ ಎಷ್ಟಿದೆ?

      ಕೊರೊನಾವೈರಸ್ ಲಸಿಕೆಯ ಲಭ್ಯತೆ ಎಷ್ಟಿದೆ?

      ಕಳೆದ ಮೇ ತಿಂಗಳಿನಲ್ಲಿ 7.9 ಕೋಟಿ ಡೋಸ್ ಹೆಚ್ಚುವರಿ ಕೊರೊನಾವೈರಸ್ ಲಭ್ಯವಿದ್ದು, ಜೂನ್ ತಿಂಗಳಿನಲ್ಲಿ ಈ ಸಂಖ್ಯೆಯು 11.78 ಕೋಟಿಗೆ ಏರಿರೆಯಾಗಿದೆ. ರಾಜ್ಯಗಳ ಮಟ್ಟದಲ್ಲಿ ಇನ್ನೂ 3.06 ಕೋಟಿ ಡೋಸ್ ಲಸಿಕೆ ಲಭ್ಯವಿದ್ದು, ಮುಂದಿನ ಮೂರು ದಿನಗಳಲ್ಲಿ 24,53,080 ಡೋಸ್ ಲಸಿಕೆಯನ್ನು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

      ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

      ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

      ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಸೋಮವಾರ ಸಂಜೆ 7 ಗಂಟೆ ಅವಧಿಗೆ 28,00,36,898 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+