ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳು ಮತ್ತಷ್ಟು ಇಳಿಕೆ

|
Google Oneindia Kannada News

ನವದೆಹಲಿ, ಮೇ 12: ದೇಶದಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದೆ. ದೇಶದಲ್ಲಿ ಒಟ್ಟು ಕೋವಿಡ್ -19 ಸಕ್ರಿಯ ಪ್ರಕರಣಗಳು 37,04,099 ಕ್ಕೆ ಇಳಿದಿದ್ದು, 24 ಗಂಟೆಗಳಲ್ಲಿ 11,122 ಪ್ರಕರಣಗಳು ಇಳಿಕೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಕೋವಿಡ್ ಪ್ರಕರಣಗಳು ಮತ್ತು 4,205 ಸಾವುಗಳು ವರದಿಯಾಗಿದ್ದು, ಸತತ ಎರಡನೇ ದಿನ ದೈನಂದಿನ ಪ್ರಕರಣಗಳಲ್ಲಿ ಸ್ವಲ್ಪ ಕುಸಿತ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.

ಸಕ್ರಿಯ ಪ್ರಕರಣ ಹೆಚ್ಚು; ಕೋವಿಡ್ ಕೇರ್ ಸೆಂಟರ್‌ನಲ್ಲಿ ಬೆಡ್ ಖಾಲಿ!ಸಕ್ರಿಯ ಪ್ರಕರಣ ಹೆಚ್ಚು; ಕೋವಿಡ್ ಕೇರ್ ಸೆಂಟರ್‌ನಲ್ಲಿ ಬೆಡ್ ಖಾಲಿ!

ಸತತ ಎರಡನೇ ದಿನವೂ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನಿಡಿದೆ.

ಒಂದೇ ದಿನದಲ್ಲಿ 800ಕ್ಕೂ ಅಧಿಕ ಸಾವು

ಒಂದೇ ದಿನದಲ್ಲಿ 800ಕ್ಕೂ ಅಧಿಕ ಸಾವು

ಮಂಗಳವಾರ ವರದಿಯಾದ 4,205 ಸಾವುಗಳ ಪೈಕಿ ಮಹಾರಾಷ್ಟ್ರದಲ್ಲಿ 800ಕ್ಕೂ ಹೆಚ್ಚು ಸಾವುಗಳು ವರದಿಯಾಗಿವೆ. ನಂತರದ ಆರು ರಾಜ್ಯಗಳ ಪೈಕಿ ಕರ್ನಾಟಕ, ತಮಿಳುನಾಡು, ದೆಹಲಿ, ಉತ್ತರ ಪ್ರದೇಶ ಮತ್ತು ಪಂಜಾಬ್ ಸೇರಿವೆ.

ಸಕ್ರಿಯ ಪ್ರಕರಣಗಳ ಪ್ರಮಾಣ

ಸಕ್ರಿಯ ಪ್ರಕರಣಗಳ ಪ್ರಮಾಣ

ಸಕ್ರಿಯ ಪ್ರಕರಣಗಳ ಪ್ರಮಾಣ ಈಗ ದೇಶದ ಒಟ್ಟು ಸೋಂಕುಗಳ ಶೇ. 15.87 ರಷ್ಟಿದ್ದು, ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ರಾಜಸ್ಥಾನ, ಆಂಧ್ರಪ್ರದೇಶ, ಗುಜರಾತ್, ತಮಿಳುನಾಡು, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಹರಿಯಾಣ, ಬಿಹಾರ ಮತ್ತು ಮಧ್ಯ ಪ್ರದೇಶದಲ್ಲಿ ಭಾರತದ ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇ.82.51 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಎಷ್ಟು ಪ್ರಕರಣಗಳು ಪತ್ತೆ

ಮಹಾರಾಷ್ಟ್ರದಲ್ಲಿ ಎಷ್ಟು ಪ್ರಕರಣಗಳು ಪತ್ತೆ

ಮಹಾರಾಷ್ಟ್ರದಲ್ಲಿ ಸುಮಾರು 41,000 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಈ ಸಂಖ್ಯೆ ಕಳೆದ ಕೆಲವು ವಾರಗಳ ಸರಾಸರಿಗಿಂತ ಕಡಿಮೆ ಎನಿಸಿದೆ. ಕರ್ನಾಟಕ, ಕೇರಳದಲ್ಲಿ ತಲಾ 40,000 ಪ್ರಕರಣಗಳು ವರದಿಯಾಗುತ್ತಿವೆ.

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರೆಷ್ಟು?

ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರೆಷ್ಟು?

ಇದೇ ಅವಧಿಯಲ್ಲಿ 3,55,338 ಜನರು ಚೇತರಿಸಿಕೊಂಡಿದ್ದು, ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 2,33,40,938 ಕ್ಕೆ ತಲುಪಿದೆ. ಈ ಪೈಕಿ 37,04,099 ಸಕ್ರಿಯ ಪ್ರಕರಣಗಳಾದರೆ, 2,54,197 ಸೋಂಕಿತರು ಈವರೆಗೆ ಸಾವನ್ನಪ್ಪಿದ್ದಾರೆ. ಸೋಂಕಿನಿಂದ ಇದುವರೆಗೆ 1,93,82,642 ಜನರು ಚೇತರಿಸಿಕೊಂಡಿದ್ದಾರೆ.

English summary
India's total Covid-19 active cases dipped to 37,04,099 with a net decline of 11,122 cases in a span of 24 hours, the Union health ministry said on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X