Get Updates
Get notified of breaking news, exclusive insights, and must-see stories!

ಶನಿವಾರ ಭಾರತ್ ಜೋಡೋ ಯಾತ್ರೆಯಲ್ಲಿ ಕಮಲ್ ಹಾಸನ್, ಸ್ವಾತಂತ್ರ್ಯ ಹೋರಾಟಗಾರ ಕುಟುಂಬಗಳ ಭಾಗಿ ಸಾಧ್ಯತೆ

ನವದೆಹಲಿ, ಡಿ. 23: ನಟ, ರಾಜಕಾರಣಿ ಕಮಲ್ ಹಾಸನ್, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರು ಮತ್ತು ಕಾಂಗ್ರೆಸ್ ಹಿರಿಯ ನಾಯಕರು ಶನಿವಾರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆಯಿದೆ

ಶನಿವಾರ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯು ರಾಷ್ಟ್ರ ರಾಜಧಾನಿ ದೆಹಲಿಗೆ ಪ್ರವೇಶಿಸಲಿದ್ದು, ಕಮಲ್ ಹಾಸನ್ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

"ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಸಂಸದರು, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಗಳು ಮತ್ತು ಮಕ್ಕಳ್ ನೀಧಿ ಮೈಯಂ (ಎಂಕೆಎಂ) ಅಧ್ಯಕ್ಷ ಕಮಲ್ ಹಾಸನ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ" ಎಂದು ಕಾಂಗ್ರೆಸ್ ಪಕ್ಷದ ಮೂಲವೊಂದು ಶುಕ್ರವಾರ ಪಿಟಿಐಗೆ ತಿಳಿಸಿದೆ.

Actor Kamal Haasan, freedom fighter families likely to join Bharat Jodo Yatra on Saturday

ಕಳೆದ ವಾರ ಎಂಕೆಎಂ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಕಮಲ್ ಹಾಸನ್, ರಾಹುಲ್ ಗಾಂಧಿಯವರು ತಮ್ಮನ್ನು ಭಾರತ್ ಜೋಡೋ ಯಾತ್ರೆಗೆ ಆಹ್ವಾನಿಸಿದ್ದಾರೆ. ಹೀಗಾಗಿ ಡಿಸೆಂಬರ್ 24 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಾಗಿ ಹೇಳಿದ್ದರು.

ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಯಾತ್ರೆಯಲ್ಲಿ ಕನಿಷ್ಠ 40,000 ರಿಂದ 50,000 ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಚೌಧರಿ ಹೇಳಿದ್ದಾರೆ.

"ಬೆಳಗ್ಗೆ 6 ಗಂಟೆಗೆ ಬಾದರ್‌ಪುರ ಗಡಿಯನ್ನು ಪ್ರವೇಶಿಸುವ ಯಾತ್ರೆಯಲ್ಲಿ ವಿವಿಧ ಕ್ಷೇತ್ರಗಳ ಜನರು ಸೇರಲಿದ್ದಾರೆ. ನಾವು ನಂತರ ಅಪೋಲೋ ಆಸ್ಪತ್ರೆಯ ಮೂಲಕ ಆಶ್ರಮದ ಕಡೆಗೆ ತೆರಳಿ ವಿಶ್ರಾಂತಿ ಪಡೆಯುತ್ತೇವೆ. ಆಶ್ರಮದಿಂದ ಮಧ್ಯಾಹ್ನ 1 ಗಂಟೆಗೆ ನಮ್ಮ ಯಾತ್ರೆಯನ್ನು ಪುನರಾರಂಭಿಸುತ್ತೇವೆ" ಎಂದು ಅನಿಲ್ ಚೌಧರಿ ತಿಳಿಸಿದ್ದಾರೆ.

Actor Kamal Haasan, freedom fighter families likely to join Bharat Jodo Yatra on Saturday

ಆಶ್ರಮದಿಂದ ಮಥುರಾ ರಸ್ತೆ - ಜಾಕಿರ್ ಹುಸೇನ್ ಮಾರ್ಗ - ಇಂಡಿಯಾ ಗೇಟ್ - ತಿಲಕ್ ಮಾರ್ಗ - ಐಟಿಒ - ಬಹದ್ದೂರ್ ಷಾ ಜಾಫರ್ ಮಾರ್ಗ - ನೇತಾಜಿ ಸುಭಾಷ್ ಮಾರ್ಗ ಮತ್ತು ಅನಗ್ಪಾಲ್ ಥಾಮಸ್ ವೃತ್ತಗಳ ಮೂಲಕ ಪಾದಯಾತ್ರೆ ಸಾಗಲಿದೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಆರಂಭವಾದ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ಮೂಲಕ ಹರಿಯಾಣ ತಲುಪಿದ್ದು, ಶನಿವಾರ ದೆಹಲಿ ತಲುಪಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+