Maha Kumbh Mela: ನಟ ಪ್ರಕಾಶ್‌ ರಾಜ್‌: ಪವಿತ್ರ ಸ್ನಾನ ಪಾಪಕ್ಕಾಗಿ ಇಲ್ಲ... !

Maha Kumbh Mela: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಬಗ್ಗೆ ವ್ಯಂಗ್ಯ ಮಾಡಿ ನಟ ಪ್ರಕಾಶ್‌ ರಾಜ್‌ ಅವರು ಮತ್ತೆ ಟ್ರೋಲ್‌ಗೆ ಗುರಿಯಾಗಿದ್ದಾರೆ. ಈಚೆಗಷ್ಟೇ ಮಹಾ ಕುಂಭಮೇಳದಲ್ಲಿ ಪ್ರಕಾಶ್‌ ರಾಜ್‌ ಅವರು ಸ್ನಾನ ಮಾಡುತ್ತಿರುವಂತೆ ಎಐ ಚಿತ್ರವನ್ನು ಬಳಸಿ ಸೋಷಿಯಲ್‌ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿತ್ತು. ಇದರ ವಿರುದ್ಧ ಪ್ರಕಾಶ್‌ ರಾಜ್‌ ಅವರು ದೂರು ದಾಖಲಿಸಿದ್ದಾರೆ. ಆದರೆ ಬುಧವಾರ ಅವರು ಮಾಡಿರುವ ಮತ್ತೊಂದು ಟ್ವೀಟ್ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನಟ ಪ್ರಕಾಶ್‌ ರಾಜ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರು ಮಹಾ ಕುಂಭಮೇಳದಲ್ಲಿ ಸ್ನಾನ ಮಾಡಿದ ಫೋಟೋ ವೈರಲ್‌ ಆಗುತ್ತಿದ್ದಂತೆಯೇ ಪೋಸ್ಟ್‌ ಮಾಡಿ ಕೆಣಕಿದ್ದಾರೆ. ಅದರ ವಿವರ ಇಲ್ಲಿದೆ.

ನಟ ಪ್ರಕಾಶ್‌ರಾಜ್‌ ಅವರು ಕೇಂದ್ರ ಸರ್ಕಾರ ಹಾಗೂ ಹಿಂದೂ ಧರ್ಮದ ಬಗ್ಗೆ ವಿರ್ಮಶೆಗಳನ್ನು ಮಾಡುತ್ತಿರುತ್ತಾರೆ. ಕೆಲವೊಮ್ಮೆ ಕೆಲವೊಂದು ವಿಷಯಗಳನ್ನು ಟೀಕೆ ಮಾಡುವಾಗ ಅವರು ಟ್ರೋಲ್ ಹಾಗೂ ಕೆಲವರ ಆಕ್ರೋಶಕ್ಕೆ ಗುರಿಯಾಗುವುದು ಸಹ ಇದೆ. ಬುಧವಾರ ಅವರು ಮಾಡಿದ ಟ್ವೀಟ್‌ ಇದೇ ರೀತಿಯ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. ಪ್ರಕಾಶ್‌ರಾಜ್‌ ಅವರು ಮಾಡಿದ ಟ್ವೀಟ್ ಏನು ಎನ್ನುವ ವಿವರ ಇಲ್ಲಿದೆ.

Actor Prakash Raj Tweet About PM Modi Bath at Maha Kumbh Mela Gets Trolled

ಮಹಾ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ನಾನ ಮಾಡಿದ್ದಾರೆ. ಅಷ್ಟಮಿ ಶುಭದಿನದಂದು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದು. ಮೋದಿ ಅವರು ಮಹಾ ಕುಂಭಮೇಳಕ್ಕೆ ಭೇಟಿ ನೀಡಿರುವ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದರ ಬೆನ್ನಲ್ಲೇ ಪ್ರಕಾಶ್‌ ರಾಜ್‌ ಅವರು ಮಾಡಿರುವ ಟ್ವೀಟ್ ವೈರಲ್ ಆಗಿದೆ. ಆದರೆ, ಟ್ರೋಲ್ ಮತ್ತು ಟೀಕೆ ಸಹ ಕೇಳಿ ಬಂದಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಕಾಶ್‌ ರಾಜ್‌ ಅವರು, ಸರ್ವೋಚ್ಚ ನಾಯಕನ ಪವಿತ್ರ ಸ್ನಾನ... ಪಾಪಕ್ಕಾಗಿಯೋ ಇಲ್ಲ ಪ್ರಾಯಶ್ಚಿತಕ್ಕೋ #justasking ಎಂದಿದ್ದಾರೆ. ಪೋಸ್ಟ್‌ನಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಉಲ್ಲೇಖ ಮಾಡದೆ ಟ್ವೀಟ್‌ ಮಾಡಿದ್ದಾರೆ. ಆದರೆ, ಬುಧವಾರವಷ್ಟೇ ನರೇಂದ್ರ ಮೋದಿ ಅವರು ಪವಿತ್ರ ಸ್ನಾನವನ್ನು ಮಾಡಿದ್ದಾರೆ.

ಧಾರ್ಮಿಕ ಹೇಳಿಕೆ ಬೇಡ: ನಟ ಪ್ರಕಾಶ್‌ ರಾಜ್‌ ಅವರ ಟ್ವೀಟ್‌ಗೆ ಪರ - ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಹಲವರು ನಟ ಪ್ರಕಾಶ್‌ ರಾಜ್‌ ಅವರು ಮಾಡಿರುವ ಟ್ವೀಟ್‌ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ವಿಚಾರಗಳಲ್ಲಿ ಟೀಕೆ ಮಾಡುವುದು ಒಳ್ಳೆಯದಲ್ಲ ಎಂದಿದ್ದಾರೆ. ಅಲ್ಲದೆ ಮುಂದುವರಿದು ಧಾರ್ಮಿಕ ಹೇಳಿಕೆಗಳಿಂದ ದೂರವಿರಬೇಕು. ಕುಂಭಮೇಳದಲ್ಲಿ ಎಲ್ಲರೂ ತಮ್ಮ ಪಾಪಗಳನ್ನು ಕಳೆದುಕೊಳ್ಳುವುದಕ್ಕೆ ಸ್ನಾನ ಮಾಡುವುದಿಲ್ಲ. ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುವ ಅವರವರ ನಂಬಿಕೆ ಎಂದು ಹೇಳಿದ್ದಾರೆ.

ದೆಹಲಿ ಚುನಾವಣೆಗಾಗಿ: ಇನ್ನು ಕೆಲವರು ದೆಹಲಿಯಲ್ಲಿ ಇಂದು ವಿಧಾನಸಭೆ ಚುನಾವಣೆ ನಡೆದಿದೆ. ದೆಹಲಿ ವಿಧಾನಸಭೆ ಚುನಾವಣೆಯ ಮತದಾನ ನಡೆಯುತ್ತಿದ್ದು, ಮತದಾನದ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರು ಪವಿತ್ರ ಸ್ನಾನ ಮಾಡಿರುವುದರ ಹಿಂದೆ ರಾಜಕೀಯ ಲೆಕ್ಕಾಚಾರ ಇದೆ ಎಂದು ಕೆಲವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+