ಡ್ರಗ್ಸ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್
ನವದೆಹಲಿ, ಡಿಸೆಂಬರ್ 16: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ರಾಕುಲ್ ಪ್ರೀತ್ ಸಿಂಗ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಈ ವಿಚಾರಣೆಯು ಡ್ರಗ್ಸ್ ಪ್ರಕರಣದ ಜೊತೆಗೂ ಸಂಬಂಧ ಹೊಂದಿದೆ ಎಂದು ಇ.ಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತೆಲುಗು ಚಿತ್ರರಂಗದ ಇತರ ವ್ಯಕ್ತಿಗಳನ್ನು ಪ್ರಶ್ನಿಸಿರುವ ಸಂಸ್ಥೆ ಸೋಮವಾರ ರಾಕುಲ್ ಪ್ರೀತ್ ಸಿಂಗ್‌ಗೆ ಸಮನ್ಸ್ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ಶಾಸಕರ ಖರೀದಿ ಪ್ರಕರಣದಲ್ಲಿ ದೂರುದಾರರಾಗಿದ್ದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕ ಪೈಲಟ್ ರೋಹಿತ್ ರೆಡ್ಡಿ ಅವರನ್ನೂ ವಿಚಾರಣೆಗೆ ಕರೆಯಲಾಗಿದೆ.
ಮೂರು ದಿನಗಳ ಹಿಂದೆಯಷ್ಟೇ ಶಾಸಕರ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿತ್ ರೆಡ್ಡಿ ಹೇಳಿಕೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದಾಖಲಿಸಿಕೊಂಡಿತ್ತು. ಕೆಸಿಆರ್ ನೇತೃತ್ವದ ಬಿಆರ್‌ಎಸ್ ಪಕ್ಷದ ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸಿದೆ ಎಂದು ರೆಡ್ಡಿ ದೂರು ನೀಡಿದ್ದರು. ಇದು ದೇಶದಾದ್ಯಂತ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಸಂಬಂಧ ಬಿಜೆಪಿ ನಾಯಕ ಬಿ.ಎಲ್.ಸಂತೋಷ್ ಅವರಿಗೂ ಎಸ್‌ಐಟಿ ಸಮನ್ಸ್ ನೀಡಿತ್ತು. ಆದರೆ, ರೆಡ್ಡಿ ಅವರ ಆರೋಪವನ್ನು ಬಿಜೆಪಿ ನಾಯಕರು ತಳ್ಳಿಹಾಕಿದ್ದರು.
ಮೂರು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಆಯೋಜಿಸಿದ್ದ ಪಾರ್ಟಿಯೊಂದರಲ್ಲಿ ರೋಹಿತ್ ರೆಡ್ಡಿ, ಇತರ ಇಬ್ಬರೊಂದಿಗೆ ಡ್ರಗ್ಸ್ ಸೇವಿಸಿದ್ದರು ಎಂದು ವರದಿಯಾಗಿದೆ.

ರಾಕುಲ್ ಪ್ರೀತ್ ಸಿಂಗ್ ಅವರು ಪ್ರಮುಖವಾಗಿ ತೆಲುಗು, ಹಿಂದಿ ಮತ್ತು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ಕನ್ನಡ ಸಿನಿಮಾ ಗಿಲ್ಲಿ ಮೂಲಕ ತಮ್ಮ ನಟನೆಯನ್ನು ಪ್ರಾರಂಭಿಸಿದರು. ಸೈಮಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ನಟ ಮತ್ತು ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ರಾಕುಲ್ ಸಾಂಗತ್ಯದಲ್ಲಿದ್ದಾರೆ.












Click it and Unblock the Notifications