Rishab Shetty wishes Modi: ಪ್ರಧಾನಿಯಾಗುತ್ತಿರುವ ನರೇಂದ್ರ ಮೋದಿಗೆ ಶುಭ ಕೋರಿದ ರಿಷಬ್ ಶೆಟ್ಟಿ!

ದೆಹಲಿ ಜೂನ್ 9: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಸ್ಯಾಂಡಲ್‌ವುಡ್‌ ನಟ ರಿಷಬ್ ಶೆಟ್ಟಿ ಶುಭಾಶಯ ತಿಳಿಸಿದ್ದಾರೆ.

ದೆಹಲಿಯ ರಾಜಭವನದಲ್ಲಿಂದು ಸಂಜೆ 7.15ಕ್ಕೆ ನರೇಂದ್ರ ಮೋದಿ ಅವರಿಗೆ ಪಟ್ಟಾಭಿಷೇಕವಾಗಲಿದೆ. ಈ ಸಮಾರಂಭದಲ್ಲಿ ದೇಶ ವಿದೇಶದ ಗಣ್ಯರಿಗೆ ಆಹ್ವಾನಿಸಲಾಗಿದ್ದು, ಈಗಾಗಲೇ ಸಭೆಯಲ್ಲಿ ಆಹ್ವಾನಿತರು ಪಾಲ್ಗೊಂಡಿದ್ದಾರೆ.

Actor Rishab Shetty wishes Narendra Modi

ದೇಶದ ರಾಜಕೀಯ ಗಣ್ಯರು, ಸೆಲೆಬ್ರಿಟಿಗಳು ಹಾಗೂ ಉದ್ಯಮಿಗಳಿಗೂ ಈ ಸಮಾರಂಭಕ್ಕೆ ಆಹ್ವಾನಿಸಲಾಗಿದ್ದು, ಕಾಂತಾರ ಖ್ಯಾತಿಯ ನಟ ರಿಷಬ್ ಶೆಟ್ಟಿ ಮೋದಿ ಅವರಿಗೆ ವಿಶ್ ಮಾಡಿದ್ದಾರೆ.

ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು, ಕೌಶಲ್ಯ, ಅಭಿವೃದ್ಧಿ, ಶಿಕ್ಷಣ ಮತ್ತು ದೇಶದ ಸುರಕ್ಷತೆಯ ಕಡೆಗಿನ ನಿಮ್ಮ ಬದ್ಧತೆಗೆ ನಾವು ಧನ್ಯರು ಎಂದು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ.

ಕಳೆದ ವರ್ಷ ಏರ್‌ ಇಂಡಿಯಾ ಶೋಗೆ ಆಗಮಿಸಿದ್ದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸ್ಯಾಂಡಲ್‌ವುಡ್ ನಟರು ಮಾತನಾಡಿದ್ದರು. ಯಶ್, ರಿಷಬ್, ಹಾಗೂ ವಿಜಯ್ ಕಿರಂಗದೂರು, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಡಿಜಿಸಲ್ ಕ್ರಿಯೇಟರ್ ಶ್ರದ್ಧಾ ಜೈನ್ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತನಾಡಿದ್ದರು. ಅಲ್ಲದೆ ಮಹಾ ನಾಯಕ ಮೋದಿ ಅವರನ್ನು ಭೇಟಿ ಮಾಡಿದ್ದ ನನ್ನ ಅದೃಷ್ಟ ಎಂದು ರಿಷಬ್ ಹೇಳಿಕೊಂಡಿದ್ದರು.

ಈಗ ಮೋದಿ ಅವರ ಮೂರನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಅವರಿಗೆ ಮನಪೂರ್ತಿಯಾಗಿ ರಿಷಬ್ ಶುಭಾಶಯಗಳನ್ನು ತಿಳಿಸಿದ್ದಾರೆ.

Actor Rishab Shetty wishes Narendra Modi

ಅಲ್ಲದೇ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಮೋದಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. 'ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದು ಬಹಳ ದೊಡ್ಡ ಸಾಧನೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ' ಎಂದು ಹೇಳಿದರು.

ಜೊತೆಗೆ ಇಂದು ನಡೆಯುವ ಸಮಾರಂಭದಲ್ಲಿ ರಜನಿಕಾಂತ ಕೂಡ ಭಾಗಿಯಾಗಲಿದ್ದು, ಈ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 'ಇದೊಂದು ಐತಿಹಾಸಿಕ ಇವೆಂಟ್. ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಅವರಿಗೆ ನಾನು ಮತ್ತೊಮ್ಮೆ ಅಭಿನಂದಿಸುತ್ತೇನೆ' ಎಂದು ರಜನಿಕಾಂತ್ ಖುಷಿ ಹಂಚಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+