ನಟಿ ತುನಿಷಾ ಸಾವು ಪ್ರಕರಣಕ್ಕೆ ಲವ್ ಜಿಹಾದ್ ತಿರುವು ಕೊಟ್ಟ ಬಿಜೆಪಿ ಶಾಸಕ
ಮುಂಬೈ, ಡಿ. 25: ಮಹಾರಾಷ್ಟ್ರದ ನಟಿ ತುನಿಷಾ ಆತ್ಮಹತ್ಯೆ ಹೈ ಪ್ರೊಫೈಲ್ ಪ್ರಕರಣಕ್ಕೆ ಭಾರತೀಯ ಜನತಾ ಪಕ್ಷದ ಶಾಸಕ ರಾಮ್ ಕದಮ್ ಭಾನುವಾರ ಲವ್ ಜಿಹಾದ್ ಎಂಬ ತಿರುವು ನೀಡಿದ್ದಾರೆ.
ಹಿಂದಿ ಕಿರುತೆರೆ ಮತ್ತು ಸಿನಿಮಾ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮವೊಂದರ ಸೆಟ್‌ನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು ಐಪಿಸಿ ಸೆಕ್ಷನ್ 306 ರ ಅಡಿಯಲ್ಲಿ ಬಂಧಿಸಲಾಗಿದೆ.
ಹಿಂದಿ ಧಾರಾವಾಹಿ 'ಅಲಿ ಬಾಬಾ: ದಸ್ತಾನ್-ಎ-ಕಾಬೂಲ್' ಟಿವಿ ಶೋನಲ್ಲಿ ಆಕೆಯ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ವಿರುದ್ಧ ತುನಿಷಾ ಅವರ ತಾಯಿಯ ದೂರಿನ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣವನ್ನು ದಾಖಲಿಸಲಾಗಿದೆ. ಇಬ್ಬರ ನಡುವಿನ ಸಂಬಂಧ 15 ದಿನಗಳ ಹಿಂದೆ ಮುರಿದುಬಿದ್ದಿದ್ದು, ಇದು ತುನಿಷಾ ಅವರನ್ನು ಇಂತಹ ನಿರ್ಧಾರಕ್ಕಕೆ ಕಾರಣವಾಗಿರಬಹುದು ಎನ್ನಲಾಗಿದೆ.

"ಈ ಪ್ರಕರಣವನ್ನು ಕೂಲಂಕಷವಾಗಿ ತನಿಖೆ ಮಾಡಲಾಗುವುದು. ಎಲ್ಲಾ ಕೋನಗಳನ್ನು ಪರಿಶೀಲಿಸಲಾಗುವುದು ಎಂದು ಶಾಸಕ ರಾಮ್ ಕದಮ್ ಹೇಳಿದ್ದು, ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ ಮತ್ತು ತುನಿಷಾ ಶರ್ಮಾ ಅವರ ಕುಟುಂಬಕ್ಕೆ ನ್ಯಾಯ ಸಿಗುತ್ತದೆ' ಎಂದು ಹೇಳಿದ್ದಾರೆ.
"ಆತ್ಮಹತ್ಯೆಗೆ ಕಾರಣವೇನು? ಇದರಲ್ಲಿ ಲವ್ ಜಿಹಾದ್ ಅಂಶವಿದೆಯೇ..? ಅಥವಾ ಇನ್ನಾವುದೇ ವಿಚಾರವಿದೆಯೇ..? ಎಂಬ ಬಗ್ಗೆ ತನಿಖೆಯಿಂದ ಸತ್ಯಾಂಶ ಹೊರಬರುತ್ತದೆ. ಆದರೆ ತುನಿಷಾ ಶರ್ಮಾ ಕುಟುಂಬಕ್ಕೆ 100 ರಷ್ಟು ನ್ಯಾಯ ಸಿಗುತ್ತದೆ. ಇದು ಲವ್ ಜಿಹಾದ್ ಪ್ರಕರಣವಾಗಿದ್ದರೇ, ನಂತರ ಪೊಲೀಸರು ಇದರ ಹಿಂದೆ ಇರುವ ಸಂಘಟನೆಗಳು ಮತ್ತು ಸಂಚುಕೋರರು ಯಾರು ಎಂಬ ಬಗ್ಗೆಯೂ ತನಿಖೆ ನಡೆಸುತ್ತಾರೆ" ಎಂದು ರಾಮ್ ಕದಮ್ ತಿಳಿಸಿದ್ದಾರೆ.
ಮುಂಬೈನ ವಸಾಯಿ ನ್ಯಾಯಾಲಯವು ಇಂದು ಮಧ್ಯಾಹ್ನ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ಘಟನೆಯ ಕುರಿತು ವಿಚಾರಣೆಗಾಗಿ ಭಾನುವಾರ ಮತ್ತೊಬ್ಬ ಸಹ ನಟ ಪಾರ್ಥ್ ಜುಟ್ಶಿ ಅವರನ್ನು ಪೊಲೀಸರು ಕರೆದಿದ್ದರು.

ನ್ಯಾಯಾಲಯದಲ್ಲಿ, ಮಾಧ್ಯಮಗಳೊಂದಿಗೆ ಮಾತನಾಡಿದ ಶೀಜಾನ್ ಮೊಹಮ್ಮದ್ ಖಾನ್ ಅವರ ವಕೀಲ ಶರದ್ ರೈ, "ಏನೇ ನಡೆದರೂ ಪೊಲೀಸರು ಮತ್ತು ನ್ಯಾಯಾಲಯವು ಕೆಲಸ ಮಾಡುತ್ತಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ" ಎಂದು ಹೇಳಿದ್ದಾರೆ.
20 ವರ್ಷ ವಯಸ್ಸಿನ ನಟಿ ತುನಿಷಾ ಶರ್ಮಾ ಶನಿವಾರ ಶೂಟಿಂಗ್ ವೇಳೆಯಲ್ಲಿ ಚಹಾ ವಿರಾಮದ ನಂತರ ವಾಶ್‌ರೂಮ್‌ನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಎಷ್ಟೋ ಹೊತ್ತಾದರೂ ಶೌಚಾಲಯದಿಂದ ಆಕೆ ಹೊರಗೆ ಬರದ ಹಿನ್ನೆಲೆಯಲ್ಲಿ ಬಾಗಿಲು ಒಡೆದು ಒಳ ಹೋದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವಾಲೀವ್ ಪೊಲೀಸರು ತಿಳಿಸಿದ್ದಾರೆ. ಶೂಟಿಂಗ್ ಸಿಬ್ಬಂದಿ ಆಕೆಯನ್ನು ಮಧ್ಯರಾತ್ರಿ 1:30 ರ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ತುನಿಷಾ ಶರ್ಮಾ ಅವರ ಸಹೋದ್ಯೋಗಿಗಳು ಅವರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ. ಆದರೆ ಪೊಲೀಸರು ಸ್ಥಳದಲ್ಲೇ ತನಿಖೆ ನಡೆಸಿದ್ದು, ಯಾವುದೇ ಮರಣ ಪ್ರಮಾಣಪತ್ರ ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications