ಆದಿತ್ಯ ಎಲ್‌1 ಉಡಾವಣೆ: ಯಾರು ಏನು ಹೇಳಿದರೂ ತಿಳಿಯಿರಿ

ಬೆಂಗಳೂರು, ಸೆಪ್ಟೆಂಬರ್‌ 2: ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಈಗ ಭರಪೂರ ಅಭಿನಂಧನೆಗಳು ಹರಿದು ಬರುತ್ತಿವೆ. ಈ ನಿಟ್ಟಿನಲ್ಲಿ ಯಾರು ಏನು ಹೇಳಿದರು ಎಂಬ ವಿವರ ಇಲ್ಲಿದೆ.

ಪ್ರಧಾನಿ ಮೋದಿ ಅವರು, ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ -L1 ನ ಯಶಸ್ವಿ ಉಡಾವಣೆಗಾಗಿ ಇಸ್ರೋದ ನಮ್ಮ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Aditya L1 launch: Know what anyone says

ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೌರ ವೀಕ್ಷಣಾ ಮಿಷನ್‌ ಆದಿತ್ಯ ಎಲ್‌೧ನ ಯಶಸ್ವಿ ಉಡಾವಣೆಗಾಗಿ ನಮ್ಮ ವಿಜ್ಞಾನಿಗಳು, ಬಾಹ್ಯಾಕಾಶ ಇಂಜಿನಿಯರ್‌ಗಳು, ಸಂಶೋಧಕರು ಮತ್ತು @ ISRO ನಲ್ಲಿರುವ ನಮ್ಮ ಕಠಿಣ ಪರಿಶ್ರಮದ ಸಿಬ್ಬಂದಿಗೆ ನಾವು ಋಣಿಯಾಗಿದ್ದೇವೆ ಮತ್ತು ಕೃತಜ್ಞರಾಗಿರುತ್ತೇವೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೌರ ವೀಕ್ಷಣಾಲಯ ಮಿಷನ್ ಆದಿತ್ಯ ಎಲ್‌ ೧ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಚಂದ್ರಯಾನ 3 ಯಶಸ್ಸಿನ ನಂತರ ಇಸ್ರೊ ವಿಜ್ಞಾನಿಗಳು ಸೂರ್ಯನತ್ತ ಗಮನ ಹರಿಸಿ ಆದಿತ್ಯ ಎಲ್ 1 ರಾಕೆಟನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಐತಿಹಾಸಿಕ ಸಾಧನೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.

ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಮಾತನಾಡಿ, ವೈಜ್ಞಾನಿಕ ಜ್ಞಾನದ ಅನ್ವೇಷಣೆಯಲ್ಲಿ ಐತಿಹಾಸಿಕ ಸಾಧನೆ! ಸೂರ್ಯನನ್ನು ಅಧ್ಯಯನ ಮಾಡಲು ಇಸ್ರೋ ತನ್ನ ಮೊದಲ ಬಾಹ್ಯಾಕಾಶ ಕಾರ್ಯಾಚರಣೆಯನ್ನು ವಿಜಯಶಾಲಿಯಾಗಿ ಪ್ರಾರಂಭಿಸಿದೆ. ಈ ಗಮನಾರ್ಹ ಪ್ರಯತ್ನವು ನಮ್ಮ ಹತ್ತಿರದ ನಕ್ಷತ್ರದ ರಹಸ್ಯಗಳನ್ನು ಅನ್ಲಾಕ್ ಮಾಡಲು ಭರವಸೆ ನೀಡುತ್ತದೆ, ಅದರ ರಹಸ್ಯಗಳ ಮೇಲೆ ಬೆಳಕು ಚೆಲ್ಲುತ್ತದೆ ಮತ್ತು ಬಾಹ್ಯಾಕಾಶ ಹವಾಮಾನದ ಬಗ್ಗೆ ನಮ್ಮ ತಿಳುವಳಿಕೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು, ಜಗತ್ತಿನ ಚಿತ್ತ ಭಾರತದತ್ತ. ಆದಿತ್ಯ ಎಲ್-1 ಮಿಷನ್ ಯಶಸ್ವಿ ಉಡಾವಣೆಗಾಗಿ ಇಸ್ರೋದ ಸರ್ವ ವಿಜ್ಞಾನಿಗಳಿಗೂ ಅಭಿನಂದನೆಗಳು. ಬಾಹ್ಯಾಕಾಶ ಕ್ಷೇತ್ರದಲ್ಲೂ ಭಾರತದ್ದೇ ಪಾರುಪತ್ಯ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+