ಬಾಬ್ರಿ ಮಸೀದಿ ಧ್ವಂಸ ಕೇಸ್: ಅಡ್ವಾಣಿ ವಿರುದ್ಧ ವಿಚಾರಣೆಗೆ ಸುಪ್ರೀಂ ಅಸ್ತು

By: ವಿಕಾಸ್ ನಂಜಪ್ಪ
Subscribe to Oneindia Kannada

ನವದೆಹಲಿ, ಏಪ್ರಿಲ್ 19: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಬುಧವಾರದಂದು ಮಹತ್ವದ ಆದೇಶ ನೀಡಿದ್ದು, ಎಲ್ ಕೆ ಅಡ್ವಾಣಿ ಸೇರಿದಂತೆ 13 ಮಂದಿ ಬಿಜೆಪಿ ಹಾಗೂ ಕರಸೇವಕರ ಮೇಲೆ ತನಿಖೆಗೆ ಅಸ್ತು ಎನ್ನಲಾಗಿದೆ.

ಅಂದಿನ ಉತ್ತರಪ್ರದೇಶ ಸಿಎಂ, ರಾಜಸ್ಥಾನದ ಹಾಲಿ ರಾಜ್ಯಪಾಲ ಕಲ್ಯಾಣ್ ಸಿಂಗ್ ಅವರ ಅವರ ವಿರುದ್ಧದ ಪಿತೂರಿ ಆರೋಪದ ವಿಚಾರಣೆಯನ್ನು 2 ವರ್ಷಗಳಲ್ಲಿ ಪೂರೈಸುವಂತೆ ಸಿಬಿಐಗೆ ಸುಪ್ರೀಂಕೋರ್ಟ್ ಸೂಚಿಸಿದೆ.[25 ವರ್ಷ ಕಳೆದರೂ ಅಡ್ವಾಣಿಯನ್ನು ಬೆಂಬಿಡದ 'ಬಾಬ್ರಿ ಮಸೀದಿ' ಭೂತ]

ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಂಚಿನ ಆರೋಪ ಸಾಬೀತಾದರೆ ಭಾರತೀಯ ಜನತಾ ಪಕ್ಷದ ಭೀಷ್ಮ ಎಲ್.ಕೆ ಅಡ್ವಾಣಿ 5 ವರ್ಷ ಜೈಲು ಶಿಕ್ಷಗೆ ಗುರಿಯಾಗುವ ಸಾಧ್ಯತೆ ಇದೆ.

25 ವರ್ಷ ಹಳೆಯ ಈ ಪ್ರಕರಣಕ್ಕೆ ಮತ್ತೆ ಜೀವ ಬಂದಿದ್ದು, ಬಾಬ್ರಿ ಮಸೀದಿ ಧ್ವಂಸದ ಎರಡು ಕೇಸುಗಳು ಅಡ್ವಾಣಿ ಸೇರಿದಂತೆ ಬಿಜೆಪಿ ನಾಯಕರನ್ನು ಕಾಡುತ್ತಿದೆ.[ಕಾಲಾನುಕ್ರಮದಲ್ಲಿ ಬಾಬ್ರಿ ಮಸೀದಿ ಧ್ವಂಸ]

ಸುಪ್ರೀಂ ಕೋರ್ಟ್ ಸಂಚಿನ ಪ್ರಕರಣದ ಶೀಘ್ರ ವಿಚಾರಣೆಗೆ ಸೂಚಿಸಿದೆ. "ಸಂಚಿನ ಪ್ರಕರಣಗಳು ಗಂಭೀರವಾಗಿವೆ. ಮಸೀದಿ ಧ್ವಂಸ ಪ್ರಕರಣಕ್ಕೂ ಮೊದಲು ಗೌಪ್ಯ ಸಭೆಯೊಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಮನೆಯಲ್ಲಿ ನಡೆದಿತ್ತು.

Advani, Joshi to be tried for criminal conspiracy in Babri Masjid demolition case

ಈ ಸಭೆಯಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹೀಗೆ ಮಸೀದಿ ಕೆಡವಲು 1990ರಲ್ಲಿ ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಸಿಬಿಐ ತನ್ನ ಜಾರ್ಜ್ ಶೀಟ್ ನಲ್ಲಿ ಹೇಳಿದೆ.

ಎರಡು ಕೇಸು: ಸುಪ್ರೀಂ ಕೋರ್ಟ್ ಸಂಚಿನ ಪ್ರಕರಣದ ಶೀಘ್ರ ವಿಚಾರಣೆಗೆ ಸೂಚಿಸಿದೆ. "ಸಂಚಿನ ಪ್ರಕರಣಗಳು ಗಂಭೀರವಾಗಿವೆ. ಮಸೀದಿ ಧ್ವಂಸ ಪ್ರಕರಣಕ್ಕೂ ಮೊದಲು ಗೌಪ್ಯ ಸಭೆಯೊಂದು ಬಿಜೆಪಿ ನಾಯಕ ವಿನಯ್ ಕಟಿಯಾರ್ ಮನೆಯಲ್ಲಿ ನಡೆದಿತ್ತು.

ಈ ಸಭೆಯಲ್ಲಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಹೀಗೆ ಮಸೀದಿ ಕೆಡವಲು 1990ರಲ್ಲಿ ಅಡ್ವಾಣಿ ಮತ್ತು ಇತರರು ಸಂಚು ರೂಪಿಸಿದ್ದರು ಎಂದು ಸಿಬಿಐ ತನ್ನ ಜಾರ್ಜ್ ಶೀಟ್ ನಲ್ಲಿ ಹೇಳಿದೆ.

ಈಗಾಗಲೇ ರಾಯ್ ಬರೇಲಿಯಲ್ಲಿ 57 ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಲಾಗಿದೆ. ಇನ್ನೂ 105 ಸಾಕ್ಷಿಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿದೆ. ಇನ್ನು ಕರಸೇವಕರ ಪ್ರಕರಣದಲ್ಲಿ ಲಕ್ನೋ ಕೋರ್ಟಿನಲ್ಲಿ 195 ಸಾಕ್ಷಿಗಳ ಹೇಳಿಕೆ ಪಡೆದುಕೊಂಡಿದ್ದರೆ ಇನ್ನೂ 800 ಜನರ ಹೇಳಿಕೆ ದಾಖಲಿಸಬೇಕಾಗಿದೆ. ಇನ್ನಷ್ಟು ವಿಳಂಬ ಮಾಡುವುದು ಸರಿಯಲ್ಲ ಎಂದು ಅಡ್ವಾಣಿ ಪರ ವಕೀಲರಿಗೆ ಸುಪ್ರೀಂಕೋರ್ಟ್ ಸೂಚಿಸಿದೆ.

1992ರಲ್ಲಿ ಅಯೋಧ್ಯೆಯಲ್ಲಿದ್ದ 16ನೇ ಶತಮಾನದ ಬಾಬ್ರಿ ಮಸೀದಿ ಕೆಡವಿದ ಪ್ರಕರಣದಲ್ಲಿ ಅಡ್ವಾಣಿ, ಮುರಳಿ ಮನೋಹರ ಜೋಶಿ ಇತರ ಹನ್ನೆರಡು ಮಂದಿ ವಿರುದ್ಧದ ಸಂಚು ರೂಪಿಸಿದ ಆರೋಪವನ್ನು ರಾಯ್ ಬರೇಲಿ ಕೋರ್ಟ್ ಕೈಬಿಟ್ಟು, ಖುಲಾಸೆ ಮಾಡಿತ್ತು. 2010ರಲ್ಲಿ ಅಲಹಾಬಾದ್ ಹೈ ಕೋರ್ಟ್ ಕೆಳಹಂತದ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿತ್ತು.ಇದೀಗ ಸಿಬಿಐ ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀ ಕೋರ್ಟ್ ಗೆ ಮನವಿ ಸಲ್ಲಿಸಿತ್ತು.(ಒನ್ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
L K Advani, Murli Manohar Joshi and others will be tried for criminal conspiracy in the Babri Masjid demolition case. The Supreme Court on Wednesday allow an appeal by the Central Bureau of Investigation which challenged the dropping of charges against them.
Please Wait while comments are loading...