Afghanistan Earthquake: ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್‌ನಲ್ಲಿ ಪ್ರಬಲ ಭೂಕಂಪ-ವಿಡಿಯೋ
ಪಾಕಿಸ್ತಾನದ ಅಫ್ಘಾನಿಸ್ತಾನದಲ್ಲಿ ಭಾರಿ ಭೂಕಂಪವಾಗಿದ್ದು, ಉತ್ತರ ಭಾರತದಲ್ಲಿ ಭೂಕಂಪಿಸಿದ ಅನುಭವವಾಗಿದೆ. ಇದರ ವಿಡಿಯೋಗಳು ವೈರಲ್ ಆಗಿವೆ.
ದೆಹಲಿ ಮಾರ್ಚ್ 22: ರಾಷ್ಟ್ರೀಯ ರಾಜಧಾನಿಯಲ್ಲಿ ಮಂಗಳವಾರ ರಾತ್ರಿ 10:25 ಗಂಟೆಗೆ ಭಾರಿ ಭೂಕಂಪ ಸಂಭವಿಸಿದೆ. ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ಉತ್ತರ ಭಾರತದ ವಿವಿಧ ಸ್ಥಳಗಳಲ್ಲಿ ಭೂಕಂಪನದ ಅನುಭವವಾಗಿದೆ. ಕೆಲವು ಸೆಕೆಂಡುಗಳ ಕಾಲ ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 6.6 ರ ತೀವ್ರತೆಯ ಭೂಕಂಪ ಅಫ್ಘಾನಿಸ್ತಾನದ ಫೈಜಾಬಾದ್‌ನ 133 ಕಿಮೀ ಆಳದಲ್ಲಿ ರಾತ್ರಿ 10:17ಕ್ಕೆ ಸಂಭವಿಸಿದೆ.
ಕಂಪನದ ಅನುಭವವಾದ ತಕ್ಷಣ ಸ್ಥಳೀಯ ನಿವಾಸಿಗಳು ಮನೆಯಿಂದ ಸುರಕ್ಷಿತ ಸ್ಥಳಗಳಿಗೆ ಓಡಿಹೋಗಿದ್ದಾರೆ. ಟ್ವಿಟರ್‌ನಲ್ಲಿ ಹಲವಾರು ಬಳಕೆದಾರರು ದೆಹಲಿಯಲ್ಲಿ ಭೂಕಂಪದ ವಿಡಿಯೊ ಮತ್ತು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ನಗರಗಳಲ್ಲಿ ಜನರು ತಮ್ಮ ಮಕ್ಕಳೊಂದಿಗೆ ತಮ್ಮ ಮನೆಗಳಿಂದ ಓಡಿಹೋಗುತ್ತಿರುವುದು ಕಂಡುಬಂದಿದೆ.

ಆರಂಭಿಕ ವರದಿಗಳ ಪ್ರಕಾರ, 6.5 ತೀವ್ರತೆಯ ಭೂಕಂಪನ ತುರ್ಕಮೆನಿಸ್ತಾನ್, ಭಾರತ, ಕಜಕಿಸ್ತಾನ್, ಪಾಕಿಸ್ತಾನ, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ, ಅಫ್ಘಾನಿಸ್ತಾನ್ ಮತ್ತು ಕಿರ್ಗಿಸ್ತಾನ್ ಸೇರಿದಂತೆ ದೇಶಗಳನ್ನು ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಕಲಾಫ್ಗಾನ್‌ನಿಂದ 90 ಕಿ.ಮೀ ದೂರದಲ್ಲಿದೆ ಎಂದು ಹೇಳಲಾಗಿದೆ.

ಕಂಪನದ ಅನುಭವವಾದ ನಂತರ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಪಂಜಾಬ್ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿ ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಧಾವಿಸುತ್ತಿರುವುದು ಕಂಡುಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ವಸುಂಧರಾದಲ್ಲಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗುತ್ತಿದ್ದಂತೆ ಸ್ಥಳೀಯರು ತಮ್ಮ ಮನೆಗಳಿಂದ ಹೊರಗೆ ಧಾವಿಸುತ್ತಿರುವುದು ಕಂಡುಬಂದಿದೆ.
Earthquake ghar me #earthquake #delhiearthquake pic.twitter.com/PwwsywkLT6
— Gaurav Bidhuri (@GauravBidhuri_) March 21, 2023
ಪಾಕಿಸ್ತಾನದಲ್ಲಿ ಪ್ರಬಲ ಕಂಪನದಿಂದ ಕಟ್ಟಡಗಳಿಗೆ ಹಾನಿಯಾಗಿದೆ. ಭೂಕಂಪನದ ಕೇಂದ್ರಬಿಂದುವು ಅಫ್ಘಾನಿಸ್ತಾನದ ಜುರ್ಮ್ ಪಟ್ಟಣದ ದಕ್ಷಿಣ-ಆಗ್ನೇಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ, ಪಾಕಿಸ್ತಾನ ಮತ್ತು ತಜಕಿಸ್ತಾನ್ ಗಡಿಯ ಸಮೀಪದಲ್ಲಿದೆ.
ಟ್ವಿಟರ್ ಬಳಕೆದಾರರು ಭಾರಿ ಭೂಕಂಪದ ಸಮಯದಲ್ಲಿ ಸೀಲಿಂಗ್ ಫ್ಯಾನ್‌ಗಳು ಮತ್ತು ಲೈಟ್ ಗಳು ಅಲುಗಾಡುತ್ತಿರುವ ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ. ಕಾಶ್ಮೀರ ಮತ್ತು ಜೈಪುರದಂತಹ ರಾಜ್ಯಗಳಲ್ಲಿ ಭೂಕಂಪದ ಅನುಭವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಉತ್ತರ ಕ್ಯಾಂಪಸ್‌ನಲ್ಲಿರುವ ತಮ್ಮ ಹಾಸ್ಟೆಲ್‌ಗಳ ಹೊರಗೆ ಅನೇಕ ವಿದ್ಯಾರ್ಥಿಗಳು ನಿಂತಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಗುರುಗ್ರಾಮ್‌ನ ಟ್ವಿಟ್ಟರ್ ಬಳಕೆದಾರರು ಹಂಚಿಕೊಂಡ ವಿಡಿಯೋದಲ್ಲಿ, ಕಟ್ಟಡ ಅಲುಗಾಡುತ್ತಿದ್ದಂತೆ "11 ಮೆಟ್ಟಿಲುಗಳ" ಕೆಳಗೆ ಓಡಿ ಬಂದಿರುವುದಾಗಿ ಹೇಳಿದ್ದಾರೆ. ಬಳಕೆದಾರರು ಹಂಚಿಕೊಂಡ ವಿಡಿಯೊದಲ್ಲಿ, ಎತ್ತರದ ಅಪಾರ್ಟ್ಮೆಂಟ್ನ ಕೆಳಗಿನ ಉದ್ಯಾನವನದಲ್ಲಿ ಹಲವಾರು ಜನರನ್ನು ಕಾಣಬಹುದು.
ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳು ಇಸ್ಲಾಮಾಬಾದ್, ಲಾಹೋರ್ ಮತ್ತು ಪೇಶಾವರದಲ್ಲಿ ಭೂಕಂಪ ಸಂಭವಿಸಿದ ವರದಿ ಮಾಡಿದೆ. ಅಫ್ಘಾನಿಸ್ತಾನದಲ್ಲಿ ಇಂದು ಮುಂಜಾನೆ 4.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ವರದಿ ಮಾಡಿದೆ. ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಸೆಂಟರ್ (ಎನ್‌ಎಸ್‌ಎಂಸಿ) ಪ್ರಕಾರ, ಇದುವರೆಗೆ ಯಾವುದೇ ಜೀವ ಅಥವಾ ಆಸ್ತಿ ನಷ್ಟದ ಸುದ್ದಿ ಇಲ್ಲ.
2022ರಲ್ಲಿ ಪಾಕಿಸ್ತಾನದಲ್ಲಿ ಭೂಕಂಪನ
ಅಫ್ಘಾನಿಸ್ತಾನದಲ್ಲಿ ಕಳೆದ ವರ್ಷ ಮಾರ್ಚ್‌ನಲ್ಲಿ ಸಂಭವಿಸಿದ ಭಯಾನಕ ಭೂಕಂಪನದಲ್ಲಿ ಕನಿಷ್ಠ 155 ಮಂದಿ ಮೃತಪಟ್ಟಿದ್ದರು. ದೇಶದ ಪೂರ್ವ ಭಾಗದಲ್ಲಿ ರಿಕ್ಟರ್ ಮಾಪಕದಲ್ಲಿ 6.1ರ ತೀವ್ರತೆಯಲ್ಲಿ ಭೂಮಿ ಕಂಪಿಸಿತ್ತು.
ಪಾಕ್ಟಿಕಾ ಪ್ರಾಂತ್ಯದಲ್ಲಿ ಅತಿ ಹೆಚ್ಚು ಸಾವು-ನೋವುಗಳು ಸಂಭವಿಸಿದ್ದವು. ಈ ಭಾಗದಲ್ಲಿ ಕನಿಷ್ಠ 100 ಮಂದಿ ಮೃತಪಟ್ಟಿದ್ದು, 250ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದರು. 250ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದರು.
ಪೂರ್ವದ ಪ್ರಾಂತ್ಯಗಳಾದ ನಂಗರ್ಹಾರ್ ಮತ್ತು ಖೋಸ್ಟ್‌ಗಳಲ್ಲಿ ಕೂಡ ಅಪಾರ ಪ್ರಮಾಣದ ಸಾವು ನೋವುಗಳು ಸಂಭವಿಸಿದ್ದವು. ಆಗ್ನೇಯ ಭಾಗದ ನಗರ ಖೋಸ್ಟ್‌ನಿಂದ ಸುಮಾರು 44 ಕಿಮೀ ದೂರದಲ್ಲಿ ಹಾಗೂ 51 ಕಿಮೀ ಆಳದಲ್ಲಿ ಭೂಕಂಪನ ಉಂಟಾಗಿತ್ತು. ನಂಗರ್ಹಾರ್ ಪ್ರಾಂತ್ಯದಲ್ಲಿ ಐದು, ಖೋಸ್ಟ್‌ನಲ್ಲಿ 25 ಮಂದಿ ಬಲಿಯಾಗಿದ್ದರು. ಇದು ಎಷ್ಟು ಭಯಾನಕವಾಗಿತ್ತು ಅಂದರೆ ಅಪಾರ ಪ್ರಮಾಣದ ಕಟ್ಟಡಗಳು ಧರೆಗುರುಳಿದ್ದವು.












Click it and Unblock the Notifications