ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: 4 ರಾಜ್ಯಗಳ ಬಳಿಕ ಮತ್ತಷ್ಟು ರಾಜ್ಯಗಳಿಗೆ ಕೇಂದ್ರದ ತಂಡ ಭೇಟಿ

|
Google Oneindia Kannada News

ನವದೆಹಲಿ, ನವೆಂಬರ್ 20: ಕೊರೊನಾ ಪರಿಸ್ಥಿತಿಯನ್ನು ಅರಿಯಲು ಕೇಂದ್ರದ ತಂಡವು ಹರ್ಯಾಣ, ರಾಜಸ್ಥಾನ, ಗುಜರಾತ್ ಹಾಗೂ ಮಣಿಪುರಕ್ಕೆ ತೆರಳಿದೆ.

ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿರುವ ಮತ್ತಷ್ಟು ರಾಜ್ಯಗಳಿಗೆ ತಂಡ ಭೇಟಿ ನೀಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಕೊವಿಡ್ 19: ಡಿಸೆಂಬರ್ 31ರವರೆಗೂ ಮುಂಬೈನ ಶಾಲೆಗಳು ಬಂದ್ಕೊವಿಡ್ 19: ಡಿಸೆಂಬರ್ 31ರವರೆಗೂ ಮುಂಬೈನ ಶಾಲೆಗಳು ಬಂದ್

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 90 ಲಕ್ಷಕ್ಕೇರಿದೆ. ಅತಿ ಹೆಚ್ಚು ಕೊರೊನಾ ಸೋಂಕಿತರ ಪಟ್ಟಿಯಲ್ಲಿ ಅಮೆರಿಕಾದ ನಂತರ ಸ್ಥಾನ ಪಡೆದುಕೊಂಡಿರುವ ಭಾರತದಲ್ಲಿ ಶುಕ್ರವಾರ 45,882 ಮಂದಿಗೆ ಸೋಂಕು ದೃಢಪಟ್ಟಿದ್ದು. ಇದರೊಂದಿಗೆ ದೇಶದಲ್ಲಿ ಸೋಂಕಿತರ ಒಟ್ಟಾರೆ ಸಂಖ್ಯೆ 90,04,366ಕ್ಕೆ ಏರಿಕೆಯಾಗಿದೆ.

After 4 States, Centre May Send Teams To Others To Check Covid Spread

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 10,83,397 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,95,91,786 ಕೊವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ಮತ್ತೊಂದೆಡೆ 24 ಗಂಟೆಗಳಲ್ಲಿ 584 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,32,162ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ನಡುವೆ ನಿನ್ನೆ ಒಂದೇ ದಿನ 44,807 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,28,410ಕ್ಕೆ ಏರಿಕೆಯಾಗಿದೆ.

ಗುರುವಾರ ಉನ್ನತ ಮಟ್ಟದ ತಂಡವು ಹರ್ಯಾಣ, ರಾಜಸ್ಥಾನ, ಗುಜರಾತ್‌ ಹಾಗೂ ಮಣಿಪುರ್‌ಗೆ ತೆರಳಿದೆ. ಪಾಸಿಟಿವ್ ಪ್ರಕರಣಗಳು, ಕಂಟೈನ್ಮೆಂಟ್, ಚಿಕಿತ್ಸೆ, ನಿಗಾ ಎಲ್ಲದರ ಕುರಿತು ಪರಿಶೀಲನೆ ನಡೆಸಲಿದೆ.

English summary
A day after high-level teams were sent to Haryana, Rajasthan, Gujarat and Manipur to monitor the fight against coronavirus, the centre is now considering sending high-level teams to other states that are seeing a rise in virus cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X