ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 71 ದಿನಗಳ ನಂತರ ಅತಿಕಡಿಮೆ ಕೊರೊನಾವೈರಸ್ ಪ್ರಕರಣ!

|
Google Oneindia Kannada News

ನವದೆಹಲಿ, ಜೂನ್ 13: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಟ ತಗ್ಗಿದೆ. ದೇಶದಲ್ಲಿ ಎರಡನೇ ಅಲೆ ಆರಂಭವಾದ ನಂತರ 71 ದಿನಗಳಲ್ಲೇ ಮೊದಲ ಬಾರಿಗೆ ಅತಿ ಕಡಿಮೆ ಹೊಸ ಪ್ರಕರಣ ಕಳೆದ 24 ಗಂಟೆಗಳಲ್ಲಿ ವರದಿಯಾಗಿದೆ.
ಪ್ರತಿನಿತ್ಯ 1 ಲಕ್ಷಕ್ಕಿಂತ ಹೆಚ್ಚು ಕೊವಿಡ್-19 ಪ್ರಕರಣಗಳು ದಾಖಲಾಗುತ್ತಿದ್ದ ದೇಶದಲ್ಲಿ ಹರಡುವಿಕೆ ವೇಗ ನಿಯಂತ್ರಣಕ್ಕೆ ಬಂದಿದೆ. ಒಂದು ದಿನದಲ್ಲಿ 80,834 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,32,062 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅಪೋಲೋ ಆಸ್ಪತ್ರೆಯಲ್ಲಿ ಪಡೆಯುವ ಸ್ಪುಟ್ನಿಕ್-ವಿ ಲಸಿಕೆಗೆ ಎಷ್ಟು ಬೆಲೆ?ಅಪೋಲೋ ಆಸ್ಪತ್ರೆಯಲ್ಲಿ ಪಡೆಯುವ ಸ್ಪುಟ್ನಿಕ್-ವಿ ಲಸಿಕೆಗೆ ಎಷ್ಟು ಬೆಲೆ?

ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 3,303 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು 2,94,39,989 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,80,43,446 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,70,384 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 10,26,159 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

After 71 Days Lowest New Coronavirus Cases in India; 80834 Cases Reported In Last 24 Hours

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ಪ್ರಮಾಣ:
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವುದಕ್ಕೆ ಇನ್ನೂ ಒಂದು ಕಾರಣ ಅಡಗಿದೆ. ಕೊವಿಡ್-19 ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಪ್ರತಿನಿತ್ಯ 20 ಲಕ್ಷಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಲಾಗುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ 19,00,312 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 37,81,32,474 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ಪ್ರಮಾಣ:
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವುದಕ್ಕೆ ಇನ್ನೂ ಒಂದು ಕಾರಣ ಅಡಗಿದೆ. ಕೊವಿಡ್-19 ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಪ್ರತಿನಿತ್ಯ 20 ಲಕ್ಷಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಲಾಗುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ 19,85,967 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 37,01,93,563 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಎಷ್ಟು ಹಂತಗಳಲ್ಲಿ ಕೊವಿಡ್-19 ಲಸಿಕೆ ವಿತರಣೆ
ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

English summary
After 71 Days Lowest New Coronavirus Cases in India; 80834 Cases Reported In Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X