ಭಾರತದಲ್ಲಿ 88 ದಿನಗಳ ನಂತರ ದಾಖಲೆ ಬರೆದ ಕೊರೊನಾವೈರಸ್!

ನವದೆಹಲಿ, ಜೂನ್ 21: ಭಾರತದಲ್ಲಿ 88 ದಿನಗಳ ನಂತರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 60,000ಕ್ಕಿಂತಲೂ ಕಡಿಮೆ ಹೊಸ ಪ್ರಕರಣಗಳು ವರದಿಯಾಗಿವೆ.

ಪ್ರತಿನಿತ್ಯ 1 ಲಕ್ಷಕ್ಕಿಂತ ಹೆಚ್ಚು ಕೊವಿಡ್-19 ಪ್ರಕರಣಗಳು ದಾಖಲಾಗುತ್ತಿದ್ದ ದೇಶದಲ್ಲಿ ಹರಡುವಿಕೆ ವೇಗ ನಿಯಂತ್ರಣಕ್ಕೆ ಬಂದಿದೆ. ಕಳೆದೊಂದು ದಿನದಲ್ಲಿ 53,256 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 78,190 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಹಾಮಾರಿಗೆ 1422 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,99,35,221 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,88,44,199 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,88,135 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 7,02,887 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

After 88 Days Lowest New Coronavirus Cases in India; 53256 Cases Reported In Last 24 Hours

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ:

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವುದಕ್ಕೆ ಇನ್ನೂ ಒಂದು ಕಾರಣ ಅಡಗಿದೆ. ಕೊವಿಡ್-19 ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. 20 ಲಕ್ಷಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸುತ್ತಿದ್ದ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 13,88,699 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ 39,24,07,782 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಎಷ್ಟು ಹಂತಗಳಲ್ಲಿ ಕೊವಿಡ್-19 ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಗಿತು.

ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಜೂನ್ 21ರ ಸೋಮವಾರದಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ನೀಡಲು ಆರಂಭಿಸಲಾಗಿದೆ. ಭಾರತದಲ್ಲಿ ಇದುವರೆಗೂ 28,00,36,898 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+