ಭಾರತ: ಕೊರೊನಾವೈರಸ್ ಸಂಖ್ಯೆಯಲ್ಲಿ ಭಾರಿ ಇಳಿಕೆ, ಲಸಿಕೆ ವಿತರಣೆ ಏರಿಕೆ!

ನವದೆಹಲಿ, ಜೂನ್ 22: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ತಗ್ಗಿದೆ. ಕಳೆದ 91 ದಿನಗಳಲ್ಲೇ ಮೊದಲ ಬಾರಿಗೆ ಒಂದೇ ದಿನ ಕೊವಿಡ್-19 ಸೋಂಕಿತರ ಸಂಖ್ಯೆ 50,000ಕ್ಕಿಂತ ಕಡಿಮೆಯಾಗಿದೆ.

Recommended Video

      Vaccination ವಿಚಾರದಲ್ಲಿ ಹೊಸ ದಾಖಲೆ ಬರೆದ ಭಾರತ | Oneindia Kannada

      ದೇಶದಲ್ಲಿ ಕಳೆದೊಂದು ದಿನದಲ್ಲಿ 42640 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 81,839 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಹಾಮಾರಿಗೆ 1,167 ಮಂದಿ ಪ್ರಾಣ ಬಿಟ್ಟಿದ್ದಾರೆ.

      ಭಾರತದಲ್ಲಿ ಒಟ್ಟು 2,99,77,861 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,89,26,038 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,89,302 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 6,62,521 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

      ಭಾರತದಲ್ಲಿ ಕೊರೊನಾವೈರಸ್ ಲಸಿಕೆ ತಪಾಸಣೆ

      ಭಾರತದಲ್ಲಿ ಕೊರೊನಾವೈರಸ್ ಲಸಿಕೆ ತಪಾಸಣೆ

      ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವುದಕ್ಕೆ ಇನ್ನೂ ಒಂದು ಕಾರಣ ಅಡಗಿದೆ. ಕಳೆದ 24 ಗಂಟೆಗಳಲ್ಲಿ 16,64,360 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ಈವರೆಗೂ 39,40,72,142 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

      ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ

      ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ

      ಭಾರತವು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ಬರೆದಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಿದ ಮೊದಲ ದಿನವೇ ದೇಶದಲ್ಲಿ 80 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಸೋಮವಾರ ರಾತ್ರಿ 8 ಗಂಟೆ ವೇಳೆಗೆ 80,95,314 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಈ ಹಿಂದೆ ಏಪ್ರಿಲ್ 2ರಂದು ಅತಿಹೆಚ್ಚು ಅಂದರೆ 42,65,157 ಜನರಿಗೆ ಲಸಿಕೆ ನೀಡಿರುವುದೇ ದಾಖಲೆಯಾಗಿತ್ತು.

      ಮೊದಲ ದಿನ ಯಾವ ರಾಜ್ಯದಲ್ಲಿ ಎಷ್ಟು ಲಸಿಕೆ ವಿತರಣೆ?

      ಮೊದಲ ದಿನ ಯಾವ ರಾಜ್ಯದಲ್ಲಿ ಎಷ್ಟು ಲಸಿಕೆ ವಿತರಣೆ?

      ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ 7 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ಒಂದೇ ದಿನ ಕನಿಷ್ಠ 10 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ. ಉಳಿದಂತೆ ಮಧ್ಯ ಪ್ರದೇಶ 16,01,548, ಉತ್ತರ ಪ್ರದೇಶ 6,74,546, ರಾಜಸ್ಥಾನ 4,30,439, ಮಹಾರಾಷ್ಟ್ರ 3,78,945, ಪಶ್ಚಿಮ ಬಂಗಾಳ 3,17,991, ಪಂಜಾಬ್ 90,503 ಮತ್ತು ದೆಹಲಿಯಲ್ಲಿ 76,216 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

      ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತ

      ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತ

      ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಗಿತು.

      ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಜೂನ್ 21ರ ಸೋಮವಾರದಿಂದ ದೇಶದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ನೀಡಲು ಆರಂಭಿಸಲಾಗಿದೆ. ಭಾರತದಲ್ಲಿ ಇದುವರೆಗೂ 28,87,66,201 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+