ರಾಷ್ಟ್ರಪತಿ ಆಳ್ವಿಕೆ: ಪುದುಚೇರಿಯಲ್ಲಿ ಸರ್ಕಾರ ರಚಿಸುವುದಿಲ್ಲ ಎಂದ ಬಿಜೆಪಿ!
ಪುದುಚೇರಿ, ಫೆಬ್ರವರಿ.22: ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಹೊಸ್ತಿಲಿನಲ್ಲೇ ಕಾಂಗ್ರೆಸ್ ಮತ್ತು ಡಿಎಂಕೆ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಸರ್ಕಾರ ರಚಿಸುವುದಕ್ಕೆ ಬಿಜೆಪಿ ನಿರಾಕರಿಸಿದ ಹಿನ್ನೆಲೆ ರಾಷ್ಟ್ರಪತಿ ಆಳ್ವಿಕೆಯವನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ.
ಸೋಮವಾರ ಪುದುಚೇರಿ ವಿಧಾನಸಭಾ ಕಲಾಪದಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ವಿಫಲರಾದರು. ಇದರ ಬೆನ್ನಲ್ಲೇ ಲೆಫ್ಟಿನೆಂಟ್ ಗವರ್ನರ್ ತಮಿಳ್ ಸಾಯಿ ಸೌಂದರ್ ರಾಜನ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಅವಧಿಗೂ ಮೊದಲೇ ಸರ್ಕಾರದ ಪತನವು ಪುದುಚೇರಿ ಕೇಂದ್ರಾಡಳಿತ ಪ್ರದೇಶದ ರಾಜಕೀಯ ಇತಿಹಾಸದಲ್ಲೇ ಕೆಟ್ಟ ಅಧ್ಯಯನವಾಗಿರಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿ. ಸ್ವಾಮಿನಾಥನ್ ತಿಳಿಸಿದ್ದಾರೆ.

"ಮೇ ತಿಂಗಳಿನಲ್ಲಿ ಬಿಜೆಪಿ ಸರ್ಕಾರ":
"ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಈ ಹಂತದಲ್ಲಿ ನಾವು ಸರ್ಕಾರ ರಚಿಸುವುದಕ್ಕೆ ಪ್ರಯತ್ನಿಸುವುದಿಲ್ಲ ಎಂದು ಪುದುಚೇರಿ ಬಿಜೆಪಿ ರಾಜ್ಯಾಧ್ಯಕ್ಷ ವಿ ಸ್ವಾಮಿನಾಥನ್ ತಿಳಿಸಿದ್ದಾರೆ. ಅಲ್ಲರೇ, ಮುಂಬರುವ ಚುನಾವಣೆಯ ಬಳಿಕ ಪ್ರಜೆಗಳ ಆಶೀರ್ವಾದ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದ ಜೊತೆಗೆ ಬಿಜೆಪಿ ಮೈತ್ರಿಕೂಟದ ಎನ್ಆರ್ ಸಿ ಹಾಗೂ ಎಐಎಡಿಎಂಕೆ ಪಕ್ಷದ ಒಡಗೂಡಿ ಮೇ ತಿಂಗಳಿನಲ್ಲಿ ಹೊಸದಾಗಿ ಸರ್ಕಾರ ರಚಿಸುತ್ತೇವೆ. ಅದು ಪುದುಚೇರಿ ಪ್ರಜೆಗಳಿಗೆ ಉಜ್ವಲ ಭವಿಷ್ಯವನ್ನು ಸೃಷ್ಟಿಸಲಿದೆ ಎಂದು ತಿಳಿಸಿದ್ದಾರೆ.












Click it and Unblock the Notifications