ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬದಲಾವಣೆ ಇಲ್ಲ: ಎಐಸಿಸಿ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮುಂದುವರಿಕೆ

|
Google Oneindia Kannada News

ನವದೆಹಲಿ, ಮಾರ್ಚ್ 13: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷರು ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸದ್ಯದ ರಾಜಕೀಯ ಬೆಳವಣಿಗೆಗಳ ಮಧ್ಯೆ ಸೋನಿಯಾ ಗಾಂಧಿ ಅವರನ್ನೇ ಅಧ್ಯಕ್ಷರಾಗಿ ಮುಂದುವರಿಸಲು ತೀರ್ಮಾನಿಸಲಾಗಿದೆ.

ನವದೆಹಲಿ ಎಐಸಿಸಿ ಕಚೇರಿಯಲ್ಲಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಯಿತು. ನಾಲ್ಕು ಗಂಟೆಗಳವರೆಗೂ ನಡೆದ ಸುದೀರ್ಘ ಸಭೆ ನಂತರ ಮಾತನಾಡಿದ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, 'ಸೋನಿಯಾ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ. ನಾವು ಅವರ ನಾಯಕತ್ವದ ಮೇಲೆ ವಿಶ್ವಾಸವಿಡಬೇಕಿದೆ' ಎಂದರು.

ರಾಹುಲ್ ಗಾಂಧಿಯವರೇ ಎಐಸಿಸಿ ಸಾರಥಿಯಾಗಲಿ: ಕೈ ನಾಯಕರ ಬಯಕೆ ರಾಹುಲ್ ಗಾಂಧಿಯವರೇ ಎಐಸಿಸಿ ಸಾರಥಿಯಾಗಲಿ: ಕೈ ನಾಯಕರ ಬಯಕೆ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಸೋನಿಯಾ ಗಾಂಧಿ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಹೇಳಿದರು.

After Congress CWC Meeting, Party Decided to Sonia Gandhi Continues as AICC President

ಯಾವ ತ್ಯಾಗಕ್ಕೂ ಸಿದ್ಧ ಎಂದ ಸೋನಿಯಾ ಗಾಂಧಿ:

ಮೂಲಗಳ ಪ್ರಕಾರ, ಗಾಂಧಿ ಕುಟುಂಬದಿಂದಾಗಿ ಕಾಂಗ್ರೆಸ್ ಪಕ್ಷವು ದುರ್ಬಲಗೊಳ್ಳುತ್ತಿದೆ ಎಂದು ಕೆಲವರು ಭಾವಿಸುತ್ತಿರುವ ಬಗ್ಗೆ ಸೋನಿಯಾ ಗಾಂಧಿ ಸಭೆಯಲ್ಲಿ ಪ್ರಸ್ತಾಪಿಸಿದರು. ನಿಮ್ಮೆಲ್ಲರಲ್ಲೂ ಅದೇ ರೀತಿಯ ಅಭಿಪ್ರಾಯವಿದ್ದರೆ, ನಾನು ಯಾವುದೇ ರೀತಿಯ ತ್ಯಾಗಕ್ಕೂ ಸಿದ್ಧ," ಎಂದು ಅವರು ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ನಮ್ಮ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

After Congress CWC Meeting, Party Decided to Sonia Gandhi Continues as AICC President

ಯಾವುದೇ ನಾಯಕರು ರಾಜೀನಾಮೆ ನೀಡಲಿಲ್ಲ:

ಭಾನುವಾರ ನಡೆದ ಸಭೆಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ನಾಯಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಾರೆ ಎಂದು ವಿಶ್ಲೇಷಿಸಲಾಗುತ್ತಿತ್ತು. ಆದರೆ ಅಂಥ ಯಾವುದೇ ಬೆಳವಣಿಗೆಗಳು ನಡೆಯಲಿಲ್ಲ. ಅದರ ಬದಲಿಗೆ ಕಾಂಗ್ರೆಸ್ ಪಕ್ಷದಲ್ಲಿ ಸಾಂಸ್ಥಿಕ ಬದಲಾವಣೆಗಳನ್ನು ತರುವುದಕ್ಕೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮುಂದಿನ ಚುನಾವಣೆ ಬಗ್ಗೆ ದಿನೇಶ್ ಗುಂಡೂರಾವ್ ಹೇಳಿದ್ದೇನು?
ಸೋನಿಯಾ ಗಾಂಧಿಯವರು ಪಕ್ಷದ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. 5 ರಾಜ್ಯಗಳ ಚುನಾವಣೆ ಕುರಿತು ವಿಸ್ತೃತ ಚರ್ಚೆ ನಡೆದಿದೆ. ಮುಂದಿನ ಚುನಾವಣೆಗೆ ಹೇಗೆ ತಯಾರಿ ನಡೆಸಬೇಕು ಎಂಬ ಬಗ್ಗೆ ಚರ್ಚಿಸಿದ್ದೇವೆ ಎಂದು ಪಕ್ಷದ ಸಿಡಬ್ಲ್ಯುಸಿ ಸಭೆಯ ನಂತರ ಎಐಸಿಸಿ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅಧ್ಯಕ್ಷರಾಗುವುದೇ ಹಲವರ ಬಯಕೆ:

"ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರು ರಾಹುಲ್ ಗಾಂಧಿ ಕಾಂಗ್ರೆಸ್ ಅನ್ನು ಮುನ್ನಡೆಸಬೇಕೆಂದು ಬಯಸುತ್ತಾರೆ, ಆದರೆ ಮುಂದಿನ ಚುನಾವಣೆಯಲ್ಲಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದರು.

After Congress CWC Meeting, Party Decided to Sonia Gandhi Continues as AICC President

"ರಾಹುಲ್ ಗಾಂಧಿಯವರೇ ಭವಿಷ್ಯ ಕಾಂಗ್ರೆಸ್ ಅಧ್ಯಕ್ಷ"

"2019ರಲ್ಲಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಲೋಕಸಭೆ ಚುನಾವಣೆಯನ್ನು ಸೋತ ನಂತರದಲ್ಲಿ ಅವರು ಕಾರ್ಯಕಾರಿ ಸಮಿತಿಗೆ ತೆರಳಿ ಪಕ್ಷದ ಮುಖ್ಯಸ್ಥರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಅವರು ದಾರಿ ತೋರಿಸುವ ನಾಯಕರಾಗಿದ್ದು, ಅವರೇ ನಮ್ಮನ್ನು ಮುನ್ನಡೆಸಬೇಕು. "ಕಾಂಗ್ರೆಸ್ ಕಾರ್ಯಕರ್ತರಾದ ನಾವು ಯಾವಾಗಲೂ ರಾಹುಲ್ ಗಾಂಧೀಜಿ ರಾಜೀನಾಮೆಯನ್ನು ಹಿಂಪಡೆಯಬೇಕೆಂದು ಬಯಸುತ್ತೇವೆ. ಭವಿಷ್ಯದಲ್ಲಿ ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವುದಾಗಿ ನಾವು ಭಾವಿಸುತ್ತೇವೆ," ಎಂದು ಕಾಂಗ್ರೆಸ್ ಮುಖ್ಯ ಸಚೇತಕ ಮಾಣಿಕಂ ಠಾಗೋರ್ ಹೇಳಿದ್ದಾರೆ.

ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು ಎಂದ ಗೆಹ್ಲೋಟ್:

ಎಐಸಿಸಿ ಸಭೆ ಆರಂಭಕ್ಕೂ ಮುನ್ನ ಮಾತನಾಡಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, "ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷರಾಗಬೇಕು. ಕಳೆದ ಮೂರು ದಶಕದಲ್ಲಿ ಗಾಂಧಿ ಕುಟುಂಬದ ಯಾವೊಬ್ಬ ಸದಸ್ಯರು ಪ್ರಧಾನಿ, ಸಚಿವರಾಗಿಲ್ಲ. ಕಾಂಗ್ರೆಸ್ ಒಟ್ಟಾಗಿರಲು ಗಾಂಧಿ ಕುಟುಂಬದ ಅಗತ್ಯವಿದೆ" ಎಂದು ಹೇಳಿದ್ದರು.

Recommended Video

ನಾಯಕತ್ವ ಬದಲಾವಣೆಯಾದ್ರೆ ಮಾತ್ರ ಮುಂದೆ ಕಾಂಗ್ರೆಸ್ ಗೆಲ್ಲೋದಕ್ಕೆ ಸಾಧ್ಯ!!! | Oneindia Kannada

English summary
After Congress CWC Meeting, Party Decided to Sonia Gandhi Continues as AICC President.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X