ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಸಮುದಾಯ ಪ್ರಸರಣ

|
Google Oneindia Kannada News

ನವದೆಹಲಿ, ಅಕ್ಟೋಬರ್.18: ಭಾರತದ ಹಲವು ಪ್ರದೇಶಗಳಲ್ಲಿ ಕೊರೊನಾವೈರಸ್ ಎಂಬ ಸಾಂಕ್ರಾಮಿಕ ಪಿಡುಗು ಸಮುದಾಯದ ಮಟ್ಟದಲ್ಲಿ ಹರಡುತ್ತಿದೆ. ಕಳೆದ 9 ತಿಂಗಳಿನಲ್ಲಿ ಮೊದಲ ಬಾರಿಗೆ ಕೇಂದ್ರ ಸರ್ಕಾರವು ಈ ಬಗ್ಗೆ ಒಪ್ಪಿಕೊಂಡಿದೆ.
"ಸಂಡೇ ಸಂವಾದ" ಕಾರ್ಯಕ್ರಮದ ಆರನೇ ಆವೃತ್ತಿಯಲ್ಲಿ ಅಧಿಕಾರಿಗಳ ಜೊತೆಗೆ ನಡೆಸಿದ ಸುದೀರ್ಘ ಚರ್ಚೆ ಬಳಿಕ ಕೇಂದ್ರ ಸಚಿವ ಡಾ.ಹರ್ಷವರ್ಧನ್ ಮಾತನಾಡಿದರು. ಪಶ್ಚಿಮ ಬಂಗಾಳದಲ್ಲಿ ಕೊವಿಡ್-19 ಸಮುದಾಯದ ಮಟ್ಟದಲ್ಲಿ ಹರಡುತ್ತಿದೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು.

ಭಾರತದಲ್ಲಿ 24 ಗಂಟೆಯಲ್ಲಿ 61,871 ಹೊಸ ಕೋವಿಡ್ ಪ್ರಕರಣಭಾರತದಲ್ಲಿ 24 ಗಂಟೆಯಲ್ಲಿ 61,871 ಹೊಸ ಕೋವಿಡ್ ಪ್ರಕರಣ

ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಹಾಗೂ ದೇಶದ ವಿವಿಧ ರಾಜ್ಯಗಳು ಮತ್ತು ಜಿಲ್ಲೆಗಳಲ್ಲಿ ಹೆಚ್ಚಿನ ಜನದಟ್ಟಣೆಯುಳ್ಳ ಸ್ಥಳಗಳಲ್ಲಿ ಕೊರೊನಾವೈರಸ್ ಸೋಂಕು ಸಮುದಾಯದ ಮಟ್ಟದಲ್ಲಿ ಹರಡುತ್ತಿದೆ. ಆದರೆ ಈ ಪರಿಸ್ಥಿತಿ ದೇಶದ ಎಲ್ಲ ರಾಜ್ಯಗಳು ಮತ್ತು ಸ್ಥಳಗಳಲ್ಲೂ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

After Nine Months Into The Covid-19 Pandemic, Govt Admits Community Transmission

ಕೊವಿಡ್-19 ಹರಡುವಿಕೆ ಹಂತಗಳ ಬಗ್ಗೆ ಮಾಹಿತಿ:
ಕಳೆದ 9 ತಿಂಗಳಿನಲ್ಲಿ ಕೊರೊನಾವೈರಸ್ ಸೋಂಕಿನ "ಸಮುದಾಯ ಪ್ರಸರಣ"ದ ಬಗ್ಗೆ ಕೇಂದ್ರ ಸರ್ಕಾರವು ಯಾವುದೇ ಕಾರಣಕ್ಕೂ ಒಪ್ಪಿಕೊಂಡಿರಲಿಲ್ಲ. ಇದೀಗ ಏಕಾಏಕಿಯಾಗಿ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಆಗುತ್ತಿದ್ದು, ಈ ಬಗ್ಗೆ ಕೇರಳ ಮತ್ತು ನವದೆಹಲಿಯ ಆಮ್ ಆದ್ಮಿ ಸರ್ಕಾರವು ಮಾತನಾಡುತ್ತಿದೆ. ಪಶ್ಚಿಮ ಬಂಗಾಳ ಸರ್ಕಾರವು ಇದೀಗ ಸಮುದಾಯ ಪ್ರಸರಣದ ಬಗ್ಗೆ ಮಾತನಾಡುತ್ತಿದ್ದು, ಇದು ಮೂರನೇ ಹಂತದ ಹರಡುವಿಕೆಯಾಗಿದೆ. ನಾಲ್ಕನೇ ಹಂತದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗು ಎಂದು ಗುರುತಿಸಿಕೊಳ್ಳಲಾಗುತ್ತದೆ. ಇನ್ನು, ಮೊದಲ ಹಂತದಲ್ಲಿ ಕೊವಿಡ್-19 ಸೋಂಕನ್ನು ಆಮದು ಮಾಡಿಕೊಂಡಿದ್ದು, ಮತ್ತು ಎರಡನೇ ಹಂತದಲ್ಲಿ ಸ್ಥಳೀಯ ಮಟ್ಟದಲ್ಲಿ ಸೋಂಕು ಪ್ರಸರಣ ಸಂಭವಿಸಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ತಿಳಿಸಿದೆ.
ಕೊವಿಡ್-19 ನಿಯಮಗಳನ್ನು ಸಡಿಲಗೊಳಿಸಿದ್ದು, ಮುಂದಿನ ಒಂದು ತಿಂಗಳಿನಲ್ಲೇ ಕನಿಷ್ಠ 26 ಲಕ್ಷ ಕೊರೊನಾವೈರಸ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆಯಿದೆ. ಭಾರತವು ಪ್ರಸ್ತುತ ಅಂದಾಜು 135 ಕೋಟಿಗೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಈ ಪೈಕಿ ಶೇ.30ರಷ್ಟು ಜನರಲ್ಲಿ ಮಾತ್ರ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದೆ. ಉಳಿದಂತೆ ಶೇ.70ರಷ್ಟು ಜನರು ಇತ್ಯಾದಿ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದಾರೆ ಎಂದು ತಜ್ಞರ ಸಮಿತಿಯು ತಿಳಿಸಿದೆ.
ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಚಿತ್ರಣ:
ಭಾರತದಲ್ಲಿ ಒಂದೇ ದಿನ 61,871 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 74,94,552ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1033 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,14,031ಕ್ಕೆ ಏರಿಕೆಯಾಗಿದೆ. ಭಾರತದಾದ್ಯಂತ 65,97,210 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 7,83,311 ಸಕ್ರಿಯ ಪ್ರಕರಣಗಳಿವೆ.

English summary
After Nine Months Into The Covid-19 Pandemic, Govt Admits Community Transmission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X