ಪೆಟ್ರೋಲ್, ಡೀಸೆಲ್ ನಂತರ ಎಲ್ ಪಿಜಿ ದರ ಏರಿಕೆ
ನವದೆಹಲಿ, ಜೂನ್ 01: ಪೆಟ್ರೋಲ್, ಡೀಸೆಲ್ ದರ ಏರಿಕೆ ಬೆನ್ನಲ್ಲೇ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿವೆ.
ಬುಧವಾರದಿಂದ ಎಲ್ ಪಿಜಿ ಪ್ರತಿ ಸಿಲಿಂಡರ್ ಬೆಲೆ 21ರು ಏರಿಕೆಯಾಗಲಿದೆ. ಜೊತೆಗೆ ವಿಮಾನ ಇಂಧನ (ಎಟಿಎಫ್) ದರ ಕೂಡಾ ಶೇ 9.2ರಷ್ಟು ಏರಿಕೆಯಾಗಿದೆ.ದೆಹಲಿಯಲ್ಲಿ ಸಬ್ಸಿಡಿರಹಿತ ಗೃಹಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆ 548.50ರು ನಷ್ಟಿದೆ.[ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಏರಿಕೆ]

ಮಂಗಳವಾರ(ಮೇ 31) ಮಧ್ಯರಾತ್ರಿಯಿಂದ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 2.85ರು ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 2.26ರು ಏರಿಕೆಯಾಗಿದೆ.[ಪ್ರಧಾನ ಮಂತ್ರಿ "ಉಜ್ವಲ" ಯೋಜನೆ ಎಂದರೇನು?]
ವಾರ್ಷಿಕ 12 ಸಿಲಿಂಡರ್ ಕೋಟಾ ನಂತರ ಪಡೆಯುವ 14.2ಕೆ.ಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮೇ 01ರಂದು 527.50 ರು ಗೇರಿಸಲಾಗಿತ್ತು. ಈಗ ಮತ್ತಷ್ಟು ಏರಿದೆ. [10 ಲಕ್ಷ ರು ವಾರ್ಷಿಕ ಆದಾಯವಿದ್ದರೆ, ಎಲ್ ಪಿಜಿ ಸಬ್ಸಿಡಿ ಖೋತಾ]
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.












Click it and Unblock the Notifications