ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ಲಸಿಕೆ ಪಡೆದುಕೊಂಡ ಗೃಹ ಸಚಿವ ಅಮಿತ್ ಶಾ

|
Google Oneindia Kannada News

ನವದೆಹಲಿ, ಮಾರ್ಚ್ 1: ಭಾರತದಲ್ಲಿ ಸೋಮವಾರ ಆರಂಭವಾದ ಎರಡನೆಯ ಹಂತದ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಗೃಹ ಸಚಿವ ಅಮಿತ್ ಶಾ ಅವರೂ ಕೊರೊನಾ ವೈರಸ್ ಲಸಿಕೆ ಪಡೆದುಕೊಂಡರು.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಿಗ್ಗೆಯೇ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ತೆರಳಿ ಕೋವ್ಯಾಕ್ಸಿನ್ ಲಸಿಕೆ ಪಡೆದುಕೊಂಡಿದ್ದರು. ಇದಾಗಿ ಕೆಲವು ಗಂಟೆಗಳ ಬಳಿಕ ಗೃಹ ಸಚಿವ ಅಮಿತ್ ಶಾ ಕೂಡ ಕೋವಿಡ್ ಲಸಿಕೆಯ ಮೊದಲ ಡೋಸ್ ಪಡೆದುಕೊಂಡರು.

ಕೋವಿಡ್ ಲಸಿಕೆ ಪಡೆದುಕೊಂಡ ಬಳಿಕ ಪ್ರಧಾನಿ ಮೋದಿ ಆರೋಗ್ಯ ಹೇಗಿದೆ?ಕೋವಿಡ್ ಲಸಿಕೆ ಪಡೆದುಕೊಂಡ ಬಳಿಕ ಪ್ರಧಾನಿ ಮೋದಿ ಆರೋಗ್ಯ ಹೇಗಿದೆ?

ಮೇದಾಂತ ಆಸ್ಪತ್ರೆಯ ವೈದ್ಯರ ತಂಡ ಅಮಿತ್ ಶಾ ಅವರಿಗೆ ಲಸಿಕೆ ನೀಡಿತು. ಅಮಿತ್ ಶಾ ಅವರು ಕೋವಿಡ್ ಪಾಸಿಟಿವ್‌ಗೆ ಒಳಗಾಗಿ, ಹಲವು ವಾರ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಬಳಿಕ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದರು.

After PM Narendra Modi, Home Minister Amit Shah Receives First Dose Of Corona Vaccine

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೇರಿದಂತೆ ಅನೇಕ ಗಣ್ಯರು ಲಸಿಕೆ ಪಡೆದುಕೊಂಡರು.

ಕೊರೊನಾ ಲಸಿಕೆ ಪಡೆದ ಬಳಿಕ ನರ್ಸ್ ನಿವೇದಾಗೆ ಪ್ರಧಾನಿ ಮೋದಿ ಹೇಳಿದ್ದೇನು? ಕೊರೊನಾ ಲಸಿಕೆ ಪಡೆದ ಬಳಿಕ ನರ್ಸ್ ನಿವೇದಾಗೆ ಪ್ರಧಾನಿ ಮೋದಿ ಹೇಳಿದ್ದೇನು?

60 ವರ್ಷ ಮೇಲ್ಪಟ್ಟವರು ಹಾಗೂ 45 ವರ್ಷ ಮೇಲಿನ ಅನಾರೋಗ್ಯ ಪೀಡಿತರಿಗಾಗಿ ಎರಡನೆಯ ಹಂತದ ಲಸಿಕೆ ಅಭಿಯಾನ ಶುರುವಾಗಿದೆ. ನಾಗರಿಕರು ಕೋ-ವಿನ್ 2.0 ಪೋರ್ಟಲ್ ಅಥವಾ ಆರೋಗ್ಯ ಸೇತುವಿನಂತಹ ಇತರೆ ಐಟಿ ಆಪ್ ಬಳಸಿ ಯಾವುದೇ ಸಮಯ, ಯಾವುದೇ ಜಾಗದಿಂದ ಬೇಕಾದರೂ ಕೊರೊನಾ ವೈರಸ್ ಲಸಿಕೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

English summary
Hours after PM Narendra Modi vaccinated, Home Minister Amit Shah received first dose of covid-19 vaccine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X