ಪಂಜಾಬ್ ಬಳಿಕ ಗುಜರಾತ್ ಮೇಲೆ ಎಎಪಿ ಚಿತ್ತ: ಎಪ್ರಿಲ್‌ನಲ್ಲಿ ತಿರಂಗ ಯಾತ್ರೆ
ನವದೆಹಲಿ, ಮಾರ್ಚ್ 11: ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ ಬಳಿಕ ಈಗ ಆಮ್ ಆದ್ಮಿ ಪಕ್ಷವು ಗುಜರಾತ್ ಮೇಲೆ ಕಣ್ಣು ಇರಿಸಿದೆ. ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ತನ್ನ ಯೋಜನೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಪಂಜಾಬ್‌ನಲ್ಲಿ ಪ್ರಭಾವಶಾಲಿ ಗೆಲುವು ದಾಖಲಿಸಿದ ನಂತರ, ಎಎಪಿ ಈಗ ಗುಜರಾತ್‌ನಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲು ಮುಂದಾಗಿದೆ.
ಗುರುವಾರದ ಟ್ವಿಟ್ಟರ್ ಪೋಸ್ಟ್‌ನಲ್ಲಿ, ಎಎಪಿ "ದೆಹಲಿ ಮತ್ತು ಪಂಜಾಬ್ ನಂತರ ಈಗ ಗುಜರಾತ್‌ಗೆ 'ಎಎಪಿ' ಬೇಕಾಗಿದೆ," ಎಂದು ಬರೆದಿದೆ. ಎಎಪಿ ಈ ವರ್ಷದ ಏಪ್ರಿಲ್‌ನಲ್ಲಿ ಗುಜರಾತ್‌ನಲ್ಲಿ 'ತಿರಂಗ ಯಾತ್ರೆ'ಗೆ ಚಾಲನೆ ನೀಡಲಿದೆ. ಗುಜರಾತ್‌ನ ಎಲ್ಲಾ ಜಿಲ್ಲೆಗಳಲ್ಲಿನ ಎಲ್ಲಾ ತಹಸಿಲ್‌ಗಳು ಮತ್ತು ಗ್ರಾಮ ಪಂಚಾಯತ್‌ಗಳಲ್ಲಿ ಯಾತ್ರೆಯನ್ನು ಕೈಗೊಳ್ಳಲು ಮುಂದಾಗಿದೆ.
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್‌ನಲ್ಲಿ ಅವರ ಪಕ್ಷದ ಮುಖ್ಯಮಂತ್ರಿ ಭಗವಂತ್ ಮಾನ್ ಶೀಘ್ರದಲ್ಲೇ ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಗುಜರಾತ್‌ನಲ್ಲೂ ತಮ್ಮ ಸರ್ಕಾರವನ್ನು ರಚನೆ ಮಾಡುವತ್ತ ಚಿತ್ತ ನೆಟ್ಟಿದ್ದಾರೆ.
દિલ્હી અને પંજાબ બાદ
— AAP Gujarat । Mission2022 (@AAPGujarat) March 10, 2022
હવે ગુજરાત માંગે "આપ" pic.twitter.com/9bhR0oYo4w
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ನಂತರ ಎಎಪಿ ಪಂಜಾಬ್ ಅನ್ನು ಕಾಂಗ್ರೆಸ್‌ನಿಂದ ಕಸಿದುಕೊಂಡಿತು. ಪಂಜಾಬ್‌ನ ಒಟ್ಟು 117 ಸ್ಥಾನಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ 92 ಸ್ಥಾನಗಳನ್ನು ಗೆದ್ದಿದೆ. ಕಾಂಗ್ರೆಸ್ 18 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಎಸ್‌ಎಡಿ ಮೈತ್ರಿಕೂಟ ನಾಲ್ಕರಲ್ಲಿತ್ತು. ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಎರಡರಲ್ಲಿ ಗೆಲುವು ಕಂಡಿದೆ.

ರಾಷ್ಟ್ರೀಯ ರಾಜಕೀಯದಲ್ಲಿ ಪರ್ಯಾಯವಾಗಿ ಹೊರಹೊಮ್ಮಿದ ಎಎಪಿ
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅದರ ಪ್ರಚಂಡ ವಿಜಯದೊಂದಿಗೆ, ಆಮ್ ಆದ್ಮಿ ಪಕ್ಷ (ಎಎಪಿ) ತನ್ನ ಇಲ್ಲಿಯವರೆಗಿನ ಪ್ರಯಾಣದಲ್ಲಿ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ. ರಾಷ್ಟ್ರೀಯ ರಾಜಕೀಯದಲ್ಲಿ ಪರ್ಯಾಯವಾಗಿ ಹೊರಹೊಮ್ಮಿದೆ. ಪಂಜಾಬ್‌ನಲ್ಲಿ ಪ್ರಬಲವಾದ ಎಎಪಿ ಅಲೆಯು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಮತ್ತು ಕಾಂಗ್ರೆಸ್ ನಾಯಕ ಮತ್ತು ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಸ್ಪರ್ಧಿಸಿದ ಎರಡೂ ಸ್ಥಾನಗಳಿಂದ ಸೋಲುವಂತೆ ಮಾಡಿದೆ.
ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ಖಾತೆ ತೆರೆಯಲು ಸಾಧ್ಯವಾಗದಿದ್ದರೂ, 40 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ಗೋವಾದಲ್ಲಿ ಪಕ್ಷವು ಸ್ವಲ್ಪ ಹಿಡಿತ ಸಾಧಿಸಿದೆ. ಎಎಪಿ ಪಂಜಾಬ್, ಗೋವಾ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಿತ್ತು. ದೆಹಲಿಯ ಆಚೆಗೂ ತನ್ನ ನೆಲೆಯನ್ನು ವಿಸ್ತರಿಸಲು ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಪ್ರಬಲ ಶಕ್ತಿಯಾಗಲು ಎಎಪಿ ಎಲ್ಲಾ ಯತ್ನವನ್ನು ಮಾಡುತ್ತಿದೆ.
ಹಿಮಾಚಲ ಪ್ರದೇಶದ ಮೇಲೂ ಎಎಪಿ ಕಣ್ಣು
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಏರಿರುವ ಆಮ್ ಆದ್ಮಿ ಪಕ್ಷವು ಈಗ ಗುಜರಾತ್ ಮತ್ತು ಹಿಮಾಚಲ ಪರದೇಶದಲ್ಲಿ ತನ್ನ ನೆಲೆಯನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ. ಮುಂದಿನ ವರ್ಷ ನಡೆಯಲಿರುವ ಈ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಸ್ಪರ್ಧಿಸಲಿದೆ. ಗುಜರಾತ್ ಅನ್ನು ಕೇಂದ್ರೀಕರಿಸಿ, ಬಿಜೆಪಿ ಆಡಳಿತವಿರುವ ಗುಜರಾತ್‌ನಲ್ಲಿ ಪಂಜಾಬ್ ವಿಜಯಯಾತ್ರೆ ನಡೆಸಲು ಪಕ್ಷವು ಯೋಜಿಸಿದೆ ಎಂದು ಎಎಪಿ ಮೂಲಗಳು ತಿಳಿಸಿವೆ.
ರಾಜಕೀಯ ವಿಶ್ಲೇಷಕ, ಲೋಕನೀತಿ ಸಹ ನಿರ್ದೇಶಕರು ಆದ ಸಂಜಯ್ ಕುಮಾರ್ ಮಾತನಾಡಿ, "ಪಂಜಾಬ್‌ನಲ್ಲಿ ತನ್ನ ಗೆಲುವಿನೊಂದಿಗೆ, ಎಎಪಿ ಎರಡು ರಾಜ್ಯಗಳಲ್ಲಿ ತನ್ನ ಸರ್ಕಾರವನ್ನು ಹೊಂದಿರುವ ದೇಶದ ಏಕೈಕ ಪ್ರಾದೇಶಿಕ ಪಕ್ಷವಾಗಿದೆ. ದೇಶ ಮೂರನೇ ಪಕ್ಷವಾಗಿದೆ. ಇನ್ನೆರಡು ಬಿಜೆಪಿ ಮತ್ತು ಕಾಂಗ್ರೆಸ್ ಆಗಿದೆ. ಎಎಪಿಯು ಮತದಾರರಿಗೆ ಪರ್ಯಾಯವಾಗಿ ಗೋಚರಿಸಿದೆ. ಮುಂದಿನ ದಿನಗಳಲ್ಲಿ ಪಕ್ಷವು ಗೋವಾದಲ್ಲಿ ಹಿಡಿತ ಸಾಧಿಸುತ್ತದೆ," ಎಂದು ಹೇಳಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications