ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್‌ಸಿಪಿ ಒಡೆದ ಬಳಿಕ ಕಾಂಗ್ರೆಸ್ ಮೇಲೆ ಕಣ್ಣಿಟ್ಟಿತೇ ಬಿಜೆಪಿ?
ಮುಂಬೈ, ಜುಲೈ. 04: ಮಹಾರಾಷ್ಟ್ರದ ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿಯಲ್ಲಿ ಕೊನೆಯ ಅಖಂಡ ಪಕ್ಷವಾಗಿ ಈಗ ಉಳಿದಿರುವುದು ಕಾಂಗ್ರೆಸ್ ಮಾತ್ರ. ಶಿವಸೇನೆ ಮತ್ತು ಶರದ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವನ್ನು ಈಗಾಗಲೇ ಬಿಜೆಪಿ ಇಬ್ಭಾಗ ಮಾಡಿದೆ. ಇದೇ ರೀತಿಯಲ್ಲಿ ಕಾಂಗ್ರೆಸ್‌ನಲ್ಲಿಯೂ ಬಂಡಾಯ ಉಂಟಾಗಲಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.
ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ಬಿಜೆಪಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಸ್ವಲ್ಪ ಸಮಯದವರೆಗೆ ಚರ್ಚೆಗಳು ನಡೆಯುತ್ತಿದ್ದು, ಇದೀಗ ಮುಂದುವರಿದ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ. ಮಂಗಳವಾರ ಮುಂಜಾನೆ, ಮಹಾರಾಷ್ಟ್ರದ ಅರಣ್ಯ ಸಚಿವ ಸುಧೀರ್ ಮುಂಗಂಟಿವಾರ್ ಅವರು ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಪಕ್ಷ ಬಿಟ್ಟು ಬರಲು ಆಸಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

"ಕಾಂಗ್ರೆಸ್ ಮಾತ್ರವಲ್ಲದೆ ಹಲವಾರು ಜನರು ತಮ್ಮ ಪಕ್ಷಗಳ ಬಗ್ಗೆ ಅಸಮಾಧಾನ ಹೊಂದಿದ್ದಾರೆ. ಏಕೆಂದರೆ ಅವರ ನಾಯಕರು ಸ್ವಾರ್ಥದಿಂದ ತುಂಬಿದ್ದಾರೆ. ಅವರು ರಾಷ್ಟ್ರದ ಪ್ರಗತಿಯ ಹಾದಿಯಲ್ಲಿ ಅಡೆತಡೆಗಳನ್ನು ಸೃಷ್ಟಿಸುತ್ತಾರೆ. ಜೊತೆಗೆ ಚೀನಾ ಮತ್ತು ಪಾಕಿಸ್ತಾನ ಬಯಸಿದಂತೆಯೇ ಅವರಿಗೂ ಪ್ರಧಾನಿ ಮೋದಿ ಅಗತ್ಯವಿಲ್ಲ" ಎಂದು ಬಿಜೆಪಿಯೊಂದಿಗೆ ಸಂಪರ್ಕದಲ್ಲಿರುವ ಕಾಂಗ್ರೆಸ್ಸಿಗರ ಬಗ್ಗೆ ಕೇಳಿದಾಗ ಸುದ್ದಿ ಸಂಸ್ಥೆ ANI ಗೆ ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ.
ಇನ್ನು, ಶಿವಸೇನೆ ಮತ್ತು ಎನ್‌ಸಿಪಿಯ ವಿಭಜನೆಯನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕಾಗಿ ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಮಹಾ ವಿಕಾಸ್ ಅಘಾಡಿಯಲ್ಲಿ ಇಲ್ಲಿಯವರೆಗೆ ಏಕಾಂಗಿಯಾಗಿ ಉಳಿದಿರುವ ಏಕೈಕ ಪಕ್ಷ ಕಾಂಗ್ರೆಸ್. ಈ ಬಗ್ಗೆ ಕೇಳಿದ ಪ್ರಶ್ನೆಗೆ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಇತ್ತೀಚಿನ ಸಂದರ್ಶನದಲ್ಲಿ ಬಿಜೆಪಿಯು ಈ ಮೊದಲು ಕಾಂಗ್ರೆಸ್ ಅನ್ನು ಒಡೆಯಲು ಪ್ರಯತ್ನಿಸಿದೆ ಎಂದು ಆರೋಪಿಸಿದ್ದಾರೆ.

" ಬಿಜೆಪಿ ಕಾಂಗ್ರೆಸ್ ಒಡೆಯಲು ಪ್ರಯತ್ನಿಸಿದೆ. ಆದರೆ 30 ಶಾಸಕರಿದ್ದು, ಅದು ಸುಲಭವಲ್ಲ... ಒಬ್ಬರು ಅಥವಾ ಇಬ್ಬರು ಸೇರಬಹುದು" ಎಂದು ಅವರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಮಂಗಳವಾರ ಪಕ್ಷದ ಸಭೆ ನಡೆಸಿ, ಎಲ್ಲವೂ ಸರಿಯಾಗಿದೆ ಎಂದು ಖಚಿತಪಡಿಸಿಕೊಳ್ಳಲಾಗುವುದು ಎಂದು ಈ ಹಿಂದೆ ಹೇಳಿದ್ದರು.
ಮಂಗಳವಾರ ಬೆಳಗ್ಗೆ, ಎನ್‌ಸಿಪಿ ವಿಭಜನೆಯ ನಂತರದ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ರಾಜ್ಯ ಕಾಂಗ್ರೆಸ್ ಸಭೆ ನಡೆಸಿತು. ಹಿರಿಯ ನಾಯಕ ಅಶೋಕ್ ಚವ್ಹಾಣ್, "ನಾವು ಇಂದು ಸಭೆ ನಡೆಸಿದ್ದೇವೆ ಮತ್ತು ನಾವು ಬಲವಾಗಿ ಮತ್ತು ಒಗ್ಗಟ್ಟಿನಿಂದ ನಿಂತಿದ್ದೇವೆ. ನಾವು ಮಹಾ ವಿಕಾಸ್ ಅಘಾಡಿ (ಎಂವಿಎ)ಯಲ್ಲಿದ್ದೇವೆ" ಎಂದು ಹೇಳಿದ್ದಾರೆ.
ಕಳೆದ ವರ್ಷ ಏಕನಾಥ್ ಶಿಂಧೆ ಶಿವಸೇನೆಯಲ್ಲಿ ಬಂಡಾಯವೆದ್ದು 39 ಶಾಸಕರೊಂದಿಗೆ ಹೊರನಡೆದ ನಂತರ ಮಹಾ ವಿಕಾಸ್ ಅಘಾಡಿ ಶಾಸಕರ ಸಂಖ್ಯೆಗಳು ಕಡಿಮೆಯಾಗಲು ಪ್ರಾರಂಭಿಸಿದವು. ಎನ್‌ಸಿಪಿಯ ಅಜಿತ್ ಪವಾರ್ ಅವರು ಪಕ್ಷದ 53 ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಹೊಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಆದರೆ ಕೇವಲ ಒಂಬತ್ತು ಮಂದಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 288 ಸ್ಥಾನಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ 45 ಸದಸ್ಯರನ್ನು ಹೊಂದಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ 17 ಶಾಸಕರನ್ನು ಹೊಂದಿದೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ












Click it and Unblock the Notifications