SIR ಆಯ್ತು ಇದೀಗ SSRಗೆ ಮುಂದಾದ ಭಾರತೀಯ ಚುನಾವಣಾ ಆಯೋಗ, ಕರ್ನಾಟಕದಲ್ಲೂ ನಡೆಯಲಿದೆ, ಏನಿದು ಪ್ರಕ್ರಿಯೆ ?

ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಭಾರತದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭವಾದಾಗಿನಿಂದಲೂ ಒಂದಿಲ್ಲೊಂದು ವಿವಾದಗಳು ತಲೆ ಎತ್ತುತ್ತಲ್ಲೇ ಇವೆ. ಇದೀಗ ಮತದಾರರ ಪಟ್ಟಿ ಪರಿಷ್ಕರಿಸುವ ಕುರಿತು ಚುನಾವಣಾ ಆಯೋಗವು ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಭಾರತದ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಅಗತ್ಯವಿದ್ದರೆ ತಿದ್ದುಪಡಿ ಮಾಡಲು ಆಯೋಗ ನಿರ್ಧರಿಸಿದೆ.

ಭಾರತದ ಚುನಾವಣಾ ಆಯೋಗವು (ECI) ಜನವರಿ 1, 2027 ಅನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಿ, ಜನಪ್ರತಿನಿಧಿ ಕಾಯ್ದೆ, 1950ರ ಸೆಕ್ಷನ್ 21ರ ಅಡಿಯಲ್ಲಿ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ನಡೆಸುವಂತೆ ನಿರ್ದೇಶಿಸಿದೆ.

After SIR Election Commission Plans SSR What Is the Voter List Revision Process in Karnataka After SIR Election Commission Plans SSR What Is the Voter List Revision Process in Karnataka

ಭಾರತೀಯ ಚುನಾವಣಾ ಆಯೋಗದ ಹೊಸ ಅಧಿಸೂಚನೆಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಮಣಿಪುರ, ಪುದುಚೇರಿ, ಪಂಜಾಬ್, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಪರಿಷ್ಕರಣೆ ಪ್ರಕ್ರಿಯೆ ನಡೆಯಲಿದೆ.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಅಥವಾ ಇತ್ತೀಚೆಗೆ ಪೂರ್ಣಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ SSR ನಡೆಸುವ ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ. ಎಸ್‌ಐಆರ್‌ಗೆ ಸಂಬಂಧಿಸಿದಂತೆ ಗಂಭೀರ ವಿಚಾರಗಳು ಚರ್ಚೆ ಆಗುತ್ತಿರುವ ಸಂದರ್ಭದಲ್ಲಿಯೇ ಭಾರತೀಯ ಚುನಾವಣಾ ಆಯೋಗದ ಈ ಹೊಸ ಆದೇಶ ಬಂದಿದೆ.

ಜನವರಿ 1, 2027ರ ಅರ್ಹತಾ ದಿನಾಂಕವಾಗಿ ಪರಿಗಣಿಸಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ನಡೆಸುವ ಬಗ್ಗೆ ಭಾರತೀಯ ಚುನಾವಣಾ ಆಯೋಗವು ಮಾಹಿತಿ ಹಂಚಿಕೊಂಡಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದವರು, ಯುವ ಮತದಾರರು ಹಾಗೂ ಮೊದಲ ಬಾರಿಗೆ ಮತದಾನಕ್ಕೆ ಅರ್ಹರಾಗುವವರ ಹೆಸರು ನೋಂದಣಿಗಾಗಿ ವಿಶೇಷ ಅಭಿಯಾನ ನಡೆಸಲು ಚುನಾವಣಾ ಆಯೋಗವು 2026ರ ಸೆಪ್ಟೆಂಬರ್ 29ರಂದು ಸೂಚನೆ ನೀಡಿದೆ.

ಜನವರಿ 1, 2027ರ ವೇಳೆಗೆ ಅರ್ಹರಾಗುವವರು / 18 ವರ್ಷ ಆಗಿರುವವರು ಮತದಾರರ ಪಟ್ಟಿಗೆ ಹೆಸರು ಸೇರಿಸಿಕೊಳ್ಳಲು ಅನುಕೂಲವಾಗುವಂತೆ, 1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 21ರ ಅಡಿಯಲ್ಲಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (SSR) ನಡೆಸಲು ಆಯೋಗ ನಿರ್ದೇಶಿಸಿದೆ. ಇದರ ಜೊತೆಗೆ, 2027ರ ಏಪ್ರಿಲ್ 1, ಜುಲೈ 1 ಮತ್ತು ಅಕ್ಟೋಬರ್ 1ರಂದು ಅರ್ಹರಾಗುವವರಿಂದಲೂ ಮುಂಚಿತವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳೂ ಸೇರಿದಂತೆ, ಸೂಚನೆಯಲ್ಲಿ ಉಲ್ಲೇಖಿಸಿರುವ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪರಿಷ್ಕರಣೆ ನಡೆಯಲಿದೆ. SIR ನಡೆಯುತ್ತಿರುವ ಅಥವಾ ಇತ್ತೀಚೆಗೆ ಪೂರ್ಣಗೊಂಡಿರುವ ಪ್ರದೇಶಗಳು: ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಚಂಡೀಗಢ, ದಾದ್ರಾ ಮತ್ತು ನಗರ ಹವೇಲಿ, ದಮನ್ ಮತ್ತು ದಿಯು, ಹರಿಯಾಣ, ಜಾರ್ಖಂಡ್, ಕರ್ನಾಟಕ, ಮಹಾರಾಷ್ಟ್ರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ದೆಹಲಿ, ಒಡಿಶಾ, ಸಿಕ್ಕಿಂ, ತ್ರಿಪುರ ಮತ್ತು ತೆಲಂಗಾಣ.

ಈ ಪ್ರದೇಶಗಳಲ್ಲಿ SSR ವೇಳಾಪಟ್ಟಿಯನ್ನು ನಂತರ ಪ್ರಕಟಿಸಲಾಗುತ್ತದೆ. ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ SIR ಇನ್ನೂ ಆರಂಭವಾಗಿಲ್ಲ. ಈ ಪ್ರದೇಶಗಳ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಸೂಕ್ತ ಸಮಯದಲ್ಲಿ ಪ್ರಕಟಿಸಲಾಗುತ್ತದೆ ಎಂದು ಭಾರತೀಯ ಚುನಾವಣಾ ಆಯೋಗವು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+