ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 5 ದಿನ ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರು

|
Google Oneindia Kannada News

ಬೆಂಗಳೂರು, ಮೇ 31: ಮುಂದಿನ ಐದು ದಿನಗಳ ಕಾಲ ಕೇರಳ ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 2 ರಿಂದ 4ರವರೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅಧಿಕ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

2 ದಿನ ವಿಳಂಬ: ಜೂನ್ 3ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶ2 ದಿನ ವಿಳಂಬ: ಜೂನ್ 3ರಂದು ಕೇರಳಕ್ಕೆ ಮಾನ್ಸೂನ್ ಪ್ರವೇಶ

ಕಳೆದ ಒಂದೆರೆಡು ವಾರಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೇರಳಕ್ಕೆ ಪ್ರವೇಶಿಸಬೇಕಿದ್ದು ಮುಂಗಾರು ಮೂರು ದಿನ ತಡವಾಗಿ ಆಗಮಿಸಲಿದೆ.

ಜೂನ್ 3ರಿಂದ ಕೇರಳದಲ್ಲಿ ಮುಂಗಾರಿನ ಪ್ರವೇಶವಾಗಲಿದೆ. ಇದರ ಪರಿಣಾಮವಾಗಿ ನಾಳೆಯಿಂದ (ಜೂನ್ 1) ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್‌ಎಎಲ್‌ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಜೂನ್ 1ರಿಂದ ರಾಜ್ಯದಲ್ಲಿ ಮಳೆ

ಜೂನ್ 1ರಿಂದ ರಾಜ್ಯದಲ್ಲಿ ಮಳೆ

ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿತ್ತು. ಆದರೆ, ಜೂನ್ 3ರಿಂದ ಕೇರಳದಲ್ಲಿ ಮುಂಗಾರು ಮಳೆಯಾಗಲಿದೆ. ಜೂನ್ 1ರಿಂದ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 ಎಲ್ಲೆಲ್ಲಿ ಮಳೆಯಾಗಲಿದೆ

ಎಲ್ಲೆಲ್ಲಿ ಮಳೆಯಾಗಲಿದೆ

ಕರ್ನಾಟಕದ ಧಾರವಾಡ, ಬೆಳಗಾವಿ, ಗದಗ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಉಳಿದಂತೆ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಇಂದಿನಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.

 ಮಳೆಯ ಆರ್ಭಟ

ಮಳೆಯ ಆರ್ಭಟ

ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.

English summary
A cyclonic circulation is lying over eastcentral Arabian Sea off the Karnataka coast which is likely to meander over the region during the next five days, bringing widespread rain to peninsular India, including Kerala, according to India Meteorological Department (IMD).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X