Chhattisgarh Elections 2023: ಮೋದಿ ಭೇಟಿಗೂ ಮುನ್ನ ಛತ್ತೀಸ್‌ಗಢದಲ್ಲಿ ಮಾರಣಹೋಮ

ಛತ್ತೀಸ್‌ಗಢ,ನವೆಂಬರ್‌ 02: ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ಪ್ರಚಾರಕ್ಕಾಗಿ ಛತ್ತೀಸ್‌ಗಢದ ಕಂಕೇರ್‌ನಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಮುನ್ನವೇ ಛತ್ತೀಸ್‌ಗಢದಲ್ಲಿ ಮಾರಣಹೋಮ ನಡೆದಿದೆ.

ಹೌದು, ಮಹಾರಾಷ್ಟ್ರ ಪೊಲೀಸರ ಮಾಹಿತಿದಾರರು ಎಂಬ ಶಂಕೆಯ ಮೇಲೆ ಛತ್ತೀಸ್‌ಗಢದ ಕಂಕೇರ್‌ ಜಿಲ್ಲೆಯ ಹಳ್ಳಿಯೊಂದರಲ್ಲಿ ಮೂವರು ಗ್ರಾಮಸ್ಥರನ್ನು ನಕ್ಕಲೀಯರು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

Ahead of PM Modi’s visit, Maoists kill 3 in Chhattisgarh’s Kanker

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಗೆ ಹೊಂದಿಕೊಂಡಿರುವ ಛೋಟೆಬೆಥಿಯಾ ಪೊಲೀಸ್‌ ಠಾಣೆ(ಕಂಕೇರ್)‌ ವ್ಯಾಪ್ತಿಯ ಮೋರ್ಖಂಡಿ ಗ್ರಾಯದ ನಿವಾಸಿಗಳಾದ ಕುಲ್ಲೆ ಕಟ್ಲಾಮಿ(35), ಮನೋಜ್‌ ಕೊವಾಚಿ(22) ಮತ್ತು ದುಗ್ಗೆ ಕೊವಾಚಿ(27) ಅವರನ್ನು ನಕ್ಸಲೀಯರು ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಚೋಟ್ಬೆಟಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಮೋರ್ಖಂಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಅಥವಾ ಗುರುವಾರ ಬೆಳಿಗ್ಗೆ ಸಮಯದಲ್ಲಿ ಕೊಲೆ ನಡೆದಿರಬಹುದು ಎಂದು ತಿಳಿದು ಬಂದಿದೆ.

ಇನ್ನೂ ಹತ್ಯೆಯಾದ ಸ್ಥಳದಲ್ಲಿ ಎಸೆದ ಕರಪತ್ರಗಳಲ್ಲಿ, ಈ ಮೂವರು ಮಹಾರಾಷ್ಟ್ರ ಪೊಲೀಸರ ವಿರೋಧಿ ಘಟಕವಾರ ಸಿ-60 ಗೆ ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾವೋವಾದಿಗಳು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ನವೆಂಬರ್ 7 ಮತ್ತು ನವೆಂಬರ್ 17 ರಂದು ಎರಡು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದ್ದು, ಛತ್ತೀಸ್‌ಗಢದ ಕಂಕೇರ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+