ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಚುನಾವಣೆ; ಶರದ್‌ ಪವಾರ್‌ ಮಮತಾ ಬ್ಯಾನರ್ಜಿ ಭೇಟಿ

|
Google Oneindia Kannada News

ನವದೆಹಲಿ, ಜೂ.14: ದಿನೇ ದಿನೇ ರಾಷ್ಟ್ರಪತಿ ಚುನಾವಣೆ ಕಾವು ಏರುತ್ತಿದ್ದು ಇದಕ್ಕೆ ಪೂರಕವಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಚಟುವಟಿಕೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಶರದ್ ಪವಾರ್ ದೆಹಲಿಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ಮಾಡಿದರು.

ಜುಲೈ 18ರ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯ ಆಯ್ಕೆ ಕುರಿತು ಒಮ್ಮತವನ್ನು ಮೂಡಿಸಲು ಮಮತಾ ಬ್ಯಾನರ್ಜಿ ಕರೆದಿರುವ ವಿರೋಧ ಪಕ್ಷದ ಸಭೆಗೆ ಒಂದು ದಿನ ಮೊದಲು ಶರದ್‌ ಮತ್ತು ಮಮತಾ ಭೇಟಿ ಮಾಡಿದರು. ಶರದ್ ಪವಾರ್ ಅವರು ತಮ್ಮ ಭೇಟಿಯ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

 13 ಶಾಸಕರು ಎಸ್‌ಪಿ ಸೇರ್ಪಡೆ ಆಗಲಿದ್ದಾರೆ ಎಂದ ಶರದ್‌ ಪವಾರ್‌! 13 ಶಾಸಕರು ಎಸ್‌ಪಿ ಸೇರ್ಪಡೆ ಆಗಲಿದ್ದಾರೆ ಎಂದ ಶರದ್‌ ಪವಾರ್‌!

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ದೆಹಲಿಯ ನನ್ನ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ನಮ್ಮ ದೇಶಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ನಾವು ವಿವರವಾದ ಚರ್ಚೆ ನಡೆಸಿದ್ದೇವೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ವಿರೋಧ ಪಕ್ಷದ ಸಭೆಗಾಗಿ ಮಮತಾ ಬ್ಯಾನರ್ಜಿ ಮಂಗಳವಾರ ಮಧ್ಯಾಹ್ನ ದೆಹಲಿಗೆ ಬಂದರು. ಆದರೆ ಅವರ ನಿವಾಸಕ್ಕೆ ಹೋಗುವ ಮೊದಲು ಶರದ್ ಪವಾರ್ ಅವರನ್ನು ಭೇಟಿ ಮಾಡಿದರು. ಮಮತಾ ಬ್ಯಾನರ್ಜಿ ಸುಮಾರು 22 ಪಕ್ಷಗಳನ್ನು ಸಭೆಗೆ ಕರೆದಿದ್ದಾರೆ.

Ahead of Presidential Election: Mamata Banerjee meets Sharad Pawar

ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೇವಾಲಾ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ. ಶರದ್‌ ಪವಾರ್ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಎನ್‌ಸಿಪಿ ಈಗಾಗಲೇ ತೆರೆ ಎಳೆದಿದೆ.

ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಎನ್‌ಸಿಪಿ ಸಭೆಯಲ್ಲಿ ಶರದ್‌ ಅವರು, "ನಾನು ರೇಸ್‌ನಲ್ಲಿ ಇಲ್ಲ, ನಾನು ರಾಷ್ಟ್ರಪತಿ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗುವುದಿಲ್ಲ" ಎಂದು ಹೇಳಿದ್ದರು. ರಾಷ್ಟ್ರಪತಿ ಅಭ್ಯರ್ಥಿಯಾಗಿ ಪವಾರ್ ಅವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿದ ನಂತರ ಹಲವಾರು ಸುದ್ದಿಗಳು ಹಬ್ಬಿದ್ದವು.

Ahead of Presidential Election: Mamata Banerjee meets Sharad Pawar

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ವಾರ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರನ್ನು ಅವರ ಮುಂಬೈ ಮನೆಯಲ್ಲಿ ಸೋನಿಯಾ ಗಾಂಧಿಯವರ ಸಂದೇಶದೊಂದಿಗೆ ಭೇಟಿಯಾಗಿದ್ದರು. ಆದರೆ ಎನ್‌ಸಿಪಿಯ ಶರದ್‌ ಪವಾರ್ ಇದನ್ನು ತಿರಸ್ಕರಿಸಿದ್ದಾರೆ ಎಂಬ ಸುದ್ದಿ ಇದೆ.

ಶರದ್‌ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆಂದು ನಾನು ಭಾವಿಸುವುದಿಲ್ಲ. ಪವಾರ್ ಜನರನ್ನು ಭೇಟಿಯಾಗಲು ಇಷ್ಟಪಡುವ ಜನರ ವ್ಯಕ್ತಿ. ಅವರು ರಾಷ್ಟ್ರಪತಿ ಭವನಕ್ಕೆ ತಮ್ಮನ್ನು ತಾವು ಸೀಮಿತಗೊಳಿಸಿಕೊಳ್ಳುವುದಿಲ್ಲ ಎಂದು ಎನ್‌ಸಿಪಿ ನಾಯಕರೊಬ್ಬರು ಹೇಳಿದ್ದಾರೆ. ಆದಾಗ್ಯೂ, ಶರದ್‌ ಪವಾರ್ ಅವರು ಮುಂದಿನ ರಾಷ್ಟ್ರಪತಿ ಕುರಿತು ವಿರೋಧ ಪಕ್ಷದ ಸಮಾಲೋಚನೆಗಳಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ.

English summary
Ahead of the presidential election Sharad Pawar and West Bengal Chief Minister Mamata Banerjee meeting on June 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X