ಎಐಎಡಿಎಂಕೆ & ಬಿಜೆಪಿ ಮೈತ್ರಿ ಪೀಸ್.. ಪೀಸ್..!
ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುವ ಸಂದರ್ಭದಲ್ಲೇ ಎಐಎಡಿಎಂಕೆ ಇದೀಗ ಶಾಕ್ ಕೊಟ್ಟಿದೆ. ಎನ್‌ಡಿಎ ಮೈತ್ರಿಕೂಟವನ್ನು ಬಿಟ್ಟು ಹೋಗುವ ಜೊತೆಗೆ ಬಿಜೆಪಿ ಜೊತೆ ಇದ್ದ ಮೈತ್ರಿಯನ್ನ ಕಡಿದುಕೊಂಡಿದ್ದಾರೆ ಎಐಎಡಿಎಂಕೆ ನಾಯಕರು. ಈಗ ಅಧಿಕೃತವಾಗಿ ಎಐಎಡಿಎಂಕೆ ನಾಯಕರು ಈ ತೀರ್ಮಾನ ಪ್ರಕಟಿಸಿದ್ದು, ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.
ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವ ಅಣ್ಣಾಮಲೈ ಮತ್ತು ಎಐಎಡಿಎಂಕೆ ನಾಯಕರ ನಡುವೆ ನೇರ ಯುದ್ಧ ಆರಂಭವಾಗಿತ್ತು. ಹೀಗೆ ಎಐಎಡಿಎಂಕೆ ನಾಯಕರು ಬಿಜೆಪಿ ಜೊತೆಗಿನ ಸಂಬಂಧ ಕಡಿದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈ ಬಗ್ಗೆ ಇದೀಗ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷವು ಬಿಜೆಪಿ ಪಕ್ಷದ ಜೊತೆಗಿನ ಇಷ್ಟು ವರ್ಷಗಳ ಸುದೀರ್ಘ ಸ್ನೇಹಕ್ಕೆ ಗುಡ್‌ಬೈ ಹೇಳಿದೆ.

ತೀರ್ಮಾನದ ಹಿಂದಿನ ಕಾರಣ ಏನು?
ಎಐಎಡಿಎಂಕೆ ನಾಯಕರು ತಮ್ಮ ಪಕ್ಷದ ಸಂಸದರು, ಶಾಸಕರು ಹಾಗೂ ನಾಯಕರ ಜೊತೆಗೆ ಜಿಲ್ಲಾ ಮಟ್ಟದ ಸಭೆ ನಡೆಸಿ ಇಂತಹ ಮಹತ್ವದ ತೀರ್ಮಾನ ಘೋಷಿಸಿದ್ದಾರೆ. ಈ ಬೆಳವಣಿಗೆ ದಕ್ಷಿಣದಲ್ಲಿ ಹೆಚ್ಚಿನ ಲೋಕಸಭಾ ಸ್ಥಾನ ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎಗೆ ಭಾರಿ ಹಿನ್ನಡೆ ತಂದಿದೆ. ಎಐಎಡಿಎಂಕೆ ನಾಯಕ ಕೆ.ಪಿ. ಮುನುಸ್ವಾಮಿ ಅವರು ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಮುಖವಾಗಿ ಅಣ್ಣಾಮಲೈ ನಡವಳಿಕೆಯ ಬಗ್ಗೆಯೇ ಎಐಎಡಿಎಂಕೆ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಈ ಮೂಲಕ ಬಿಜೆಪಿ ಮತ್ತು ಎಐಎಡಿಎಂಕೆ ನಾಯಕರು ನಾನೊಂದು ತೀರ, ನೀನೊಂದು ತೀರ ಅಂತಿದ್ದಾರೆ.
ಪಕ್ಷದ ಕಚೇರಿ ಎದುರು ಪಟಾಕಿ, ಸಂಭ್ರಮ!
ಚೆನ್ನೈನ ಎಐಎಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಂಸದರು, ಶಾಸಕರು ಹಾಗೂ ಜಿಲ್ಲಾ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು, ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ಬಗ್ಗೆ ಸರ್ವಾನುಮತದ ನಿರ್ಣಯ ಅಂಗೀಕಾರ ಆಯ್ತು ಎಂದು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕೆ. ಪಿ. ಮುನುಸ್ವಾಮಿ ಅವರು ತಿಳಿಸಿದ್ದಾರೆ. ಹಾಗೇ ಬಿಜೆಪಿ ಜೊತೆ ಮೈತ್ರಿ ಕಡಿದುಕೊಂಡ ನಂತರ ಪಕ್ಷದ ಕಚೇರಿ ಹೊರಗೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಕಿರಿಕ್ ಶುರುವಾಗಿದ್ದು ಎಲ್ಲಿಂದ?
ಎಐಎಡಿಎಂಕೆ, ಬಿಜೆಪಿ ನಾಯಕರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ವಿರುದ್ಧ ಗುಡುಗಲು ಸಿದ್ಧವಾಗಿದ್ದರು. ಆದ್ರೆ ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಆಗಮನದ ಬಳಿಕ ಕಿರಿಕ್ ಶುರುವಾಗಿತ್ತು. ಅದರಲ್ಲೂ ಎಐಎಡಿಎಂಕೆ ಸಂಸ್ಥಾಪಕ ಹಾಗೂ ಚಿತ್ರ ನಟ ಎಂ.ಜಿ.ರಾಮಚಂದ್ರನ್ ಅವರಿಗೆ ಸಿ.ಎನ್.ಅಣ್ಣಾದುರೈ ಅವರು ಮಾರ್ಗದರ್ಶಕರು. ಹೀಗಾಗಿ ಅಣ್ಣಾದುರೈ ಅವರ ಬಗ್ಗೆ ಎಐಎಡಿಎಂಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಗೌರವ ಹೊಂದಿದ್ದಾರೆ. ಇಷ್ಟೆಲ್ಲಾ ಗೊತ್ತಿದ್ದರೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾದ ಕೆ. ಅಣ್ಣಾಮಲೈ ನೀಡುತ್ತಿದ್ದ ಹೇಳಿಕೆಗಳು ಕಿಡಿ ಹೊತ್ತಿಸಿದ್ದವು.
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು, ಅಣ್ಣಾದುರೈ ಬಗ್ಗೆ ವಿವಾದ ಸೃಷ್ಟಿಸುವ ರೀತಿ ಮಾತನಾಡಿದ್ದರು. ಇದು ಎರಡೂ ಪಕ್ಷಗಳ ನಡುವೆ ಕಿಡಿ ಹೊತ್ತಿಸಿತ್ತು. ಈ ಕಿಡಿ ತಣ್ಣಗಾಗಿಸುವ ಬದಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಹೀಗೆ ಸಣ್ಣ ಕಿಡಿಯೇ ಜ್ವಾಲೆಯಾಗಿ ಇದೀಗ ಎಐಎಡಿಎಂಕೆ ಹಾಗೂ ಬಿಜೆಪಿ ಸಂಬಂಧವೇ ಕಡಿದು ಹೋಗುವಂತೆ ಮಾಡಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿಗೆ ಶಾಕ್ ಸಿಕ್ಕಿದೆ. ಈ ಬೆಳವಣಿಗೆ ತಮಿಳುನಾಡಿನಲ್ಲಿ ಡಿಎಂಕೆಗೆ ಸಹಾಯವಾಗುವ ಸಾಧ್ಯತೆ ಇದೆ. ಹಾಗೂ ಬಿಜೆಪಿ ನಾಯಕರಿಗೆ ಇಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಎಐಎಡಿಎಂಕೆ ನಾಯಕರನ್ನು ಸಮಾಧಾನ ಮಾಡುವ ತಂತ್ರಗಳೆಲ್ಲಾ ಕೈಕೊಟ್ಟು ಹೋಗಿವೆ.
-
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications