ಉಚಿತ ಐಪಿಎಲ್ ಟಿಕೆಟ್ ಕೇಳಿದ ಎಐಎಡಿಎಂಕೆ ಶಾಸಕ; 'ಜಯ್ ಶಾರನ್ನು ಕೇಳಿ' ಎಂದ ಉದಯನಿಧಿ!
ಚೆನ್ನೈ, ಏಪ್ರಿಲ್ 12: ಬುಧವಾರ (ಏಪ್ರಿಲ್ 12ರಂದು) ಚೆನ್ನೈನಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 17ನೇ ಪಂದ್ಯವನ್ನು ವೀಕ್ಷಿಸಲು ರಾಜ್ಯ ಸರ್ಕಾರ ಪ್ರತಿಪಕ್ಷದ ಶಾಸಕರಿಗೆ ಉಚಿತವಾಗಿ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿರುವ ಘಟನೆ ನಡೆದಿದೆ. ತಮಿಳುನಾಡು ವಿಧಾನಸಭೆ ಅಧಿವೇಶನದಲ್ಲಿ ಎಐಎಡಿಎಂಕೆ) ಶಾಸಕ ಎಸ್‌ಪಿ ವೇಲುಮಣಿ ಈ ಬೇಡಿಕೆಯಿಟ್ಟಿದ್ದಾರೆ.
ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಶಾಸಕ ಎಸ್‌ಪಿ ವೇಲುಮಣಿ, ಎಐಎಡಿಎಂಕೆ ಅಧಿಕಾರದಲ್ಲಿದ್ದಾಗ ಶಾಸಕರಿಗೆ ಪಂದ್ಯದ ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿತ್ತು. ಹೀಗಾಗಿ ರಾಜ್ಯದಲ್ಲಿಪ್ರತಿಪಕ್ಷದ ಶಾಸಕರಿಗೆ ಉಚಿತ ಐಪಿಎಲ್ ಟಿಕೆಟ್ ನೀಡುವಂತೆ ತಮಿಳುನಾಡು ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಕೇಳಿದ್ದಾರೆ.

ವಿಧಾನಸಭೆಯ ಮಹಡಿಯಲ್ಲಿ ಮಾತನಾಡಿದ ಶಾಸಕ ಎಸ್‌ಪಿ ವೇಲುಮಣಿ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವು ಐಪಿಎಲ್ ಪಂದ್ಯಗಳಿಗೆ 400 ಟಿಕೆಟ್‌ಗಳನ್ನು ಪಡೆದಿದೆ. ಆದರೆ ವಿರೋಧ ಪಕ್ಷದ ಶಾಸಕರಿಗೆ ಒಂದೇ ಒಂದು ಟಿಕೆಟ್ ನೀಡಲಿಲ್ಲ ಎಂದು ಕಿಡಿಕಾರಿದ್ದಾರೆ. ಬುಧವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ.
ಪ್ರತಿಪಕ್ಷದ ಶಾಸಕ ವೇಲುಮಣಿಗೆ ಉತ್ತರಿಸಿದ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರನ್ನು ಸಂಪರ್ಕಿಸಲು ಹೇಳಿದ್ದಾರೆ. "ಬಿಸಿಸಿಐ ಕಾರ್ಯದರ್ಶಿ ನಿಮ್ಮ ಆಪ್ತ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರೇ ಆಗಿದ್ದಾರೆ. ನೀವು ಅವರೊಂದಿಗೆ ಮಾತನಾಡುವುದು ಉತ್ತಮ" ಎಂದು ಲೇವಡಿ ಮಾಡಿದ್ದಾರೆ.
ಮುಂದುವರೆದು ಮಾತನಾಡಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್, "ಅವರು (ಜಯ್ ಶಾ) ನಮ್ಮ ಮಾತನ್ನು ಕೇಳುವುದಿಲ್ಲ. ನೀವು ಅವರೊಂದಿಗೆ ಮಾತನಾಡಿ ಮತ್ತು ನಮ್ಮ ಶಾಸಕರಿಗೆ ತಲಾ ಐದು ಟಿಕೆಟ್‌ಗಳನ್ನು ಪಡೆಯುವುದು ಉತ್ತಮ" ಎಂದು ಹೇಳಿದ್ದಾರೆ. ಅಲ್ಲದೆ ತಮ್ಮ ಕ್ಷೇತ್ರದ ಕ್ರೀಡಾ ಪಟುಗಳಿಗೆ 150 ಟಿಕೆಟ್ ಗಾಗಿ ಹಣ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಇದೇ ವೇಳೆ ವಿರೋಧ ಪಕ್ಷದವರನ್ನು ತರಾಟೆಗೆ ತೆಗೆದುಕೊಂಡ ಸಚಿವ ಉದಯನಿಧಿ ಸ್ಟಾಲಿನ್, ''ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯಗಳಿಗೆ ಶಾಸಕರಿಗೆ ಐಪಿಎಲ್ ಟಿಕೆಟ್ ನೀಡಿದ್ದೇವೆ ಎಂದು ಇಲ್ಲಿನ ಎಐಎಡಿಎಂಕೆ ನಾಯಕರು ಹೇಳಿದ್ದಾರೆ. ಆದರೆ ಕಳೆದ ನಾಲ್ಕು ವರ್ಷಗಳಲ್ಲಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಪಕ್ಷವು ಯಾರಿಗೆ ಟಿಕೆಟ್ ಖರೀದಿಸಿದೆ ಎಂಬುದರ ಬಗ್ಗೆ ನನಗೆ ಆಶ್ಚರ್ಯವಾಗಿದೆ" ಎಂದು ವ್ಯಂಗ್ಯವಾಡಿದ್ದಾರೆ.
ಉದಯನಿಧಿ ಅವರು ತಮ್ಮ ಚೆಪಾಕ್-ತಿರುವೇಲಿಕೇಣಿ ಕ್ಷೇತ್ರದ 150 ಉದಯೋನ್ಮುಖ ಕ್ರಿಕೆಟಿಗರಿಗಾಗಿ ಪಂದ್ಯಗಳನ್ನು ವೀಕ್ಷಿಸಲು ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿ ಟಿಕೆಟ್ ಖರೀದಿಸಿದ್ದಾರೆ. ಇನ್ನು, ಎಐಎಡಿಎಂಕೆಯ ಮಿತ್ರಪಕ್ಷ, ಪಿಎಂಕೆ ಶಾಸಕ ಎಸ್‌ಪಿ ವೆಂಕಟೇಶ್ವರನ್, ಚೆನ್ನೈ ಸೂಪರ್ ಕಿಂಗ್ಸ್ ಅನ್ನು ನಿಷೇಧಿಸಬೇಕು ಎಂಬ ಬೇಡಿಕೆಯಿಟ್ಟಿದ್ದಾರೆ.
"ರಾಜ್ಯದಲ್ಲಿ ಹಲವಾರು ಪ್ರತಿಭಾವಂತ ಆಟಗಾರರಿದ್ದಾರೆ, ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅವರಿಗೆ ಐಪಿಎಲ್‌ನಲ್ಲಿ ಆಡಲು ಅವಕಾಶ ನೀಡಿಲ್ಲ. ಈ ತಂಡದಲ್ಲಿ ರಾಜ್ಯದಿಂದ ಯಾವುದೇ ಸ್ಥಳೀಯ ಆಟಗಾರರು ಇಲ್ಲ. ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ನಿಷೇಧಿಸಬೇಕು" ಎಂದು ಪಿಎಂಕೆ ಶಾಸಕ ಎಸ್‌ಪಿ ವೆಂಕಟೇಶ್ವರನ್ ಒತ್ತಾಯಿಸಿದ್ದಾರೆ.
ಚೆನ್ನೈನಲ್ಲಿ ನಡೆಯುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 17ನೇ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡಗಳು ಸೆಣಸಾಡಲಿವೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕರಾಗಿ ಎಂಎಸ್ ಧೋನಿ 200ನೇ ಪಂದ್ಯವನ್ನು ತಂಡದ ತವರಿನ ಅಭಿಮಾನಿಗಳ ಎದುರು ಆಡಲಿದ್ದು, ಸಿಎಸ್‌ಕೆ ನಾಯಕ ಎಂಎಸ್ ಧೋನಿ ಅವರಿಗೆ ಈ ಪಂದ್ಯ ಬಹಳ ವಿಶೇಷವಾಗಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications