ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಾವು ಎಐಸಿಸಿ ಚುನಾವಣೆಗೆ ಸ್ಪರ್ಧಿಸಿದ್ದು ಏಕೆ: ಖರ್ಗೆ ಹೇಳಿದ ಆ ದಿನದ ಸೀಕ್ರೆಟ್!

|
Google Oneindia Kannada News

ಮುಂಬೈ, ಅಕ್ಟೋಬರ್ 11: "ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಪಕ್ಷವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದಾರೆ.

ತಾವು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿಟ್ಟಿದ್ದು, ಎಲ್ಲರೊಂದಿಗೆ ಸೇರಿಕೊಂಡು ಕೆಲಸ ಮಾಡುವುದರ ಮೂಲಕ ಪಕ್ಷವನ್ನು ಮತ್ತಷ್ಟು ಎತ್ತರಕ್ಕೆ ತಗೆದುಕೊಂಡು ಹೋಗುವುದಾಗಿ ಸೋಮವಾರ ಹೇಳಿದ್ದಾರೆ. ಸೋಮವಾರ ಆಗಮಿಸಿದ ಖರ್ಗೆ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಭೂಪೇನ್ ಬೋರಾ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದೇಬಬ್ರತ ಸೈಕಿಯಾ, ಲೋಕಸಭೆ ಸಂಸದರಾದ ಗೌರವ್ ಗೊಗೊಯ್ ಮತ್ತು ಅಬ್ದುಲ್ ಖಲೀಕ್ ಮತ್ತು ಇತರ ಹಿರಿಯ ರಾಜ್ಯ ನಾಯಕರು ಸ್ವಾಗತಿಸಿದರು.

"ಗಾಂಧಿ ಕುಟುಂಬಕ್ಕೆ ನಾನ್ ಬೇರೆ ಅಲ್ಲ, ಖರ್ಗೆ ಬೇರೆ ಅಲ್ಲ": ತರೂರ್ ಮಾತಿನ ಸೀಕ್ರೆಟ್ ಏನು!?

ಮೊದಲ ಬಾರಿಗೆ ಮಣಿಪುರ, ತ್ರಿಪುರ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್ ಮತ್ತು ಮೇಘಾಲಯದ ಕಾಂಗ್ರೆಸ್ ನಾಯಕರನ್ನು ಮಲ್ಲಿಕಾರ್ಜುನ್ ಖರ್ಗೆ ಭೇಟಿ ಮಾಡಿ ಅವರೊಂದಿಗೆ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈಶಾನ್ಯ ಭಾಗದ ಕಾಂಗ್ರೆಸ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ್ ಖರ್ಗೆ, 'ಉದಯಪುರ ಘೋಷಣೆ'ಯನ್ನು ಜಾರಿಗೆ ತರುವುದು ಮತ್ತು ಮಹಿಳೆಯರು ಮತ್ತು ಸೇರಿದವರನ್ನು ಒಳಗೊಂಡಂತೆ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಒಬಿಸಿಗಳು, ಎಸ್ಸಿಗಳು ಮತ್ತು ಎಸ್ಟಿ ಸಮುದಾಯದ ಜನರನ್ನು ಪಕ್ಷಕ್ಕೆ ನೇಮಿಸುವ ಮೂಲಕ ಪಕ್ಷದಲ್ಲಿ 'ಹೊಸ ರಕ್ತ'ಕ್ಕೆ ಆದ್ಯತೆ ನೀಡುವುದೇ ತಮ್ಮ ಪ್ರಾಥಮಿಕ ಗುರಿ ಎಂದು ಹೇಳಿದ್ದಾರೆ.

ಮಲ್ಲಿಕಾರ್ಜುನ್ ಖರ್ಗೆಯಿಂದ ಸಾಮೂಹಿಕ ನಾಯಕತ್ವ ಜಪ

ಮಲ್ಲಿಕಾರ್ಜುನ್ ಖರ್ಗೆಯಿಂದ ಸಾಮೂಹಿಕ ನಾಯಕತ್ವ ಜಪ

"ನನಗೆ ಸಮಾಲೋಚನೆ ಮತ್ತು ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆ ಇದೆ. ಜನರು ನನ್ನನ್ನು ಹಿಂಬಾಲಿಸುವುದರಲ್ಲಿ ನನಗೆ ನಂಬಿಕೆ ಇಲ್ಲ, ಆದರೆ ಅವರು ನನ್ನ ಪಕ್ಕದಲ್ಲಿ ನಡೆಯಬೇಕೆಂದು ನಾನು ಬಯಸುತ್ತೇನೆ. ಒಟ್ಟಾಗಿ ನಾವು ಪಕ್ಷದ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುತ್ತೇವೆ," ಎಂದು ಎಐಸಿಸಿ ಅಧ್ಯಕ್ಷ ಚುನಾವಣೆಯ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಸೋನಿಯಾ ಗಾಂಧಿಯವರು ಹೇಳಿದ ಮಾತನ್ನು ಉಲ್ಲೇಖಿಸಿದ ಖರ್ಗೆ

ಸೋನಿಯಾ ಗಾಂಧಿಯವರು ಹೇಳಿದ ಮಾತನ್ನು ಉಲ್ಲೇಖಿಸಿದ ಖರ್ಗೆ

ಸ್ವತಃ ಸೋನಿಯಾ ಗಾಂಧಿ ಅವರೇ ತಮ್ಮನ್ನು ಮನೆಗೆ ಕರೆಸಿಕೊಂಡು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸುವಂತೆ ಕೇಳಿಕೊಂಡಿದ್ದರು ಎಂದು ಖರ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಚುನಾವಣೆಗಾಗಿ ನಾನು ಮೂರು ಹೆಸರುಗಳನ್ನು ಸೂಚಿಸಬಹುದು ಎಂದು ಅವರಿಗೆ ಹೇಳಿದೆ. ಆದರೆ ಅವರು ಹೆಸರುಗಳನ್ನು ಕೇಳುತ್ತಿಲ್ಲ ಬದಲಿಗೆ ಪಕ್ಷವನ್ನು ಮುನ್ನಡೆಸಲು ನನ್ನನ್ನು ಕೇಳಿದರು ಎಂದು ಸಂಸದ ಮಲ್ಲಿಕಾರ್ಜುನ್ ಖರ್ಗೆ ಉಲ್ಲೇಖಿಸಿದರು.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿದ್ದೇಕೆ ಖರ್ಗೆ?

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸ್ಪರ್ಧಿಸಿದ್ದೇಕೆ ಖರ್ಗೆ?

''ಗಾಂಧಿ ಕುಟುಂಬದ ಯಾವುದೇ ಸದಸ್ಯರು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಿಲ್ಲದ ಕಾರಣ ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಕೊಂಡಿರುವುದಾಗಿ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿನ ಭರವಸೆ ನೀಡಿದ್ದರಿಂದ ಈ ಸ್ಪರ್ಧೆಯನ್ನು ನಡೆಸಲಾಗುತ್ತಿದ್ದು, ಪಕ್ಷದ ಪ್ರತಿನಿಧಿಗಳು ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ," ಎಂದು ಅವರು ಹೇಳಿದರು.

ಒಗ್ಗಟ್ಟಿನ ಮೂಲಕ ಬಿಜೆಪಿ ವಿರುದ್ಧ ಕೈ ರಣತಂತ್ರ

ಒಗ್ಗಟ್ಟಿನ ಮೂಲಕ ಬಿಜೆಪಿ ವಿರುದ್ಧ ಕೈ ರಣತಂತ್ರ

"ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ದೇಶ ಮತ್ತು ಪ್ರತಿಪಕ್ಷಗಳನ್ನು ವಿಭಜಿಸುವುದೇ ಬಿಜೆಪಿ ಮುಖ್ಯ ಉದ್ದೇಶವಾಗಿದೆ. ಈ ಹಂತದಲ್ಲಿ ಬಿಜೆಪಿ ವಿರುದ್ಧ ಹೋರಾಟದಲ್ಲಿ ಪಕ್ಷದ ಸದಸ್ಯರು ಒಗ್ಗಟ್ಟಾಗಿರಬೇಕು. 'ಈ ಹಿಂದೆ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಮುಂದಿಟ್ಟಿದ್ದ ಜವಾಹರಲಾಲ್ ನೆಹರೂ ಪರಂಪರೆಯನ್ನು ಕಾಂಗ್ರೆಸ್ ರಕ್ಷಿಸಬೇಕಿದೆ. 20 ವರ್ಷಗಳ ಕಾಲ ಪಕ್ಷದ ಚುಕ್ಕಾಣಿ ಹಿಡಿದ ನಂತರ ಜ್ಞಾನ ಮತ್ತು ಅನುಭವ ಹೊಂದಿರುವ ಸೋನಿಯಾ ಗಾಂಧಿ ಅವರ ಮಾತನ್ನು ಕೇಳುವುದು ನಮ್ಮ ಕರ್ತವ್ಯ ಎಂದು ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ.

ಅಕ್ಟೋಬರ್ 19ರಂದು ಎಐಸಿಸಿ ಅಧ್ಯಕ್ಷರ ಭವಿಷ್ಯ ನಿರ್ಧಾರ

ಅಕ್ಟೋಬರ್ 19ರಂದು ಎಐಸಿಸಿ ಅಧ್ಯಕ್ಷರ ಭವಿಷ್ಯ ನಿರ್ಧಾರ

ಭಾರತದಲ್ಲಿ ಬರೋಬ್ಬರಿ 26 ವರ್ಷಗಳ ನಂತರದಲ್ಲಿ ಮೊದಲ ಬಾರಿಗೆ ದಕ್ಷಿಣ ಭಾರತದ ನಾಯಕರಿಗೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರ ಸ್ಥಾನ ಒಲಿದು ಬರುತ್ತಿದೆ. ಕರ್ನಾಟಕದ ಮಲ್ಲಿಕಾರ್ಜುನ್ ಖರ್ಗೆ ಅಥವಾ ಕೇರಳದ ಶಶಿ ತರೂರ್ ನಡುವೆೆ ಪೈಪೋಟಿ ನಡೆಯುತ್ತಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯಲಿರುವ ಚುನಾವಣೆಗೆ ಹೈಕಮಾಂಡ್ ಬೆಂಬಲಿತ ಅಭ್ಯರ್ಥಿ ಆಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸಿದರೆ, ಕೇರಳದ ಶಶಿ ತರೂರ್ ಪ್ರತಿಸ್ಪರ್ಧಿ ಆಗಿ ಕಣಕ್ಕೆ ಇಳಿದಿದ್ದಾರೆ. ಇಬ್ಬರು ಅಭ್ಯರ್ಥಿಗಳು ಸೆಪ್ಟೆಂಬರ್ 30ರಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯು ಅಕ್ಟೋಬರ್ 17ರಂದು ನಡೆಯಲಿದ್ದು, ಫಲಿತಾಂಶವು ಅಕ್ಟೋಬರ್ 19ರಂದು ಹೊರ ಬೀಳಲಿದೆ. ಒಟ್ಟು 9100 ಕಾಂಗ್ರೆಸ್ ನಾಯಕರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದು, ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ.

English summary
AICC Chief Election: Mallikarjun Kharge want to Take congress party to new heights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X