ಸೋನಿಯಾ ಗಾಂಧಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ನವದೆಹಲಿ, ಡಿ.19 : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಉಸಿರಾಟದ ಸೋಂಕಿನ ಸಮಸ್ಯೆಯಿಂದಾಗಿ ಗುರುವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಸೋನಿಯಾ ಗಾಂಧಿ ಅವರನ್ನು ನವದೆಹಲಿಯ ಶ್ರೀ ಗಂಗಾರಾಮ್ ಆಸ್ಪತ್ರೆಗೆ ಗುರುವಾರ ರಾತ್ರಿ 8.30ರ ಸುಮಾರಿಗೆ ದಾಖಲು ಮಾಡಲಾಗಿದೆ. ಉಸಿರಾಟಕ್ಕೆ ಸಂಬಂಧಿಸಿದ ಸೋಂಕಿಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಯ್ ಮಾಕನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕೆಲವು ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ, ಅವರಿಗೆ ಏನು ಸಮಸ್ಯೆ ಇದೆ ಎಂಬುದು ಈವರೆಗೂ ಬಹಿರಂಗಗೊಂಡಿಲ್ಲ. ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗಂಗಾರಾಮ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. [ಪಿಟಿಐ ಚಿತ್ರ]
ಡಿ. 9ರಂದು ಸೋನಿಯಾ ಗಾಂಧಿ ಅವರ 68ನೇ ಹುಟ್ಟು ಹಬ್ಬ. ಪ್ರಧಾನಿ ನರೇಂದ್ರ ಮೋದಿ ಅವರು ಸೋನಿಯಾ ಗಾಂಧಿ ಅವರಿಗೆ ಟ್ವಿಟರ್ ಮೂಲಕ ಶುಭಾಶಯ ಕೋರಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ದಾಳಿ ಮತ್ತು ಛತ್ತೀಸ್‌ಗಢ್‌ನಲ್ಲಿ ನಡೆದ ನಕ್ಸಲರ ದಾಳಿ ಹಿನ್ನಲೆಯಲ್ಲಿ ಸೋನಿಯಾ ಗಾಂಧಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರಲಿಲ್ಲ.[ಸೋನಿಯಾಗೆ ಶುಭಾಶಯ ಹೇಳಿದ ಮೋದಿ]












Click it and Unblock the Notifications